ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ-3 ಪರೀಕ್ಷಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ

2nd PUC Exam 3 : ಇಂದಿನಿಂದ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-3 ಜಿಲ್ಲಾ ಮತ್ತು ತಾಲೂಕು ಹಂತದಲ್ಲಿ ನಡೆಯಲಿದೆ. ಪರೀಕ್ಷಾ ಕೇಂದ್ರಗಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಒಟ್ಟು 44,358 ಬಾಲಕರು, 31,637 ಬಾಲಕಿಯರು ಸೇರಿ 75,995 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 

Written by - Ranjitha R K | Last Updated : Jun 24, 2024, 09:35 AM IST
  • ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ-3
  • ಇಂದಿನಿಂದ ಜುಲೈ 5ರವರೆಗೆ ಪರೀಕ್ಷೆ ನಡೆಯಲಿದೆ‌.
  • ಒಟ್ಟು 248 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.
ರಾಜ್ಯಾದ್ಯಂತ ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ-3 ಪರೀಕ್ಷಾರ್ಥಿಗಳಿಗೆ ಉಚಿತ ಬಸ್  ಪ್ರಯಾಣ  title=

2nd PUC Exam 3 :ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ-3 ನಡೆಯಲಿದೆ. ಇಂದಿನಿಂದ ಜುಲೈ 5ರವರೆಗೆ ಪರೀಕ್ಷೆ ನಡೆಯಲಿದೆ‌. ಎಸ್‌ಎಸ್‌ಎಲ್ಸಿ ಮತ್ತು ದ್ವಿತೀಯ ಪಿಯುಸಿಗೆ ಮೂರು ವಾರ್ಷಿಕ ಪರೀಕ್ಷಾ ಪದ್ಧತಿ ಜಾರಿಯಾಗಿರುವ ಹಿನ್ನೆಲೆಯಲ್ಲಿ ಮೂರನೇ ಪರೀಕ್ಷೆ ಇಂದು ನಡೆಯಲಿದೆ. ರಾಜ್ಯದಲ್ಲಿ ಒಟ್ಟು 248 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. 

ಇಂದಿನಿಂದ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ-3 ಜಿಲ್ಲಾ ಮತ್ತು ತಾಲೂಕು ಹಂತದಲ್ಲಿ ನಡೆಯಲಿದೆ.ಪರೀಕ್ಷಾ ಕೇಂದ್ರಗಲ್ಲಿ ಸಿಸಿಟಿವಿ ಅಳವಡಿಸಲಾಗಿದೆ. ಒಟ್ಟು 44,358 ಬಾಲಕರು, 31,637 ಬಾಲಕಿಯರು ಸೇರಿ 75,995 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 

ಇದನ್ನೂ ಓದಿ : ಉದ್ಯೋಗ ಕ್ರಾಂತಿಗೆ ಹೊಸ ಮುನ್ನುಡಿ: ಐಟಿಐ, ಡಿಪ್ಲೊಮೊ ಕೋರ್ಸ್ ಪೂರ್ಣಗೊಳಿಸಿದವರಿಗೆ ವಿದೇಶದಲ್ಲಿ ಉದ್ಯೋಗ

ಕಲಾ ವಿಭಾಗದಲ್ಲಿ 19,113 ಬಾಲಕರು, 11,698 ಬಾಲಕಿಯರು ಸೇರಿ 30,811 ವಿದ್ಯಾರ್ಥಿಗಳು, ವಿಜ್ಞಾನ ವಿಭಾಗದಲ್ಲಿ 8,817 ಬಾಲಕರು, 10,966 ಬಾಲಕಿಯರು ಸೇರಿ ಒಟ್ಟು 19,783 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 16,428 ಬಾಲಕರು, 8,973 ಬಾಲಕಿಯರು ಸೇರಿ 25,401 ವಿದ್ಯಾರ್ಥಿಗಳು ಪರೀಕ್ಷೆ ನೋಂದಾಯಿಸಿ ಕೊಂಡಿದ್ದಾರೆ.

ಬೆಳಗ್ಗೆ 10:15ರಿಂದ ಮಧ್ಯಾಹ್ನ 1:30ರವರೆಗೆ ಮತ್ತು ಮಧ್ಯಾಹ್ನ 2:15ರಿಂದ 4:30 ಪರೀಕ್ಷೆ ನಡೆಯಲಿದೆ. ಪರೀಕ್ಷೆಯ ವೇಳಾಪಟ್ಟಿ ಹೀಗಿದೆ. 
ಜೂನ್‌ 24- ಕನ್ನಡ, ಅರೇಬಿಕ್
ಜೂನ್‌ 25- ಇಂಗ್ಲೀಷ್‌
ಜೂನ್‌ 26- ಸಮಾಜಶಾಸ್ತ್ರ , ಜೀವಶಾಸ್ತ್ರ, ಭೂಗರ್ಭ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
ಜೂನ್‌ 27- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ
ಜೂನ್‌ 28- ಅರ್ಥಶಾಸ್ತ್ರ, ರಸಾಯನಶಾಸ್ತ್ರ
ಜೂನ್‌ 29 – ಇತಿಹಾಸ, ಭೌತಶಾಸ್ತ್ರ
ಜುಲೈ 1 – ಗೃಹ ವಿಜ್ಞಾನ, ರಾಜ್ಯಶಾಸ್ತ್ರ, ಸಂಖ್ಯಾ ಶಾಸ್ತ್ರ
ಜುಲೈ 2 – ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಗಣಿತ, ಶಿಕ್ಷಣ ಶಾಸ್ತ್ರ
ಜುಲೈ 3 – ಭೂಗೋಳಶಾಸ್ತ್ರ, ಮನಃಶಾಸ್ತ್ರ, ಮೂಲಗಣಿತ
ಜುಲೈ 4- ಹಿಂದಿ
ಜುಲೈ 5- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್ ಹಾಗೂ ಹಿಂದೂಸ್ತಾನಿ ಸಂಗೀತ, ಮಾಹಿತಿ ತಂತ್ರಜ್ಞಾನ,ರೀಟೈಲ್‌, ಆಟೋ ಮೊಬೈಲ್‌, ಬ್ಯೂಟಿ ಮತ್ತು ವೆಲ್‌ನೆಸ್‌

ಇದನ್ನೂ ಓದಿ : ಮತ ನೀಡಿಲ್ಲ ಎಂದು ಕಾಲೋನಿಗೆ ಕುಡಿಯುವ ನೀರು ಬಂದ್!

ಇನ್ನು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಸರ್ಕಾರ ಉಚಿತ ಬಸ್ ಸೇವೆ ಕಲ್ಪಿಸಿದೆ. ಪರೀಕ್ಷಾ ದಿನಗಳಂದು ತಮ್ಮ ಹಾಲ್ ಟಿಕೆಟ್ ತೋರಿಸುವ ಮೂಲಕ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಗಳವರೆಗೆ ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ಬಸ್ ಗಳಲ್ಲಿ ಪರೀಕ್ಷಾ ದಿನಗಳಂದು ಪರೀಕ್ಷಾರ್ಥಿಗಳು ಉಚಿತ ಪ್ರಯಾಣ ಮಾಡಬಹುದಾಗಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News