ಕಾವೇರಿ ಜಲಾನಯನ ಪ್ರದೇಶದಲ್ಲಿ ಶೇ.28 ರಷ್ಟು ನೀರಿನ ಕೊರತೆ: ಡಿಸಿಎಂ ಡಿ.ಕೆ.ಶಿವಕುಮಾರ್

ನಮಗೆ ಮಳೆ ಕೊರತೆ ಉಂಟಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ 1 ಟಿಎಂಸಿ ನೀರು ಹರಿಸಬೇಕು ಎಂದು ಹೇಳಿದೆ.ನಾನು ದೆಹಲಿಯಲ್ಲಿ ಇರುವ ವಕೀಲರಾದ ಮೋಹನ್ ಕಾತರಕಿ, ಶ್ಯಾಮ್ ದಿವಾನ್ ಅವರ ಬಳಿ ಮಾತನಾಡಿದ್ದೇನೆ. ಅವರು ಒಂದಷ್ಟು ಸಲಹೆಗಳನ್ನು ನೀಡಿದ್ದಾರೆ.

Written by - Prashobh Devanahalli | Edited by - Manjunath N | Last Updated : Jul 12, 2024, 06:54 PM IST
  • ನಮಗೆ ಮಳೆ ಕೊರತೆ ಉಂಟಾಗಿದೆ
  • ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ 1 ಟಿಎಂಸಿ ನೀರು ಹರಿಸಬೇಕು ಎಂದು ಹೇಳಿದೆ
  • ನಾನು ದೆಹಲಿಯಲ್ಲಿ ಇರುವ ವಕೀಲರಾದ ಮೋಹನ್ ಕಾತರಕಿ, ಶ್ಯಾಮ್ ದಿವಾನ್ ಅವರ ಬಳಿ ಮಾತನಾಡಿದ್ದೇನೆ
ಕಾವೇರಿ ಜಲಾನಯನ ಪ್ರದೇಶದಲ್ಲಿ ಶೇ.28 ರಷ್ಟು ನೀರಿನ ಕೊರತೆ: ಡಿಸಿಎಂ ಡಿ.ಕೆ.ಶಿವಕುಮಾರ್ title=

ಬೆಂಗಳೂರು, ಜುಲೈ 12: “ಕಾವೇರಿ ಜಲಾನಯನದ ಪ್ರಮುಖ ಅಣೆಕಟ್ಟುಗಳಲ್ಲಿ ಸರಾಸರಿ ಶೇ. 62 ರಷ್ಟು ಮಾತ್ರ ನೀರಿನ ಲಭ್ಯತೆಯಿದೆ. ಸುಮಾರು 19 ಟಿಎಂಸಿಯಷ್ಟು ನೀರಿನ ಕೊರತೆ ಅಂದರೆ ಶೇ. 28 ರಷ್ಟು ನೀರಿನ ಕೊರತೆ ಕಂಡುಬಂದಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಕಾವೇರಿ ನೀರಿನ ವಿಚಾರವಾಗಿ ನಡೆದ ಸಭೆಯ ನಂತರ ನಡೆದ ಮಾಧ್ಯಮಗೋಷ್ಠಿ ಹಾಗೂ ಇಂದಿರಾಗಾಂಧಿ ಭವನದಲ್ಲಿ ಮಾತನಾಡಿದ ಅವರು “ಹಾರಂಗಿ ಶೇ.73, ಹೇಮಾವತಿ ಶೇ.55, ಕೆ.ಆರ್.ಎಸ್ ಶೇ.54, ಕಬಿನಿಯಲ್ಲಿ ಶೇ. 96 ರಷ್ಟು ನೀರಿನ ಪ್ರಮಾಣವಿದೆ. ಕಳೆದ ವರ್ಷ ಸಾಕಷ್ಟು ಕೊರತೆ ಉಂಟಾಗಿತ್ತು. ನಾಲ್ಕು ವರ್ಷಗಳ ಹಿಂದೆ ಸಮೃದ್ಧವಾಗಿ ಮಳೆಯಾದ ಕಾರಣ ಕೊರತೆ ಕಂಡು ಬಂದಿರಲಿಲ್ಲ” ಎಂದರು.

ಕಬಿನಿಯಿಂದ ತಮಿಳುನಾಡಿಗೆ ನೀರು ಬಿಡಲಾಗುತ್ತಿದೆಯೇ ಎಂದಾಗ “ಕಬಿನಿಯು ಶೇ96 ರಷ್ಟು ತುಂಬಿದ್ದು ಅಣೆಕಟ್ಟಿನ ಸುರಕ್ಷತೆ ದೃಷ್ಟಿಯಿಂದ ಒಳಹರಿವಿನ ಪ್ರಮಾಣದಷ್ಟೇ ನೀರನ್ನು ಹೊರಗೆ ಬಿಡಲಾಗುತ್ತಿದೆ” ಎಂದು ಹೇಳಿದರು.

ಇದನ್ನೂ ಓದಿ: Anchor Aparna: ನಿರೂಪಕಿ ಅಪರ್ಣಾ ಅವರ ತಂದೆ ಯಾರು ಗೊತ್ತಾ? ಇವರೂ ತುಂಬಾ ಫೇಮಸ್!

ಮಂಡ್ಯದಲ್ಲಿ ರೈತರ ಬೆಳೆಗಳಿಗೆ ನೀರು ಕೊಡಲಾಗುತ್ತದೆಯೇ ಎಂದು ಕೇಳಿದಾಗ “ಸರ್ವಪಕ್ಷಗಳ ಸಭೆ ನಡೆದ ಮೇಲೆ ಇದರ ಬಗ್ಗೆ ಉತ್ತರಿಸಲಾಗುವುದು” ಎಂದು ಹೇಳಿದರು.

“ನಮಗೆ ಮಳೆ ಕೊರತೆ ಉಂಟಾಗಿದೆ. ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ 1 ಟಿಎಂಸಿ ನೀರು ಹರಿಸಬೇಕು ಎಂದು ಹೇಳಿದೆ. ನಾನು ದೆಹಲಿಯಲ್ಲಿ ಇರುವ ವಕೀಲರಾದ ಮೋಹನ್ ಕಾತರಕಿ, ಶ್ಯಾಮ್ ದಿವಾನ್ ಅವರ ಬಳಿ ಮಾತನಾಡಿದ್ದೇನೆ. ಅವರು ಒಂದಷ್ಟು ಸಲಹೆಗಳನ್ನು ನೀಡಿದ್ದಾರೆ” ಎಂದು ತಿಳಿಸಿದರು.

ತುರ್ತು ಪರಿಸ್ಥಿತಿ ನಂತರವೂ ದೇಶದಲ್ಲಿ ಕಾಂಗ್ರೆಸ್ ಸರ್ಕಾರ ಬಂದಿದೆ:

ಜುಲೈ 25 ರಂದು ಬಿಜೆಪಿಯಿಂದ ಸಂವಿಧಾನ ಹತ್ಯಾ ದಿನ ಆಚರಣೆಯ ಘೋಷಣೆ ಬಗ್ಗೆ ಕೇಳಿದಾಗ “ತುರ್ತು ಪರಿಸ್ಥಿತಿಯ ನಂತರವೂ ಈ ದೇಶದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತ ನಡೆಸಿದೆ. ಇಂದಿರಾ ಗಾಂಧಿ, ರಾಜೀವ್ ಗಾಂಧಿ, ಪಿ.ವಿ.ನರಸಿಂಹರಾವ್, ಮನಮೋಹನ್ ಸಿಂಗ್ ಅವರು ದೇಶದ ಪ್ರಧಾನಿಗಳನ್ನಾಗಿ ಮಾಡಿದ್ದರು.ಈ ದೇಶದ ಜನತೆ ಕಾಂಗ್ರೆಸ್ ಪಕ್ಷದ ಮೇಲೆ ವಿಶ್ವಾಸ ಇಟ್ಟುಕೊಂಡಿದ್ದಾರೆ ಎನ್ನುವುದಕ್ಕೆ ಇದೇ ಸಾಕ್ಷಿ” ಎಂದು ಉತ್ತರಿಸಿದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News