ಚಾಮರಾಜನಗರ: ಸಿದ್ದರಾಮಯ್ಯ ಸರ್ಕಾರ ಎಡವಟ್ಟಿನ, ಮೋಸಗಾರ ಸರ್ಕಾರ ಎಂದು ಬಿಜೆಪಿ ಉಪಾಧ್ಯಕ್ಷ ಎನ್‌.ಮಹೇಶ್ ಹೇಳಿದರು.


COMMERCIAL BREAK
SCROLL TO CONTINUE READING

ಚಾಮರಾಜನಗರದಲ್ಲಿ ಮಾಧ್ಯಮವರೊಂದಿಗೆ ಅವರು ಮಾತನಾಡಿ, ಸಿದ್ದರಾಮಯ್ಯ ಸರ್ಕಾರ ಗೃಹಲಕ್ಷ್ಮೀ ಯೋಜನೆ ಮೂಲಕ ಸಿದ್ದಮ್ಮನಿಗೆ 2 ಸಾವಿರ ಹಣ ಕೊಟ್ಟು ಗಂಡ ಸಿದ್ದಪ್ಪನ ತಲೆ ಮೇಲೆ 95 ಸಾವಿರ ರೂ.‌ಸಾಲದ ಹೊರೆ ಇಟ್ಟಿದ್ದಾರೆ, ಈಗಾಗಲೇ ಸಿದ್ದರಾಮಯ್ಯ 96 ಸಾವಿರ ಕೋಟಿ ಸಾಲ ಮಾಡಿದ್ದಾರೆ  ಎಂದು ಅವರು ಕಿಡಿಕಾರಿದರು.


ಇದನ್ನೂ ಓದಿ- ನಾನು ಲೋಕಸಭೆ ಚುನಾವಣೆ ಸ್ಪರ್ಧಾಕಾಂಕ್ಷಿ ಅಲ್ಲ: ಜಗದೀಶ್ ಶೆಟ್ಟರ್


ಪ.ಜಾತಿ ಹಾಗೂ ಪಂಗಡಕ್ಕೆ 36 ಸಾವಿರ ಕೋಟಿ ಅನುದಾನ ಕೊಟ್ಟು ಅದರಲ್ಲಿ ಗ್ಯಾರಂಟಿ ಯೋಜನೆಗಾಗಿ 14 ಸಾವಿರ ಕೋಟಿ ಬಳಸಿಕೊಂಡಿದ್ದಾರೆ ಇದೊಂದು ಮಾರಕ  ಕ್ರಮ, ಸಿದ್ದರಾಮಯ್ಯ ಸರ್ಕಾರ ದಲಿತ ವಿರೋಧಿ , ಮೋಸಗಾರ ಸರ್ಕಾರ ಎಂದರು.


ಇನ್ನು, ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ಮಾಜಿ ಶಾಸಕ ಸಿ.ಎಸ್.ನಿರಂಜನಕುಮಾರ್ ಮಾತನಾಡಿ, ಸದನದ ಒಳಗೆ ಆರ್. ಅಶೋಕ್ ಮತ್ತು ವಿಜಯೇಂದ್ರ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದ್ದು ಬಿಜೆಪಿ ಕಾರ್ಯಕರ್ತರು ರಾಜ್ಯದ ಎಲ್ಲೆಡೆ ಬೀದಿಗಿಳಿದು ಹೋರಾಟ ಮಾಡುತ್ತಿದ್ದೇವೆ, ನುಡಿದಂತೆ ನಡೆದುಕೊಳ್ಳಿ ಎಂದು ಕಾಂಗ್ರೆಸ್ ನವರಿಗೆ ಮನವರಿಕೆ ಮಾಡಿ ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ಹಣವನ್ನು ದುರ್ಬಳಕೆ ಮಾಡಿಕೊಳ್ಳಬೇಡಿ ಎಂದು ಒತ್ತಾಯಿಸುತ್ತಿದ್ದೇವೆ ಎಂದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.