2nd PUC Result date : ಈ ದಿನದಂದು ಹೊರಬೀಳಲಿದೆ ದ್ವಿತೀಯ ಪಿಯುಸಿ ಫಲಿತಾಂಶ
2nd PUC Result date : ಯಾವುದೇ ಅಡೆತಡೆಯಿಲ್ಲದೆ ದ್ವಿತೀಯ ಪಿಯು ಪರೀಕ್ಷೆಯು ಮುಕ್ತಾಯವಾಗಿದೆ. ಮುಂದಿನ ವಾರದಲ್ಲಿ ಮೌಲ್ಯಮಾಪನ ಪ್ರಾರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರು : 2nd PUC Result date : ನಿನ್ನೆಯಷ್ಟೇ ಎಸ್.ಎಸ್.ಎಲ್.ಸಿ ಫಲಿತಾಂಶ ಹೊರ ಬಿದ್ದಿದೆ. ಇದರ ಬೆನ್ನಲ್ಲೇ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶವನ್ನು ಜೂನ್ ಮೂರನೇ ವಾರದಲ್ಲಿ ಬಿಡುಗಡೆ ಮಾಡಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆಯು ಮುಂದಿನ ವಾರ ಪ್ರಾರಂಭವಾಗಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಯಾವುದೇ ಅಡೆತಡೆಯಿಲ್ಲದೆ ದ್ವಿತೀಯ ಪಿಯು ಪರೀಕ್ಷೆಯು ಮುಕ್ತಾಯವಾಗಿದೆ. ಮುಂದಿನ ವಾರದಲ್ಲಿ ಮೌಲ್ಯಮಾಪನ ಪ್ರಾರಂಭವಾಗಲಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದ್ದಾರೆ. ಇನ್ನು ಜೂನ್ ಮೂರನೇ ವಾರದಲ್ಲಿ ಫಲಿತಾಂಶವನ್ನು ಪ್ರಕಟಿಸುವುದಾಗಿ ಅವರು ಹೇಳಿದ್ದಾರೆ. ಫಲಿತಾಂಶಗಳು ಪ್ರಕಟವಾದ ನಂತರ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್ pue.karnataka.gov.in ಮತ್ತು karresults.nic.in ನಲ್ಲಿ ಫಲಿತಾಂಶಗಳನ್ನು ಪರಿಶೀಲಿಸಬಹುದು.
ಇದನ್ನೂ ಓದಿ : ಪುಸ್ತಕ ಬಹುಮಾನಕ್ಕಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿಯಿಂದ ಅರ್ಜಿ ಆಹ್ವಾನ
ಏಪ್ರಿಲ್ 22 ರಿಂದ ಮೇ 18 ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆದಿತ್ತು. ರಾಜ್ಯಾದ್ಯಂತ 1,076 ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಈ ವರ್ಷ ಆಫ್‌ಲೈನ್‌ನಲ್ಲಿ ಪರೀಕ್ಷೆ ನಡೆದಿದ್ದು, 6,84,255 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಿದ್ದಾರೆ.
ರಾಜ್ಯದಲ್ಲಿ 4 ದಿನ ವರುಣಾರ್ಭಟ: ರಾಜಧಾನಿಯಲ್ಲಿ ಕಟ್ಟೆಚ್ಚರ
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.