ಚನ್ನಗಿರಿ ಪೋಲೀಸ್ ಠಾಣೆ ಮೇಲೆ ದಾಳಿ ಪ್ರಕರಣ : ೨೫ ಜನರ ಬಂಧನ
ಶನಿವಾರ ನಡೆದ ಪೋಲೀಸ್ ಠಾಣೆ ಮೇಲಿನ ದಾಳಿ ಪ್ರಕರಣದಲ್ಲಿ ಕನಿಷ್ಠ 11 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.
ದಾವಣಗೆರೆ : ಚನ್ನಗಿರಿ ಪಟ್ಟಣ ಪೊಲೀಸ್ ಠಾಣೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ 25 ಜನರನ್ನು ಬಂಧಿಸಲಾಗಿದೆ. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಶನಿವಾರ ನಡೆದ ಪೋಲೀಸ್ ಠಾಣೆ ಮೇಲಿನ ದಾಳಿ ಪ್ರಕರಣದಲ್ಲಿ ಕನಿಷ್ಠ 11 ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ.
ಐಪಿಸಿ ಸೆಕ್ಷನ್ 353 ಮತ್ತು 307 ರ ಅಡಿಯಲ್ಲಿ ಪೊಲೀಸ್ ಠಾಣೆ, ಸಿಬ್ಬಂದಿ ಮತ್ತು ಆಸ್ತಿಗಳ ಮೇಲೆ ಗುಂಪು ದಾಳಿಗೆ ಸಂಬಂಧಿಸಿದಂತೆ ಈ 25 ಮಂದಿಯನ್ನು ಬಂಧಿಸಲಾಗಿದೆ. ಘಟನೆಯ ತನಿಖೆಗಾಗಿ ಐದು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಸಿಸಿಟಿವಿ ದೃಶ್ಯಾವಳಿಗಳು ಮತ್ತು ಲಭ್ಯವಿರುವ ವೀಡಿಯೊ ತುಣುಕುಗಳನ್ನು ಆಧರಿಸಿ ಬಂಧನ ಪ್ರಕ್ರಿಯೆ ನಡೆಸಲಾಗಿದೆ.
ಇದನ್ನೂ ಓದಿ : ಮಾಲ್, ಗೇಮ್ ಜೋನ್, ಮನರಂಜನಾ ಕೇಂದ್ರಗಳ ಸುರಕ್ಷತಾ ಕ್ರಮಗಳ ಪರಿಶೀಲನೆಗೆ ಡಿಸಿಎಂ ಸೂಚನೆ
ಜಿಲ್ಲೆಯಲ್ಲಿ ಜೂಜಾಟದಲ್ಲಿ ತೊಡಗಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಮೇ 24 ರಂದು ಬಂಧಿಸಲಾಗಿತ್ತು.ನಂತರ ಆತನ ಆರೋಗ್ಯ ಸ್ಥಿತಿ ಹದಗೆಟ್ಟು ಸಾವನ್ನಪ್ಪಿದರು ಎಂದು ಪೊಲೀಸರು ತಿಳಿಸಿದ್ದಾರೆ.
ವ್ಯಕ್ತಿಯ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಆಕ್ರೋಶಗೊಂಡ ಸಂಬಂಧಿಕರು ಪೊಲೀಸ್ ವಾಹನಗಳನ್ನು ಹಾನಿಗೊಳಿಸಿದ್ದಾರೆ.ಪೊಲೀಸ್ ಠಾಣೆಗೆ ಕಲ್ಲು ತೂರಿದ್ದಾರೆ.
ಪೊಲೀಸ್ ಠಾಣೆ ಮೇಲೆ ನಡೆದ ದಾಳಿಯ ಹಿನ್ನೆಲೆಯಲ್ಲಿ ಉಪ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಚನ್ನಗಿರಿ ಠಾಣೆ ಇನ್ಸ್ ಪೆಕ್ಟರ್ ಅವರನ್ನು ಅಮಾನತು ಮಾಡಲಾಗಿದೆ.
ಇದನ್ನೂ ಓದಿ : ಬ್ರ್ಯಾಂಡ್ ಬೆಂಗಳೂರು ಅಲ್ಲ, ಲೂಟಿ ಬೆಂಗಳೂರು; ಕಾಂಗ್ರೆಸ್ ಸರಕಾರದ ವಿರುದ್ಧ ಜೆಡಿಎಸ್-ಬಿಜೆಪಿ ನಾಯಕರ ವಾಗ್ದಾಳಿ
“ಪೊಲೀಸರ ಕಡೆಯಿಂದ ಸರಿಯಾದ ಕ್ರಮ ಮತ್ತು ನಿರ್ಲಕ್ಷ್ಯ ಕಂಡು ಬಂದ ಹಿನ್ನೆಲೆಯಲ್ಲಿ ಡೆಪ್ಯುಟಿ ಸುಪರಿಟೆನ್ಡೆಂಟ್ ಮತ್ತು ಇನ್ಸ್ಪೆಕ್ಟರ್ ಅನ್ನು ಅಮಾನತುಗೊಳಿಸಲಾಗಿದ್ದು, ತನಿಖೆಗೆ ಆದೇಶಿಸಲಾಗಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.