ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ 2 ಲಕ್ಷ ಕೋಟಿ ಬಂಡವಾಳ ಹೂಡಿಕೆ: ಸಿಎಂ ಬೊಮ್ಮಾಯಿ
ಕರ್ನಾಟಕದಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ 2 ಲಕ್ಷ ಕೋಟಿ ರೂ.ಗಳ ಬಂಡವಾಳ ಹೂಡಿಕೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಬೆಂಗಳೂರು: ಕರ್ನಾಟಕದಲ್ಲಿ ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ 2 ಲಕ್ಷ ಕೋಟಿ ರೂ.ಗಳ ಬಂಡವಾಳ ಹೂಡಿಕೆಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು.
ಅವರು ಇಂದು ಏಟ್ರಿಯಾ ವಿಶ್ವವಿದ್ಯಾಲಯ ಹಾಗೂ ಗ್ರೀನ್ ಫ್ಯೂಚರ್ ಸಮ್ಮಿಟ್ ಕಾರ್ಯಕ್ರಮವನ್ನು ಉದ್ಘಾಟಿಸಿ ಉದ್ಯಮಿಗಳೊಂದಿಗೆ ಸಂವಾದ ನಡೆಸಿದರು.
ಮುಂದಿನ ದಿನಗಳಲ್ಲಿ ಪೆಟ್ರೋಲ್ ಡೀಸೆಲ್ ಪರ್ಯಾಯವಾಗಿ ನವೀಕರಣ ಇಂಧನ ಹೆಚ್ಚಿನ ಪ್ರಮಾಣದಲ್ಲಿ ಬಳಕೆಯಾಗಲಿದೆ.ಪ್ರಮುಖವಾಗಿ ಹೈಡ್ರೊಜನ್ ಉದ್ಯಮದಲ್ಲಿ ಹೆಚ್ಚಿನ ಬಂಡವಾಳ ಹೂಡಿಕೆಯಾಗಲಿದ್ದು, ಕಡಿಮೆ ದರದಲ್ಲಿ ಇಂಧನ ದೊರೆಯುವಂತೆ ಮಾಡಲು ಸಾಕಷ್ಟ ಸಂಶೋಧನೆ ನಡೆಯುತ್ತಿದೆ ಎಂದರು.
ಮುಂದಿನ 5 ವರ್ಷಗಳಲ್ಲಿ ಎಲೆಕ್ಟಿಕ್ ವಾಹನಗಳ ದರ ಕಡಿಮೆಯಾಗಲಿದೆ.ಮುಂದಿನ ಐದು ವರ್ಷಗಳಲ್ಲಿ ನಗರಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಸಂಖ್ಯೆ ಹೆಚ್ಚಾಗಲಿದ್ದು, ಎಲೆಕ್ಟಿಕ್ ವಾಹನಗಳ ದರವೂ ಕಡಿಮೆಯಾಗಲಿದೆ ಎಂದರು.ಸಿ.ಎಸ್.ಸುಂದರರಾಜು ಮೊದಲಾದವರು ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.