ಹಾವೇರಿ, ಸೆಪ್ಟೆಂಬರ್ 29: ಗಂಟುರೋಗದಿಂದ ದನಗಳು ಮೃತಪಟ್ಟರೆ ಪಟ್ಟರೆ 20 ಸಾವಿರ ರೂ.ಗಳ ಪರಿಹಾರ ಒದಗಿಸಲಾಗುವುದು ಹಾಗೂ  ಗಂಟು ರೋಗಕ್ಕೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.


COMMERCIAL BREAK
SCROLL TO CONTINUE READING

ಅವರು ವಿಜಯ ಕರ್ನಾಟಕ ದಿನಪತ್ರಿಕೆಯ ವತಿಯಿಂದ ಹಾವೇರಿಯ ಗುರುಭವನದಲ್ಲಿ ಹಾವೇರಿ ಜಿಲ್ಲೆ ರಚನೆಗೊಂಡು 25 ವರ್ಷ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ಹಮ್ಮಿಕೊಂಡಿರುವ ರಜತ ಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.ಈ ಭಾಗದಲ್ಲಿ ದನಕರುಗಳಿಗೆ ಗಂಟು ರೋಗ ಕಂಡುಬಂದಿದೆ. ಗಂಟುರೋಗ ಹರಡದಂತೆ ನೋಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ. ಅದಕ್ಕೆ ಈಗಾಗಲೇ ಸೂಚನೆ ನೀಡಿ ವಿಶೇಷ ತಂಡವನ್ನು ಕಳಿಸಲಾಗುವುದು ಎಂದು ತಿಳಿಸಿದರು.  


ಇದನ್ನೂ ಓದಿ: ಸಾಧು ಹೇಳಿದ ಅಂತಾ 6 ಅಡಿ ಆಳದ ಸಮಾಧಿ ತೋಡಿ ಅದರೊಳಗೆ ಕುಳಿತ ಭೂಪ: ಮುಂದೇನಾಯ್ತು ಗೊತ್ತಾ?


ಏಳು ಗಂಟೆಗಳ ಕಾಲ ವಿದ್ಯುಚ್ಛಕ್ತಿ ಸರಬರಾಜು :


ವಿದ್ಯುಚ್ಛಕ್ತಿ ಸರಬರಾಜು ಐದು ಗಂಟೆಗಳ ಕಾಲವಿದ್ದು ಇದನ್ನು ಏಳು ಗಂಟೆಗಳಿಗೆ ವಿಸ್ತರಿಸಬೇಕು ಎಂಬ ರೈತರ ಬೇಡಿಕೆಯನ್ನು ಈಡೇರಿಸಲಾಗುವುದು ಎಂದರು. ಈ ಬಗ್ಗೆ ಕೂಡಲೇ ಆದೇಶ ಹೊರಡಿಸಲಾಗುವುದು.ವಿದ್ಯುತ್  ಸಂಸ್ಥೆಗಳ ಖಾಸಗೀಕರಣವನ್ನು ನಮ್ಮ ಸರ್ಕಾರ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.  


ದುಡಿಯುವ ವರ್ಗಕ್ಕೆ ಹೆಚ್ಚಿನ ಮಹತ್ವ :


ದುಡಿಯುವ ವರ್ಗಕ್ಕೆ ಹೆಚ್ಚಿನ ಮಹತ್ವ ನೀಡಿದ್ದೇವೆ. 11,137  ಪೌರ ಕಾರ್ಮಿಕರ ಸೇವೆಯನ್ನು ಕರ್ನಾಟಕ  ಇತಿಹಾಸದಲ್ಲಿ ಪ್ರಥಮ ಬಾರಿಗೆ ಕಾಯಂಗೊಳಿಸಲಾಗಿದೆ. ಇನ್ನೆರಡು ಹಂತಗಳಲ್ಲಿ ಖಾಯಂ ಮಾಡುವ ಕೆಲಸವನ್ನು ಮಾಡಲಾಗುವುದು.   ಅಂಗನವಾಡಿ, ಆಶಾ ಕಾರ್ಯಕರ್ತರಗೆ ಕೆಲಸಕ್ಕೆ ಸುರಕ್ಷತೆ, ಭದ್ರತೆ ನೀಡುವ ಕೆಲಸಗಳ ಬಗ್ಗೆ ನಿರ್ಧಾರಗಳನ್ನು ಕೈಗೊಳ್ಳಲಾಗುವುದು. ದುಡಿಮೆಗೆ ಗೌರವ ಬರುವ ರೀತಿಯಲ್ಲಿ  ನಿರ್ಣಯ ತೆಗೆದುಕೊಳ್ಳಲಾಗುವುದು ಎಂದರು.  ರೈತ ವಿದ್ಯಾನಿಧಿ ಯೋಜನೆಯನ್ನು ಮುಖ್ಯಮಂತ್ರಿಯಾದ ನಾಲ್ಕು ಗಂಟೆಗಳ ಅವಧಿಯಲ್ಲಿ ಘೋಷಿಸಿದೆ. 14 ಲಕ್ಷ ಜನ ಈ ವರ್ಷ ಪಡೆದಿದ್ದಾರೆ. ಬೇರ್ಯಾವ ವಿದ್ಯಾರ್ಥಿವೇತನ ಪಡೆದರೂ ಇದನ್ನು ನೀಡಲಾಗುತ್ತಿದೆ. ದುಡಿಯುವ ವರ್ಗಕ್ಕೆ ಮನ್ನಣೆ ನೀಡಲಿ ಆದತ್ಯೆ ನೀಡಲಾಗುತ್ತಿದೆ.ದುಡಿಮೆಯೇ ದೊಡ್ಡಪ್ಪ ಎಂಬುದು ನಮ್ಮ ಘೋಷವಾಕ್ಯ. ಹಾವೇರಿ ಜಿಲ್ಲೆ ನಮ್ಮ ಹೃದಯದಲ್ಲಿದೆ. ನಿಮ್ಮ ಋಣ ತೀರಿಸಲು ಸಾಧ್ಯವಿಲ್ಲ.ಹಾವೇರಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಅಭಿವೃದ್ಧಿ ಮಾಡಲು ಬದ್ಧನಾಗಿದ್ದೇನೆ ಎಂದರು.


ಪರಿಹಾರದ ಭಾಗವಾಗಬೇಕು :


ಈಗಿರುವ ಸಮಸ್ಯೆಗಳು  ಹುಟ್ಟುಹಾಕಿರುವ ಸಮಸ್ಯೆಗಳಲ್ಲ.  ಹತ್ತಾರು ವರ್ಷಗಳ ಸಮಸ್ಯೆಯಾಗಿದೆ.  ಸಮಸ್ಯೆಯನ್ನು ಚರ್ಚೆ ಮಾಡದೆ  ಅಧಿಕಾರವಿದ್ದಾಗ ಪರಿಹಾರದ ಭಾಗವಾಗಿ ನಾವು ಕೆಲಸ ಮಾಡಬೇಕು. ಸಮಸ್ಯೆಗಳನ್ನು ಹಾಗೆಯೇ ಬಿಟ್ಟರೆ ಅದು ಉತ್ತಮ ಆಡಳಿತಗಾರರ ಲಕ್ಷಣವಲ್ಲ.  ನಾನು ದಿನಕ್ಕೆ 16-17 ತಾಸು ಕೆಲಸ ಮಾಡುತ್ತಿದ್ದು, ಜನಪರವಾಗಿರುವ ತೀರ್ಮಾನಗಳನ್ನು ಮಾಡುತ್ತಿದ್ದೇನೆ. ಬಹಳ ವರ್ಷಗಳಿಂದ ಆಗದೇ ಇರುವಂಥ ಹಲವಾರು ತೀರ್ಮಾನಗಳನ್ನು ಕೈಗೊಂಡಿದ್ದೇನೆ.


ಇದನ್ನೂ ಓದಿ: IOCL ನಲ್ಲಿ 1500 ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ : ವಿವರಗಳಿಗೆ ಇಲ್ಲಿ ಪರಿಶೀಲಿಸಿ


ಪ್ರವಾಹ, ಬರಗಾಲ, ಏನೇ ಬಂದರೂ ಕನ್ನಡ ನಾಡಿನ  ಜನತೆಯ ಜೀವನವನ್ನು ಕಷ್ಟಕ್ಕೆ ಈಡು ಮಾಡದೇ ಅವರ ಕಷ್ಟಗಳಿಗೆ ಸಹಾಯ ಮಾಡುವ  ಕೆಲಸ ಮಾಡುತ್ತಿದ್ದೇವೆ. ಪ್ರವಾಹ ಬಂದಾಗ ಜನ ತೊಂದರೆಗೀಡಾಗುತ್ತಾರೆ. ಬೆಳೆ ಪರಿಹಾರವನ್ನು ಕೇಂದ್ರ ಸರ್ಕಾರದ ಪರಿಹಾರದ ಜೊತೆಗೆ ರಾಜ್ಯ ಸರ್ಕಾರವೂ ಹೆಚ್ಚುವರಿಯಾಗಿ ಒದಗಿಸುವ ಮೂಲಕ ಎರಡು  ಪಟ್ಟು ಪರಿಹಾರ ನೀಡಲಾಗಿದೆ.


ನವಂಬರ್ ನಲ್ಲಿ  ಪ್ರವಾಹವಾದ ಸಂದರ್ಭದಲ್ಲಿ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ 1400 ಕೋಟಿ ರೂ. ಗಳ ಪರಿಹಾರವನ್ನು  ರೈತರಿಗೆ ನೀಡಲಾಗಿದೆ.. ಕೇಂದ್ರ ಸರ್ಕಾರಕ್ಕಿಂಥ ಹೆಚ್ಚಿನ ಪರಿಹಾರವನ್ನು ನೀಡಲಾಗುತ್ತಿದೆ. ಹಾವೇರಿಯಲ್ಲಿ ಮನೆಗಳಿಗೆ ಹಾನಿಗೊಳಗಾಗಿರುವ ಮನೆಗಳಿಗೆ ಪರಿಹಾರ ನೀಡಲಾಗುತ್ತಿದೆ ಎಂದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.