ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಅನರ್ಹ ಶಾಸಕರು

ಅನರ್ಹಗೊಂಡ 17 ಕಾಂಗ್ರೆಸ್- ಜೆಡಿ (ಎಸ್) ಶಾಸಕರು ಡಿಸೆಂಬರ್ 5 ರ ಉಪ ಚುನಾವಣೆಯಲ್ಲಿ ರಾಜ್ಯದ 15 ಸ್ಥಾನಗಳಿಗೆ ಸ್ಪರ್ಧಿಸಲು ಸುಪ್ರೀಂಕೋರ್ಟ್ ಬುಧವಾರ ಅವಕಾಶ ಮಾಡಿಕೊಟ್ಟ ಹಿನ್ನಲೆಯಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

Updated: Nov 14, 2019 , 02:29 PM IST
 ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾದ ಅನರ್ಹ ಶಾಸಕರು
Photo courtesy: ANI

ಬೆಂಗಳೂರು: ಅನರ್ಹಗೊಂಡ 17 ಕಾಂಗ್ರೆಸ್- ಜೆಡಿ (ಎಸ್) ಶಾಸಕರು ಡಿಸೆಂಬರ್ 5 ರ ಉಪ ಚುನಾವಣೆಯಲ್ಲಿ ರಾಜ್ಯದ 15 ಸ್ಥಾನಗಳಿಗೆ ಸ್ಪರ್ಧಿಸಲು ಸುಪ್ರೀಂಕೋರ್ಟ್ ಬುಧವಾರ ಅವಕಾಶ ಮಾಡಿಕೊಟ್ಟ ಹಿನ್ನಲೆಯಲ್ಲಿ ಅಧಿಕೃತವಾಗಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಇಂದು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಉಪ ಮುಖ್ಯಮಂತ್ರಿ ಅಶ್ವತ್ ನಾರಾಯಣ್ ಅವರ ಸಮ್ಮುಖದಲ್ಲಿ ಪಕ್ಷಕ್ಕೆ ಸೇರಿದರು. ಈ ಸಂದರ್ಭದಲ್ಲಿ ಸಿಎಂ ಬಿಎಸ್ವೈ ಅವರನ್ನು ಬರಮಾಡಿಕೊಂಡರು. ಬುಧುವಾರದಂದು ಸುಪ್ರೀಂಕೋರ್ಟ್ ಅನರ್ಹ ಶಾಸಕರಿಗೆ ರಾಜ್ಯದಲ್ಲಿ ನಡೆಯಲಿರುವ ಉಪ ಚುನಾವಣೆಗೆ ಸ್ಪರ್ಧಿಸಲು ಅವಕಾಶ ನೀಡಿದ್ದರಿಂದಾಗಿ ಅನರ್ಹರೆಲ್ಲರೂ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು.

ಈ ಹಿಂದಿನ ಸ್ಪೀಕರ್ ಕೆ ಆರ್ ರಮೇಶ್ ಕುಮಾರ್ ಅವರು 17 ಕಾಂಗ್ರೆಸ್-ಜೆಡಿ (ಎಸ್) ಶಾಸಕರನ್ನು ಅನರ್ಹಗೊಳಿಸಿದ್ದನ್ನು ಸುಪ್ರೀಂಕೋರ್ಟ್ ಬುಧವಾರದಂದು ಎತ್ತಿಹಿಡಿದಿತ್ತು. ಆದರೆ 2023 ರವರೆಗೆ ಅಂದರೆ 15 ನೇ ಕರ್ನಾಟಕ ವಿಧಾನಸಭೆಯ ಅಂತ್ಯದವರೆಗೆ ಶಾಸಕರನ್ನು ಅನರ್ಹಗೊಳಿಸಲಾಗಿದೆ ಎನ್ನುವ ಅಂದಿನ ಸ್ಪೀಕರ್ ಆದೇಶದ ಭಾಗವನ್ನು ಸುಪ್ರೀಂಕೋರ್ಟ್ ತಿರಸ್ಕರಿಸಿತ್ತು. ಆ ಮೂಲಕ ಅನರ್ಹ ಶಾಸಕರಿಗೆ ಡಿಸೆಂಬರ್ 5 ರಂದು ರಾಜ್ಯದಲ್ಲಿ ನಡೆದ ಉಪಚುನಾವಣೆಯಲ್ಲಿ ಸ್ಪರ್ಧಿಸಲು ಅವರಿಗೆ ಅವಕಾಶ ಕಲ್ಪಿಸಿತು.