ಏಪ್ರಿಲ್ 30ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ

ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ 2017-18ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ 30ರಂದು ಪ್ರಕಟವಾಗಲಿದೆ.

Last Updated : Apr 14, 2018, 05:35 PM IST
ಏಪ್ರಿಲ್ 30ಕ್ಕೆ ದ್ವಿತೀಯ ಪಿಯುಸಿ ಫಲಿತಾಂಶ title=

ಬೆಂಗಳೂರು:  ಮಾರ್ಚ್ ತಿಂಗಳಿನಲ್ಲಿ ನಡೆದಿದ್ದ 2017-18ನೇ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಏಪ್ರಿಲ್ 30ರಂದು ಪ್ರಕಟವಾಗಲಿದೆ.

ಈ ಬಗ್ಗೆ ಪದವಿಪೂರ್ವ ಶಿಕ್ಷಣ ಇಲಾಖೆ ಮಾಹಿತಿ ನೀಡಿದ್ದು, ಏ.30ರಂದು ಸಂಜೆ ಇಲಾಖೆಯ ವೆಬ್ಸೈಟ್ www.pue.kar.nic.in ನಲ್ಲಿ ಫಲಿತಾಂಶ ಪ್ರಕಟವಾಗಲಿದ್ದು, ಮೇ.1ರಂದು ಆಯಾ ಕಾಲೇಜುಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ತಿಳಿಸಿದೆ. 

ಈ ಬಾರಿ ಪರೀಕ್ಷೆಯಲ್ಲಿ ಸುಮಾರು 6 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2.73 ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು. ರಾಜ್ಯಾದ್ಯಂತ 2817 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.

Trending News