ರಾಜ್ಯದಲ್ಲಿ ಮತ್ತೆ 3 ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ...!
ಸತತ ಮಳೆಯಿಂದ ತತ್ತರಿಸಿರುವ ರಾಜ್ಯದ ಒಳನಾಡಿನಲ್ಲಿ ಮತ್ತೆ 3 ದಿನ ಮಳೆ
ಬೆಂಗಳೂರು: ಸತತ ಮಳೆಯಿಂದ ತತ್ತರಿಸಿರುವ ರಾಜ್ಯದ ಒಳನಾಡಿನಲ್ಲಿ ಮತ್ತೆ 3 ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರು ಹಾಗೂ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ(Rain)ಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಸಚಿವ ಸ್ಥಾನನಕ್ಕಾಗಿ ಪಟ್ಟು- ರೆಬಲ್ ಆದ ಜಾರಕಿಹೊಳಿ ಅಂಡ್ ಟೀಮ್!
ಈಶಾನ್ಯ ಮುಂಗಾರು ಚುರುಕಾಗಿದ್ದು, ರಾಜ್ಯದಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಕಂಡುಬಂದಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಾತಾವರಣದಲ್ಲಿ ಉಂಟಾಗುತ್ತಿರುವ ಬದಲಾವಣೆಗಳಿಂದಾಗಿ ಮೋಡ ಕವಿದ ವಾತಾವರಣವಿದ್ದು, ತಂಪಾದ ಮೇಲ್ಮೈ ಗಾಳಿ ಬೀಸುತ್ತಿದೆ. ಇದರಿಂದ ಕೆಲವೆಡೆ ಚದುರಿದಂತೆ ಸಾಧಾರಣ ಮಳೆಯಾಗಬಹುದು. ಭಾರೀ ಮಳೆಯಾಗುವ ಮುನ್ಸೂಚನೆಗಳಿಲ್ಲ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ.
ಬಿಹಾರ ಸಿಎಂ ಆಯ್ಕೆಗೆ ಇಂದು NDA ಸಭೆ: ನಿರ್ಧಾರವಾಗುತ್ತಾ ನಿತೀಶ್ ಕುಮಾರ್ ಭವಿಷ್ಯ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಾಧ್ಯತೆಗಳಿದ್ದು, ನ.18ರಂದು ತಮಿಳುನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಂಭವವಿದೆ. ಪರಿಣಾಮ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ, ಮಂಡ್ಯ, ಚಾಮರಾಜನಗರ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಹಾಗೂ ಪೂರ್ವ ಭಾಗದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.
ಕೊನೆಗೂ 'ಗ್ರಾ. ಪಂ. ಚುನಾವಣೆ'ಗೆ ಮುಹೂರ್ತ ಫಿಕ್ಸ್..!