ಬೆಳಗಾವಿ: ರಾಜ್ಯದಲ್ಲಿ ಕಳೆದ ಮೂರು ವರ್ಷಗಳ ಅವಧಿಯಲ್ಲಿ ಸಾವಿರಾರು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಅನ್ನೊ ಆತಂಕಕಾರಿ ವಿವರವನ್ನು ಸರ್ಕಾರ ಬಹಿರಂಗಪಡಿಸಿದೆ. ವಿಧಾನಸಭೆಯಲ್ಲಿ ಸರ್ಕಾರ ಕೊಟ್ಟಿರುವ ಮಾಹಿತಿಯ ಪ್ರಕಾರ ಕಳೆದ ಮೂರು ವರ್ಷಗಳಲ್ಲಿ 2027 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 


COMMERCIAL BREAK
SCROLL TO CONTINUE READING

ಕೃಷಿ ಸಚಿವ ಕೃಷ್ಣ ಬೈರೆಗೌಡ ಅವರು ಶಾಸಕ ವೈ.ಎಸ್.ವಿ.ದತ್ತಾ ಅವರ ಪ್ರಶ್ನೆಗೆ ನೀಡಿರುವ ಲಿಖಿತ ಉತ್ತರದಲ್ಲಿ ಈ ಆತಂಕಕಾರಿ ವಿವರ ಬಹಿರಂಗವಾಗಿದೆ. ಸಾಲಭಾಧೆ ಮತ್ತು ಬೆಳೆನಷ್ಟದ ಕಾರಣಕ್ಕೆ ರೈತರ ಆತ್ಮಹತ್ಯೆಯಾಗುತ್ತಿದ್ದು, 2014-15 ಸಾಲಿನಲ್ಲಿ 101 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರೆ, 2015-16 ನೇ ಸಾಲಿನಲ್ಲಿ 1031 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 2016-17 ನೇ ಸಾಲಿನಲ್ಲಿ 895 ರೈತರು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿಸಿರುವ ಸರ್ಕಾರ, ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ 97 ಕೋಟಿ ರೂ.ಗಳ ಪರಿಹಾರ ನೀಡಲಾಗಿದೆ ಎಂದು ತಿಳಿಸಿದೆ. ಆತ್ಮಹತ್ಯೆ ಮಾಡಿಕೊಂಡ ರಾಜ್ಯದ ರೈತರ ನೆರವಿಗೆ ಕೇಂದ್ರ ಸರಕಾರ ಯಾವುದೇ ಅನುದಾನ ನೀಡಿಲ್ಲ. ರಾಜ್ಯ ಸರಕಾರ ಮಾತ್ರ ಪರಿಹಾರವನ್ನು ನೀಡಿದೆ ಅಂತ ರಾಜ್ಯ ಸರಕಾರ ಕೊಟ್ಟ ವಿವರದಲ್ಲಿ ತಿಳಿಸಲಾಗಿದೆ. 


ಸರ್ಕಾರ ಕೊಟ್ಟಿರುವ ಮಾಹಿತಿಯ ಪ್ರಕಾರ, ಕಳೆದ ಮೂರು ವರ್ಷಗಳ ಅವಧಿಯಲ್ಲಿ ದಿನಕ್ಕೆ ಇಬ್ಬರಂತೆ ರೈತರು ಸಾಲಭಾದೆ ಮತ್ತು ಬೆಳೆನಾಶದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರುವುದು ಆತಂಕ ಹುಟ್ಟಿಸುವಂತಹುದು.