ಬೆಂಗಳೂರು: ಚಿಕ್ಕಮಗಳೂರು ತಾಲೂಕಿನ ಆಲ್ದೂರು ಅರಣ್ಯ ವಲಯದಲ್ಲಿ ಕಾಡಾನೆ ದಾಳಿಗೆ ಬಲಿಯಾದ ಕಾರ್ಮಿಕ ಮಹಿಳೆಯ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ 15 ಲಕ್ಷ ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಬುಧವಾರ ಟ್ವೀಟ್ ಮಾಡಿ ಮಾಹಿತಿ ನೀಡಿರುವ ಸಿಎಂ ಸಿದ್ದರಾಮಯ್ಯ, ‘ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆಯ ಹೆಡದಾಳು ಬಳಿ ಇಂದು ಬೆಳಗ್ಗೆ ಕಾಡಾನೆ ದಾಳಿಗೆ ತುತ್ತಾಗಿ ವೀಣಾ ಎಂಬ ಮಹಿಳೆ ಮೃತಪಟ್ಟಿರುವುದು ದುರದೃಷ್ಟಕರ. ಮೃತರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ. ಕೂಡಲೇ ಮೃತರ ಕುಟುಂಬಕ್ಕೆ 15 ಲಕ್ಷ ರೂ. ಪರಿಹಾರ ನೀಡಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’ ಎಂದು ಹೇಳಿದ್ದಾರೆ.


ಇದನ್ನೂ ಓದಿ: ಯಾದಗಿರಿಯಲ್ಲಿ ಪ್ರತಿವರ್ಷ ನಡೆಯಲಿದೆ ಜಿಲೇಬಿ ಜಾತ್ರೆ


2 ತಿಂಗಳಲ್ಲಿ ಕಾಡಾನೆ ದಾಳಿಗೆ 2ನೇ ಬಲಿ!


ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಾಡಾನೆ ಹಾವಳಿ ನಿಲ್ಲುತ್ತಿಲ್ಲ. ಬುಧವಾರ ಬೆಳಗ್ಗೆ ಕಾಡಾನೆ ತುಳಿದು ಕಾರ್ಮಿಕ ಮಹಿಳೆ ವೀಣಾ(45) ಸಾವನ್ನಪ್ಪಿದ್ದಾರೆ. ಆಲ್ದೂರು ಸಮೀಪದ ಹೆಡದಾಳು ಗ್ರಾಮದಲ್ಲಿ ಈ ಘಟನೆ ನಡೆದಿತ್ತು. ಕಳೆದ 2 ತಿಂಗಳಲ್ಲಿ ಕಾಡಾನೆ ದಾಳಿಗೆ 2ನೇ ಬಲಿಯಾಗಿದೆ. ಕಾಫಿ ತೋಟದ ಕೆಲಸಕ್ಕೆ ಹೋಗುವಾಗ ಈ ಘಟನೆ ನಡೆದಿದೆ.


ಕಾಫಿ ನಾಡಿನಲ್ಲಿ ಕಾಡಾನೆ ದಾಳಿಗೆ ಕಾರ್ಮಿಕ ಮಹಿಳೆ ಬಲಿ..!


ನಯನಾ ಮೋಟಮ್ಮ ಭೇಟಿ


ಕಳೆದ 2 ತಿಂಗಳಲ್ಲಿ ಕಾಡಾನೆ ದಾಳಿಗೆ ಇಬ್ಬರು ಬಲಿಯಾಗಿರುವ ಹಿನ್ನೆಲೆ ರಾಜ್ಯ ಹೆದ್ದಾರಿ ತಡೆದು ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚಿಕ್ಕಮಗಳೂರು-ಶೃಂಗೇರಿ ಮಾರ್ಗದ ರಸ್ತೆ ಮಧ್ಯೆ ಪ್ರತಿಭಟನೆ ನಡೆಸಿ ಅರಣ್ಯ ಇಲಾಖೆ ವಿರುದ್ಧ ಕಿಡಿಕಾರಿದ್ದಾರೆ. ಸ್ಥಳಕ್ಕೆ ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ಭೇಟಿ ನೀಡಿದ್ದಾರೆ. ಈ ವೇಳೆ ಶಾಸಕರ ಎದುರು ಅರಣ್ಯ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


2 ತಿಂಗಳ ಹಿಂದೆ ಅರೆನೂರು ಬಳಿ ಚಿನ್ನಿ ಎಂಬುವರು ಕಾಡಾನೆ ದಾಳಿಗೆ ಬಲಿಯಾಗಿದ್ದರು. ಇದೀಗ 45 ವರ್ಷದ ವೀಣಾ ಸಾವನ್ನಪ್ಪಿದ್ದಾರೆ. ನಿಮಗೆ ಇನ್ನೆಷ್ಟು ಬಲಿ ಬೇಕು? ಎಂದು ಚಿಕ್ಕಮಗಳೂರು ತಾಲೂಕಿನ ಆಲ್ದೂರು ಅರಣ್ಯ ವಲಯದ ಅಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.