ಬೆಂಗಳೂರು: ಮೊದಲ ಹಂತದಲ್ಲಿ 2,166 ಪಿಡಿಒಗಳನ್ನು ಮೇಲ್ದರ್ಜೆಗೇರಿಸಲಾಗುವುದು. ನಂತರ ಉಳಿದವರಿಗೂ ಅವಕಾಶ ಕಲ್ಪಿಸಲಾಗುವುದು. ವೃಂದ ಮತ್ತು ನೇಮಕಾತಿ ನಿಯಮಗಳಿಗೆ ತಿದ್ದುಪಡಿ ತರಲು ಕ್ರಮ ವಹಿಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಸಚಿವರಾದ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಈಗಾಗಲೇ ಪ್ರಕಟಿಸಿರುವ ವರ್ಗಾವಣೆ ಕರಡು ಅಧಿಸೂಚನೆಯಲ್ಲಿನ ನ್ಯೂನತೆಗಳನ್ನು ಪರಸ್ಪರ ಮಾತುಕತೆಯ ಮೂಲಕ ಬಗೆಹರಿಸಲಾಗುವುದು. ಖಾಲಿ ಹುದ್ದೆಗಳ ಭರ್ತಿಗೆ ಚಾಲನೆ ನೀಡಲಾಗುವುದು ಎಂದು ಹೇಳಿದರು.


ಗ್ರಾಮ ಪಂಚಾಯಿತಿ ಸದಸ್ಯರ ಗೌರವಧನ ಹೆಚ್ಚಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಲಾಗುವುದು. ನೌಕರರ ಮೇಲಿನ ಒತ್ತಡ ಕುರಿತು ಅಧ್ಯಯನ ಮಾಡಲು ತಜ್ಞರ ಸಮಿತಿ ನೇಮಕ ಮಾಡಲಾಗುವುದು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.