2nd PUC Result : ದ್ವಿತೀಯ ಫಲಿತಾಂಶ ಪ್ರಕಟ : ಬಾಲಕಿಯರದ್ದೇ ಮೇಲುಗೈ

2nd PUC Result : ಸರ್ಕಾರಿ ಪಿಯು ಕಾಲೇಜಿನಲ್ಲಿ 42 ಕಾಲೇಜು ಶೇ.100 ರಷ್ಟು ಫಲಿತಾಂಶ ಪಡೆದಿದ್ದು, ಯಾವುದೇ ಕಾಲೇಜು ಶೂನ್ಯ ಫಲಿತಾಂಶ ಪಡೆದುಕೊಂಡಿಲ್ಲ.  ಅನುದಾನಿತ ಪಿಯು ಕಾಲೇಜಿನಲ್ಲಿ 10 ಶೇ. 100 ರಷ್ಟು ಫಲಿತಾಂಶ 5 ಶೂನ್ಯ ಫಲಿತಾಂಶ, ಅನುದಾನ ರಹಿತ ಪಿಯು ಕಾಲೇಜಿನಲ್ಲಿ 264 ಕಾಲೇಜು ಶೇ.100 ಫಲಿತಾಂಶ, 73 ಕಾಲೇಜು ಶೂನ್ಯ ಫಲಿತಾಂಶ ಪಡೆದುಕೊಂಡಿವೆ.  

Written by - Zee Kannada News Desk | Edited by - Ranjitha R K | Last Updated : Apr 21, 2023, 12:39 PM IST
  • ದ್ವಿತೀಯ ಫಲಿತಾಂಶ ಪ್ರಕ
  • ದಕ್ಷಿಣ ಕನ್ನಡಕ್ಕೆ ಮೊದಲ ಸ್ಥಾನ
  • ಯಾದಗಿರಿಗೆ ಕಡೆಯ ಸ್ಥಾನ
2nd PUC Result : ದ್ವಿತೀಯ ಫಲಿತಾಂಶ ಪ್ರಕಟ : ಬಾಲಕಿಯರದ್ದೇ ಮೇಲುಗೈ title=

2nd PUC Result Declared : ದ್ವಿತೀಯ ಫಲಿತಾಂಶ ಪ್ರಕಟಗೊಂಡಿದ್ದು,  ಈ ಬಾರಿಯೂ ಬಾಲಕಿಯರದ್ದೇ ಮೇಲುಗೈ.  ಈ ಬಾರಿಯ ಫಲಿತಾಂಶದಲ್ಲಿ ದಕ್ಷಿಣ ಕನ್ನಡಕ್ಕೆ ಮೊದಲ ಸ್ಥಾನ, ಉಡುಪಿ ಎರಡನೇ ಸ್ಥಾನ, ಕೊಡಗು ಮೂರನೇ ಸ್ಥಾನ ಪಡೆದಿದ್ದರೆ ಯಾದಗಿರಿಗೆ ಕಡೆಯ ಸ್ಥಾನ ಬಂದಿದೆ. ಕಳೆದ ಬಾರಿಗಿಂತ ಈ ಬಾರಿ ಶೇ.12.79 ರಷ್ಟು ಹೆಚ್ಚು ಫಲಿತಾಂಶ ಬಂದಿದೆ.

ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೀಶ್ ಸಿಂಗ್ ಹಾಗೂ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ರಾಮಚಂದ್ರನ್ ಅವರಿಂದ ಫಲಿತಾಂಶ ಪ್ರಕಟಿಸಿದ್ದಾರೆ. ಮಾರ್ಚ್ ನಲ್ಲಿ ನಡೆದ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಾಜರಾದ 7,02,067 ವಿದ್ಯಾರ್ಥಿಗಳಲ್ಲಿ 5,24,209 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಶೇ. 74.67 ರಷ್ಟು ಫಲಿತಾಂಶ ಬಂದಿದೆ. ಕಲಾ ವಿಭಾಗದಲ್ಲಿ ಶೇ. 61.22 ವಾಣಿಜ್ಯ ವಿಭಾಗದಲ್ಲಿ ಶೇ. 75.89 ಹಾಗೂ ವಿಜ್ಞಾನ ವಿಭಾಗದಲ್ಲಿ ಶೇ.85.71 ರಷ್ಟು ಫಲಿತಾಂಶ ಬಂದಿದೆ.  

ಇದನ್ನೂ ಓದಿ : ಸಿಡಿಲು ಬಡಿದು ಬೇಲೂರು ಶ್ರೀ ಚನ್ನಕೇಶವ ಸ್ವಾಮಿ ದೇಗುಲ ಗೋಪುರಕ್ಕೆ ಹಾನಿ

3,49,901 ಬಾಲಕರು ಈ ಬಾರಿ ಪರೀಕ್ಷೆ ಬರೆದಿದ್ದು, ಇದರಲ್ಲಿ 2,41,607 ಬಾಲಕರು ತೇರ್ಗಡೆಯಾಗಿದ್ದಾರೆ. 3,52,166 ಬಾಲಕಿಯರು ಪರೀಕ್ಷೆ ಬರೆದಿದ್ದು ಇದರಲ್ಲಿ 2,82,602 ವಿದ್ಯಾರ್ಥಿನಿಯರು ತೇರ್ಗಡೆಯಾಗಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಬಾಲಕಿಯರದ್ದೇ ಮೇಲುಗೈ.  

ಕಲಾ ವಿಭಾಗದಲ್ಲಿ ಬೆಂಗಳೂರಿನ ಜಯನಗರದಲ್ಲಿರುವ ಎನ್ಎಂಕೆಆರ್ ವಿ ಕಾಲೇಜಿನ ವಿದ್ಯಾರ್ಥಿಬಿ ತಬಸುಂ ಶೇಖ್ 593 ಅಂಕ ಪಡೆದು ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಮೂಡಬಿದರೆಯ ಆಳ್ವಾಸ ಪಿಯು ಕಾಲೇಜಿನ ವಿದ್ಯಾರ್ಥಿನಿ ಅನಾನ್ಯ ಕೆ.ಎ 600 ಕ್ಕೆ 600 ಅಂಕ ಪಡೆದುಕೊಂಡು ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಕೋಲಾರದ ಗಂಗೋತ್ರಿ ಕಾಲೇಜಿನ ವಿದ್ಯಾರ್ಥಿ ಕೌಶಿಕ್ , ಮತ್ತು ಜಯನಗರ ಆರ್ ವಿ ಕಾಲೇಜಿನ ಸುರಭಿ ಎಸ್ 596 ಅಂಕ ಪಡೆದು ಮೊದಲ ಸ್ಥಾನ ಪಡೆದುಕೊಂಡಿದ್ದಾರೆ. 

ಇದನ್ನೂ ಓದಿ : ಮುಸ್ಲಿಂ ಮೀಸಲಾತಿ ರದ್ದತಿ: ಸುಪ್ರೀಂ ಕೋರ್ಟ್ ರಾಜ್ಯ ಸರ್ಕಾರಕ್ಕೆ ನೀಡಿರುವ ತಪರಾಕಿ ನಿರೀಕ್ಷಿತ-ಸಿದ್ದು

1,09,509 ವಿದ್ಯಾರ್ಥಿಗಳು ಶೇ.85 ಕ್ಕಿಂತ ಹೆಚ್ಚು ಅಂಕ, 2,47,315 ವಿದ್ಯಾರ್ಥಿಗಳು ಶೇ.60 ಕ್ಕೆ ಹೆಚ್ಚು, 90,014 ವಿದ್ಯಾರ್ಥಿಗಳು ಶೇ.50 ಕ್ಕಿಂತ ಹೆಚ್ಚು, 77,371 ವಿದ್ಯಾರ್ಥಿಗಳು ಶೇ.35 ಕ್ಕಿಂತ ಹೆಚ್ಚು ಅಂಕ ಪಡೆದುಕೊಂಡಿದ್ದಾರೆ. ಪ್ರತಿ ವರ್ಷದಂತೆ ಈ ವರ್ಷವೂ ಉತ್ತೀರ್ಣ ಹಂತದಲ್ಲಿ ಅನುತ್ತೀರ್ಣ ಆಗಿರುವ 15 ಸಾವಿರ ಮಕ್ಕಳಿಗೆ ಎರಡು ವಿಷಯಗಳಿಗೆ ತಲಾ ಐದು ಅಂಕದ ಗ್ರೇಸ್ ಮಾರ್ಕ್ಸ್ ಕೊಡಲಾಗುತ್ತದೆ .

ಸರ್ಕಾರಿ ಪಿಯು ಕಾಲೇಜಿನಲ್ಲಿ 42 ಕಾಲೇಜು ಶೇ.100 ರಷ್ಟು ಫಲಿತಾಂಶ ಪಡೆದಿದ್ದು, ಯಾವುದೇ ಕಾಲೇಜು ಶೂನ್ಯ ಫಲಿತಾಂಶ ಪಡೆದುಕೊಂಡಿಲ್ಲ.  ಅನುದಾನಿತ ಪಿಯು ಕಾಲೇಜಿನಲ್ಲಿ 10 ಶೇ. 100 ರಷ್ಟು ಫಲಿತಾಂಶ 5 ಶೂನ್ಯ ಫಲಿತಾಂಶ, ಅನುದಾನ ರಹಿತ ಪಿಯು ಕಾಲೇಜಿನಲ್ಲಿ 264 ಕಾಲೇಜು ಶೇ.100 ಫಲಿತಾಂಶ, 73 ಕಾಲೇಜು ಶೂನ್ಯ ಫಲಿತಾಂಶ ಪಡೆದುಕೊಂಡಿವೆ.  

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News