2021-22 Academic Year : ಜುಲೈ 1ರಿಂದ ರಾಜ್ಯದಲ್ಲಿ ಶಾಲಾ-ಕಾಲೇಜುಗಳು ಆರಂಭ!
ಈ ವೇಳಾಪಟ್ಟಿಯು ಕೊರೋನಾ ಪರಿಸ್ಥಿತಿಯ ಮೇಲೆ ಅವಲಂಬಿತ
ಬೆಂಗಳೂರು : 2021-22ನೇ ಸಾಲಿನ ಶೈಕ್ಷಣಿಕ ವರ್ಷವು ಜುಲೈ 1ರಿಂದ ಆರಂಭವಾಗಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ವಿ.ಅನ್ಬುಕುಮಾರ್ ಹೇಳಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಆಯುಕ್ತ ವಿ.ಅನ್ಬುಕುಮಾರ್(V Anbu Kumar), ಜೂ.15ರಿಂದ ವಿದ್ಯಾರ್ಥಿಗಳ ಪ್ರವೇಶ ಪ್ರಕ್ರಿಯೆಗೆ ಅವಕಾಶ ನೀಡಲಾಗುತ್ತದೆ. ಇದು ಮುಗಿಯುತ್ತಿದಂತೆಯೇ ಜು.1ರಿಂದ ಹೊಸ ಶೈಕ್ಷಣಿಕ ವರ್ಷ ಆರಂಭವಾಗಲಿದೆ. ಕೊರೋನಾ ಪರಿಸ್ಥಿತಿ ಇದೇ ರೀತಿ ಇದ್ದಲ್ಲಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿಗಳ ಬದಲಾಗಿ ಆನ್‍ಲೈನ್ ತರಗತಿಗಳನ್ನೇ ನಡೆಸಲಾಗುತ್ತದೆ. ಈ ವೇಳಾಪಟ್ಟಿಯು ಕೊರೋನಾ ಪರಿಸ್ಥಿತಿಯ ಮೇಲೆ ಅವಲಂಬಿತವಾಗಿದೆ. ಒಂದು ವೇಳೆ ಪರಿಸ್ಥಿತಿ ಸುಧಾರಿಸಲಿಲ್ಲವಾದರೆ ಮುಂದೆ ಹೋಗುವ ಸಾಧ್ಯತೆ ಕೂಡ ಇದೆ ಎಂದು ಸ್ಪಷ್ಟಪಡಿಸಿದರು.
ಇದನ್ನೂ ಓದಿ : 2nd PUC Exam Cancel : ದ್ವಿತೀಯ ಪಿಯುಸಿ ಪರೀಕ್ಷೆ ರದ್ದು : ಸಚಿವ ಸುರೇಶ್ ಕುಮಾರ್
ದ್ವಿತೀಯ ಪಿಯು ಪರೀಕ್ಷೆ ರದ್ದು(2nd PUC Exam Cancelled) ಮಾಡಿ ಎಲ್ಲ ವಿದ್ಯಾರ್ಥಿಗಳನ್ನೂ ಪಾಸ್ ಮಾಡುವುದಾಗಿ ಶುಕ್ರವಾರ ಮಹತ್ವದ ನಿರ್ಧಾರ ಪ್ರಕಟಿಸಿದೆ ರಾಜ್ಯ ಶಿಕ್ಷಣ ಇಲಾಖೆ. ದ್ವಿತೀಯ ಪಿಯುಸಿ ಎಕ್ಸಾಂ ರದ್ದಾಗಿರುವುದು ಇತಿಹಾಸದಲ್ಲೇ ಇದೇ ಮೊದಲ ಬಾರಿ. ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯುತ್ತಾದರೂ ಪರೀಕ್ಷೆಗೆ ಹಾಜರಾದ ಎಲ್ಲ ಮಕ್ಕಳನ್ನೂ ಪಾಸ್ ಮಾಡಲಾಗುತ್ತೆ.
ಇದನ್ನೂ ಓದಿ : Heavy Rainfall : ಕೇರಳಕ್ಕೆ ಎಂಟ್ರಿ ನೀಡಿದ ಮಾನ್ಸೂನ್ : ರಾಜ್ಯದಲ್ಲಿ ಮುಂಗಾರು ಮಳೆಯ ಆರ್ಭಟ ಶುರು!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ