ಮಂಗಳೂರು: ಯುವಕನೋರ್ವನ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳ ತಂಡ ಚಾಕು ಇರಿದು ಕೊಲೆಗೈದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಬಳಿ ನಡೆದಿದೆ. ಸುರತ್ಕಲ್ ‌ಮಂಗಲಪೇಟೆಯಲ್ಲಿ ಫಾಝಿಲ್‌ ಎಂಬಾತನಿಗೆ ದುಷ್ಕರ್ಮಿಗಳು ಚಾಕು ಇರಿದು ಕೊಂದಿದ್ದಾರೆ. ಈ ಬೆನ್ನಲ್ಲೇ ಜಿಲ್ಲಾಧಿಕಾರಿ ಮಂಗಳೂರು ವಲಯದ ಕೆಲ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಸುರತ್ಕಲ್ ನಲ್ಲಿ ನಾಲ್ವರು ದುಷ್ಕರ್ಮಿಗಳಿಂದ ಯುವಕನ ಬರ್ಬರ ಹತ್ಯೆ


ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಇಂದು ಸುರತ್ಕಲ್, ಬಜ್ಪೆ, ಮುಲ್ಕಿ, ಪಣಂಬೂರು ಪೊಲೀಸ್ ಠಾಣೆ ವ್ಯಾಪ್ತಿಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ. 


ಇನ್ನು ಮಂಗಳೂರಿನ ಬಜ್ಪೆ, ಪಣಂಬೂರು, ಮುಲ್ಕಿ, ಸುರತ್ಕಲ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಪೊಲೀಸ್‌ ಕಮಿಷನರ್‌ ಆದೇಶ ಹೊರಡಿಸಿದ್ದಾರೆ. “ಫಾಜಿಲ್ ಕೊಲೆಗೆ ಸೂಕ್ತ ಕಾರಣ ತಿಳಿದು ಬಂದಿಲ್ಲ. ತನಿಖೆ ಬಳಿಕವೇ ಫಾಜಿಲ್ ಹತ್ಯೆಗೆ ಕಾರಣ ತಿಳಿದು ಬರಲಿದೆ” ಎಂದು ಮಂಗಳೂರು ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.


ನಗರದ ಹೊರವಲಯದ ಮೂಡ ಮಾರುಕಟ್ಟೆ ಸಮೀಪ ಕಳೆದ ದಿನ ನಡೆದ ಬಟ್ಟೆ ಅಂಗಡಿಯಲ್ಲಿದ್ದ ಯುವಕನ ಮೇಲೆ ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ಮಾರಕಾಸ್ತ್ರಗಳಿಂದ ದಾಳಿ ಮಾಡಿತ್ತು. ಗಂಭೀರವಾಗಿ ಗಾಯಗೊಂಡ ಯುವಕನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದರೂ ಸಹ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ. ಮೃತನನ್ನು ಸುರತ್ಕಲ್ ಮಂಗಳಪೇಟೆ ನಿವಾಸಿ ಮುಹಮ್ಮದ್ ಫಾಝಿಲ್ ಎಂದು ಗುರುತಿಸಲಾಗಿದೆ.


ಸುರತ್ಕಲ್‌ನ ಬೀಜೇಶ್‌ ಜವಳಿ ಅಂಗಡಿಯ ಮುಂಭಾಗ ಇಂದು ರಾತ್ರಿ ಈ ಘಟನೆ ನಡೆದಿದೆ. ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ  ಮುಹಮ್ಮದ್ ಫಾಝಿಲ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ ಪೊಲೀಸ್‌ ಕಮಿಷನರ್‌ ಶಶಿಕುಮಾರ್‌ ಅವರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ. 


ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿಗಳಿಗೆ ಆ.11ರವರೆಗೆ ನ್ಯಾಯಾಂಗ ಬಂಧನ


ಇನ್ನೊಂದೆಡೆ ಸುರತ್ಕಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ 10 ರಿಂದ ರಾತ್ರಿ 11ರವರೆಗೆ ಮದ್ಯ ಮಾರಾಟ ಮಾಡಬಾರದೆಂದು ಮಂಗಳೂರು ಪೊಲೀಸ್ ಕಮಿಷನರ್ ಸೂಚನೆ ನೀಡಿದ್ದಾರೆ. 


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.