Dinesh Gundurao implemented free yoga training program :  ದಿನಕ್ಕೆ ಎರಡು ಬಾರಿ ಉಚಿತ ಯೋಗ ತರಬೇತಿ ಕಾರ್ಯಕ್ರಮವನ್ನು ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಆಯುಷ್ಮ ಚಿಕಿತ್ಸಾಲಯಗಳಲ್ಲಿ ಆಯುಷ್ಮಾನ್ ಮಂದಿರಗಳ ಮೂಲಕ ನುರಿತ ಯೋಗ ತರಬೇತುದಾರರಿಂದ ನಡೆಸಲು ಜಾರಿ ತರಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

 ರಥಸಪ್ತಮಿ ಅಂಗವಾಗಿ ವಿಧಾನಸೌಧದ ಮುಂಭಾಗದಲ್ಲಿ ಆಯುಷ್ ಇಲಾಖೆ ಮತ್ತು ಯೋಗಗಂಗೋತ್ರಿ ಟ್ರಸ್ಟ್ ಸಹಯೋಗದಲ್ಲಿ ಭಾನುವಾರ ನಡೆದ ಯೋಗ ಮತ್ತು 108 ಸೂರ್ಯ ನಮಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಜ್ಯದ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ ಆಯುಷ್ ಚಿಕಿತ್ಸಾಲಯಗಳಲ್ಲಿ ಆಯುಷ್ಮಾನ್ ಮಂದಿರಗಳ ಮೂಲಕ ನುರಿತ ಯೋಗ ತರಬೇತುದಾರರಿಂದ ದಿನಕ್ಕೆ ಎರಡು ಬಾರಿ ಉಚಿತ ಯೋಗ ತರಬೇತಿ ಕಾರ್ಯಕ್ರಮ ಜಾರಿ ತರಲಾಗಿದೆ ಎಂದು ತಿಳಿಸಿದರು.


ಇದನ್ನು ಓದಿ : ಆರ್ಥಿಕ ಚಟುವಟಿಕೆಗಳ ಹೆಚ್ಚಳದಿಂದ ದೇಶದಲ್ಲಿ ವಿದ್ಯುತ್ ಬಳಕೆ  ಶೇ7.5ರಷ್ಟು ಏರಿಕೆ 


ಸೂರ್ಯ ನಮಸ್ಕಾರ ಮಾಡುವುದರಿಂದ ಉತ್ತಮ ಶಾರೀರಿಕ ಆರೋಗ್ಯ ಮತ್ತು ಮಾನಸಿಕ ಆರೋಗ್ಯ ಬೆಳೆಸಿಕೊಳ್ಳಬಹುದು ಮತ್ತು ಇತರ ಆಸನಗಳು ಪ್ರಾಣಾಯಾಮ ಹಾಗೂ ಧ್ಯಾನ ಮತ್ತಿತರ ಅಭ್ಯಾಸಗಳಿಂದ ದೇಹ ಮನಸ್ಸು ಚುರುಕುಗೊಳ್ಳುತ್ತದೆ. 


ಯೋಗದಿಂದ ರೋಗನಿರೋಧಕ ಶಕ್ತಿಯ ಹೆಚ್ಚಳ, ಮನುಷ್ಯನ ಶಾರೀರಿಕ ಮತ್ತು ಮಾನಸಿಕ ಸಮಸ್ಯೆಗಳಿಗೆ ಇಂತಹ ಯೋಗಾಭ್ಯಾಸಗಳನ್ನ ಅಳವಡಿಸಿಕೊಳ್ಳುವುದು ಒಳ್ಳೆಯದು ಎಂದು ಅಭಿಪ್ರಾಯ ಪಟ್ಟಿದ್ದಾರೆ. 


ಇದನ್ನು ಓದಿ : ಕುಟುಂಬ ಸಮೇತವಾಗಿ ಫೋಟೋಶೂಟ್ ಮಾಡಿಸಿದ ನಟಿ ಅಮೂಲ್ಯ


ಮನಸ್ಸು ಆರೋಗ್ಯ ಚೆನ್ನಾಗಿರಬೇಕೆಂದರೆ ಯೋಗಾಭ್ಯಾಸ ತುಂಬಾ ಅತ್ಯವಶ್ಯಕವಾಗಿದೆ ಸೂರ್ಯ ನಮಸ್ಕಾರ ಸ್ವಲ್ಪ ಕಷ್ಟಕರವಾದರೂ ಇದರಿಂದ ಸದೃಢ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು ಎಂದು ವಿಧಾನ ಪರಿಷತ್ ಸದಸ್ಯ ಟಿ.ಎ.ಶರವಣ ಮಾತನಾಡಿದರು. 


ಕಾರ್ಯಕ್ರಮದಲ್ಲಿ ಆಯುಷ್ ಇಲಾಖೆಯ ಆಯುಕ್ತ ಶ್ರೀನಿವಾಸಲು ಯೋಗಗಂಗೋತ್ರಿ ಸಂಸ್ಥೆಯ ಪ್ರಮುಖರಾದ ಡಾಕ.ಆರಾಧ್ಯ ಗುರುರಾಜ ಇದ್ದರು


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ .