ಧಾರವಾಡ:  ಧಾರವಾಡದ ಶೀಲವಂತರ ಓಣಿ ನಿವಾಸಿ ಮಹಾಂತೇಶ ತುರಮರಿರವರ ತಾಯಿ ಶ್ರೀಮತಿ ಯಲ್ಲವ್ವ ಧಾರವಾಡ ಜಯನಗರದ ಕೆ.ವಿ.ಜಿ. ಬ್ಯಾಂಕಿನಲ್ಲಿ ಉಳಿತಾಯ ಖಾತೆ ಹೊಂದಿದ್ದಳು. ಸದರಿ ಬ್ಯಾಂಕ್ ಮತ್ತು ಯುನೈಟೆಡ್ ಇನ್ಸುರೆನ್ಸ್ ಕಂಪನಿಯ ಒಡಂಬಡಿಕೆಯಂತೆ ಸದರಿ ಖಾತೆದಾರಳನ್ನು ಪ್ರಧಾನಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿ ರೂ.2 ಲಕ್ಷಕ್ಕೆ ವಿಮೆ ಮಾಡಿಸಿದ್ದರು.


COMMERCIAL BREAK
SCROLL TO CONTINUE READING

ಸದರಿ ಖಾತೆದಾರಳ ಉಳಿತಾಯ ಖಾತೆಯಿಂದ ಪ್ರತಿ ವರ್ಷ ರೂ.12 ಪ್ರಿಮಿಯಮ್ ಹಣ ಕಟ್ಟಾಗಿ ವಿಮಾ ಕಂಪನಿಗೆ ಹೋಗುತ್ತಿತ್ತು. ದಿ:27/04/2021 ರಂದು ಖಾತೆದಾರಳಾದ ಶ್ರೀಮತಿ ಯಲ್ಲವ್ವ ಕೆಲಗೇರಿಯ ಕೆರೆಗೆ ಬಟ್ಟೆ ತೊಳೆಯಲು ಹೋದಾಗ ಅಕಸ್ಮಾತಾಗಿ ಕೆರೆಯ ನೀರಿನಲ್ಲಿ ಮುಳುಗಿ ಮೃತಳಾಗಿದ್ದಳು. ಆ ರೀತಿ ಮೃತಳ ಸಾವು ವಿಮಾ ಪಾಲಸಿ ನಿಯಮಕ್ಕೆ ಒಳಪಟ್ಟಿದ್ದರಿಂದ ರೂ.2 ಲಕ್ಷ ಪರಿಹಾರ ಕೊಡುವಂತೆ ಮೃತಳ ಮಗ/ದೂರುದಾರ ವಿಮಾ ಕಂಪನಿಗೆ ಮತ್ತು ಕೆ.ವಿ.ಜಿ ಬ್ಯಾಂಕಿಗೆ ಕ್ಲೇಮ ಅರ್ಜಿ ಸಲ್ಲಿಸಿದ್ದರು.


ಇದನ್ನೂ ಓದಿ: AAP ನೂತನ ರಾಜ್ಯಾಧ್ಯಕ್ಷರಾಗಿ ಮುಖ್ಯಮಂತ್ರಿ ಚಂದ್ರು ನೇಮಕ


ಮೃತ ಯಲ್ಲವ್ವ ನೀರಿನಲ್ಲಿ ಮುಳುಗಿ ಅಕಸ್ಮಾತ ಆಗಿ ಸತ್ತಿಲ್ಲ ಆದರೆ ಅವಳ ಸಾವುಆತ್ಮಹತ್ಯೆ ಅಂತಾ ವಿಮಾ ಕಂಪನಿಯವರು ಆಕ್ಷೇಪಿಸಿ ಕ್ಲೇಮ ಅರ್ಜಿಯನ್ನು ತಿರಸ್ಕರಿಸಿದ್ದರು. ಆ ರೀತಿ ಮಾಡಿರುವ ವಿಮಾ ಕಂಪನಿಯವರ ನಡಾವಳಿಕೆ ವಿಮಾ ನಿಯಮಕ್ಕೆ ವಿರುದ್ಧವಾದುದು ಮತ್ತು ಅವರಿಂದ ಸೇವಾ ನ್ಯೂನ್ಯತೆ ಆಗಿದೆ ಅಂತಾ ಹೇಳಿ ಗ್ರಾಹಕರ ರಕ್ಷಣಾ ಕಾಯ್ದೆ ಅಡಿ ಸೂಕ್ತ ಕ್ರಮ ಕೈಗೊಳ್ಳುವಂತೆ ದೂರುದಾರ ಧಾರವಾಡ ಜಿಲ್ಲಾ ಗ್ರಾಹಕರ ಆಯೋಗಕ್ಕೆ ಫಿರ್ಯಾದಿ ಸಲ್ಲಿಸಿದ್ದರು.


ಸದರಿ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷ ಈಶಪ್ಪ.ಭೂತೆ ಹಾಗೂ ಸದಸ್ಯರುಗಳಾದ ವಿಶಾಲಾಕ್ಷಿ.ಅ.ಬೋಳಶೆಟ್ಟಿ ಮತ್ತು ಪ್ರಭು.ಸಿ. ಹಿರೇಮಠ ಮೃತೆ ಯಲ್ಲವ್ವನ ಹೆಸರಿನಲ್ಲಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾಯೋಜನೆ ಅಡಿಯ ವಿಮಾ ಪಾಲಸಿ ಅವಳು ಮೃತಳಾಗುವ ಕಾಲಕ್ಕೆ ಚಾಲ್ತಿಯಲ್ಲಿದೆ. ಮೃತಳು ಬಟ್ಟೆ ತೊಳೆಯುವಾಗ ಅಕಸ್ಮಾತಾಗಿ ಕೆಲಗೇರಿಯ ಕೆರೆ ನೀರಿನಲ್ಲಿ ಮುಳುಗಿ ಸತ್ತಿರುವುದರಿಂದ ಅವಳ ಸಾವು ಆಕಸ್ಮಿಕವಾಗಿದೆ. ಅದು ಆತ್ಮಹತ್ಯೆ ಅನ್ನುವ ವಿಮಾ ಕಂಪನಿಯ ಆಕ್ಷೇಪಣೆಯನ್ನು ಒಪ್ಪಲಾಗುವುದಿಲ್ಲ ಅಂತಾ ಆಯೋಗ ಅಭಿಪ್ರಾಯಪಟ್ಟು ತೀರ್ಪು ನೀಡಿದೆ.


ಇದನ್ನೂ ಓದಿ: ʻಶಕ್ತಿʼ ಯೋಜನೆಯಿಂದ ʻಮರು ಶಕ್ತಿʼ ಪಡೆದ ಬಸ್‌ ನಿಲ್ದಾಣ


ವಿಮೆ ತಿರಸ್ಕರಿಸಿರುವುದು ಗ್ರಾಹಕರ ರಕ್ಷಣಾಕಾಯ್ದೆ ಅಡಿ ಸೇವಾ ನ್ಯೂನ್ಯತೆ ಆಗುತ್ತದೆ ಅಂತಾ ಆಯೋಗ ಅಭಿಪ್ರಾಯಪಟ್ಟು ಮೃತಳ ವಾರಸುದಾರನಾದ ಅವರ ಮಗ/ದೂರುದಾರನಿಗೆ ವಿಮಾ ಹಣ ರೂ.2 ಲಕ್ಷ ಹಾಗೂ ದೂರುದಾರರಿಗೆ ಆಗಿರುವ ಮಾನಸಿಕ ತೊಂದರೆಗೆ ರೂ.50 ಸಾವಿರ ಪರಿಹಾರ ಮತ್ತು ರೂ.10 ಸಾವಿರ ಪ್ರಕರಣದ ಖರ್ಚು ವೆಚ್ಚ ತೀರ್ಪು ನೀಡಿದ ಒಂದು ತಿಂಗಳ ಒಳಗಾಗಿ ಕೊಡುವಂತೆ ಆಯೋಗ ಆದೇಶಿಸಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.