ಇಂದು ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ

ಪ್ರಥಮ ಪಿಯುಸಿ ಫಲಿತಾಂಶವನ್ನು ಇಂದು ಘೋಷಿಸಲಾಗುವುದು ಎಂದು ಸರ್ಕಾರ ಪ್ರಕಟಿಸಿದೆ.

Last Updated : May 5, 2020, 08:57 AM IST
ಇಂದು ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ title=

ಬೆಂಗಳೂರು: ಮುಂದಿನ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಪದವಿ ಪೂರ್ವ ಶಿಕ್ಷಣ ಇಲಾಖೆ ಇಂದು ಪ್ರಥಮ ಪಿಯುಸಿ ಫಲಿತಾಂಶವನ್ನು ಪ್ರಕಟಿಸಲಿದೆ.  ಕೊರೋನಾವೈರಸ್ ಕೋವಿಡ್ 19 (Covid-19) ಹಿನ್ನೆಲೆಯಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಫಲಿತಾಂಶವನ್ನು ಕಾಲೇಜುಗಳಲ್ಲಿ ಪ್ರಕಟಿಸದೆ ಕಾಲೇಜು ಆಡಳಿತ ಮಂಡಳಿಗಳು ವಿದ್ಯಾರ್ಥಿಗಳ ಮೊಬೈಲ್​​ಗೆ ಸಂದೇಶ ಅಥವಾ ಇಮೇಲ್‌ ಮೂಲಕ ಫಲಿತಾಂಶದ ವಿವರ ಕಳುಹಿಸುವಂತೆ ಸರ್ಕಾರ ಸೂಚಿಸಿದೆ.

ಕಳೆದ ವಾರವಷ್ಟೇ ಕಾಲೇಜುಗಳು ಮೇ 5ನೇ ತಾರೀಕಿನಂದು ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಿಸಬೇಕು ಎಂದು ಸುತ್ತೋಲೆ ಹೊರಡಿಸಿದ್ದ ಪೂರ್ವ ಶಿಕ್ಷಣ ಇಲಾಖೆ ಇದರಲ್ಲಿ ಅನುತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಕಾಲೇಜುಮಟ್ಟದಲ್ಲಿಯೇ ನಿರ್ವಹಿಸಲು‌ ಮಾನದಂಡಗಳನ್ನು ಸದ್ಯದಲ್ಲೇ ತಿಳಿಸಲಿದ್ದೇವೆ ಎಂದು  ಸ್ಪಷ್ಟಪಡಿಸಿತ್ತು.

ಜತೆಗೆ ಖಾಸಗಿ ಪಿಯು ಕಾಲೇಜುಗಳು ಇಂತಹ ಸಾಮಾಜಿಕ ಸಂಕಷ್ಟದ ಸಂದರ್ಭ ದಲ್ಲಿ ಅಸಹಾಯಕ ಪೋಷಕರಿಂದ ವಿದ್ಯಾರ್ಥಿಗಳ ಶುಲ್ಕ ಪಾವತಿಗೆ ಒತ್ತಾಯಿಸಬಾರದು, ಇಚ್ಛಿಸುವ ಪೋಷಕರಿಂದ ಕಂತುಗಳ ಮೂಲಕ ಸ್ವೀಕರಿಸತಕ್ಕದ್ದು ಹಾಗೂ 2020-21 ನೇ ಈ ಸಾಲಿಗೆ ಯಾವುದೇ ಕಾರಣಕ್ಕೂ ಬೋಧನ ಶುಲ್ಕವನ್ನು ಹೆಚ್ಚಿಸಬಾರದೆಂದು ಇಲಾಖೆಯು ನಿರ್ದೇಶನ ನೀಡಿತ್ತು.

ಇದಲ್ಲದೆ ಒಂದು ವೇಳೆ ಈ ಬಗ್ಗೆ ದೂರುಗಳು ಬಂದಲ್ಲಿ, ಕಾಲೇಜುಗಳ ಮೇಲೆ ನಿರ್ದಾಕ್ಷಿಣ್ಯವಾದ ಕ್ರಮಕ್ಕೆ ಮುಂದಾಗಲಾಗುವುದೆಂದು ಪದವಿಪೂರ್ವ ಶಿಕ್ಷಣ ನಿರ್ದೇಶಕರು ತಮ್ಮ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

Trending News