ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ, ಮಧ್ಯ ಮತ್ತು ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಮುಂದಿನ 24 ಗಂಟೆಗಳ ವಿದರ್ಭ, ಛತ್ತೀಸಗಡ, ಮಧ್ಯ ಮಹಾರಾಷ್ಟ್ರ, ಮರಾಠವಾಡ, ತಮಿಳುನಾಡು, ಪುದುಚೇರಿ, ಕಾರೈಕಲ್, ಕೇರಳ, ಮಾಹೇ ಮತ್ತು ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಕುರಿತಂತೆ ಭಾರತೀಯ ಹವಾಮಾನ ಇಲಾಖೆ(Indian Meteorological Department) ಮಾಹಿತಿ ಬಿಡುಗಡೆ ಮಾಡಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡಿರುವ ಕಾರಣದಿಂದಾಗಿ, ಮಧ್ಯ ಹಾಗೂ ದಕ್ಷಿಣ ಭಾರತದ ಕೆಲವು ಭಾಗಗಳಲ್ಲಿ ಮುಂದಿನ 24 ಗಂಟೆಯಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ ಎಂಬುದಾಗಿ ತಿಳಿಸಿದೆ.
KS Eshwarappa: ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ ಸಚಿವ ಈಶ್ವರಪ್ಪ..!
ಇನ್ನೂ ರಾಜ್ಯದಲ್ಲೂ ಕೇರಳದಿಂದ ಮಹಾರಾಷ್ಟ್ರದವರೆಗೂ ವಾಯುಭಾರ ಕುಸಿತಗೊಂಡಿರುವ ಕಾರಣ, ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ಇದರ ಪರಿಣಾಮವಾಗಿ ಬಾಗಲಕೋಟೆ, ವಿಜಾಪುರ ಸೇರಿದಂತೆ ಉತ್ತರ ಕರ್ನಾಟಕ(Karnataka)ದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹೇಳಿದೆ.
Basanagouda Patil Yatnal: ಬಿ.ವೈ.ವಿಜಯೇಂದ್ರ ರಾಜ್ಯದ ಸೂಪರ್ ಸಿಎಂ, ಸಾಕ್ಷಿ ನೀಡಿದ ಯತ್ನಾಳ್!
ರಾಜ್ಯದ ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಶಿರಸಿ, ಹಳಿಯಾಲ ಪ್ರದೇಶಗಳಲ್ಲಿ ಗುಡುಗು ಸಹಿತ ಮಿಂಚಿನಿಂದ ಕೂಡಿದ ಸಾಧಾರಣ ಮಳೆ(Rainfall)ಯಾಗುವ ಸಾಧ್ಯತೆ ಇದೆ ಎಂದು ಮುಸ್ಸೂಚನೆ ನೀಡಿದೆ.
Uddhav Thackeray: ಮತ್ತೆ ಕನ್ನಡಿಗರ ಸ್ವಾಭಿಮಾನ ಕೆಣಕಿದ ಮಹಾ ಸಿಎಂ ಉದ್ಧವ್ ಠಾಕ್ರೆ..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.