ಬೆಂಗಳೂರು : ಮುಂಗಾರು ಆಗಮನದ ಬಳಿಕ ಬಿರುಸಾಗಿದ್ದ ಮಳೆ, ರಾಜ್ಯದಲ್ಲಿ ಕಳೆದೊಂದು ವಾರದಿಂದ ಕೊಂಚ ಕಡಿಮೆಯಾಗಿದೆ. ಆದರೆ, ಇಂದಿನಿಂದ ಮತ್ತೆ ಮಳೆಯ ಆರ್ಭಟ ಶುರುವಾಗಲಿದ್ದು, 3 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈ ಹಿನ್ನೆಲೆಯಲ್ಲಿ ಕರಾವಳಿಯಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ.


COMMERCIAL BREAK
SCROLL TO CONTINUE READING

ಕರಾವಳಿ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗಲಿದ್ದು, ಜೂನ್ 27ರಿಂದ ರಾಜ್ಯಾದ್ಯಂತ ಬಹುತೇಕ ಪ್ರದೇಶಗಳಲ್ಲಿ ವರುಣನ ಆರ್ಭಟ ಹೆಚ್ಚಲಿದೆ. ಜೂನ್ 30ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ(India Meteorological Department) ಮಾಹಿತಿ ನೀಡಿದೆ.


ಇದನ್ನೂ ಓದಿ : Unlock Karnataka: ಹೊಸ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರ್ಕಾರ


ಬೆಂಗಳೂರಿನಲ್ಲಿ ಕೂಡ ಇಂದು ಮಳೆ(Rainfall)ಯಾಗುವ ಸಾಧ್ಯತೆಯಿದೆ. ಈಗಾಗಲೇ ನೆರೆಯ ರಾಜ್ಯಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಕರ್ನಾಟಕದಲ್ಲೂ ಮತ್ತೊಂದು ಹಂತದ ಮಳೆ ಮತ್ತೆ ಶುರುವಾಗುವ ನಿರೀಕ್ಷೆಯಿದೆ.


ಇದನ್ನೂ ಓದಿ : BMTC-KSRTC Bus Service : ವಿಕೇಂಡ್‌ ಕರ್ಫ್ಯೂನಲ್ಲಿಯೂ ಇರಲಿದೆ BMTC,KSRTC ಬಸ್‌ ಸಂಚಾರ


ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದು ಸಾಧಾರಣ ಮಳೆ(Karnataka in Rainfall)ಯಾಗಲಿದೆ. ಆದರೆ, ಕರಾವಳಿಯಲ್ಲಿ ಇಂದು ಮಳೆಯ ಅಬ್ಬರ ಹೆಚ್ಚಾಗಲಿದೆ. ಜೂನ್ 27ರಿಂದ 29ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ನಿನ್ನೆ ಕೂಡ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಿದ್ದು, ಇಂದು ಕೂಡ ಮಳೆ ಮುಂದುವರೆಯಲಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಇಂದು ಬೆಳಗ್ಗೆಯಿಂದಲೇ ಮಳೆ ಸುರಿಯಲಿದೆ.


ಇದನ್ನೂ ಓದಿ : Viral Photo: ಮಣ್ಣಿನಲ್ಲೇ ಸಿದ್ದಪಡಿಸಿದ ಮಕ್ಕಳ 5G ಸ್ಮಾರ್ಟ್ ಫೋನ್...!


ಜೂನ್ 28ರಿಂದ 2 ದಿನ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಉತ್ತರ ಒಳನಾಡಿನಲ್ಲಿ ಜೂನ್ 28ರವರೆಗೆ ಸಾಧಾರಣ ಮಳೆಯಾಗಲಿದೆ. ಗುರುಗು ಸಹಿತ ಭಾರೀ ಮಳೆ(Heavy Rain)ಯ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಜೂನ್ 27ರಿಂದ 30ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.


ಇದನ್ನೂ ಓದಿ : Basaveshwara Statue : ವಿಧಾನಸೌಧ ಆವರಣದಲ್ಲಿ ತಲೆ ಎತ್ತಲಿದೆ 'ಭಕ್ತಿ ಭಂಡಾರಿ ಬಸವಣ್ಣ'ನ ಪ್ರತಿಮೆ!


ದಕ್ಷಿಣ ಕನ್ನಡ ಮತ್ತು ಉಡುಪಿ(Udupi) ಜಿಲ್ಲೆಯ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಇಂದು ಬೆಳಗ್ಗೆಯಿಂದಲೇ ಮಳೆ ಆರಂಭವಾಗಿದೆ. ಗುರುಗು ಸಹಿತ ಭಾರೀ ಮಳೆಯ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಜೂನ್ 27ರಿಂದ 30ರವರೆಗೆ ಹಳದಿ ಅಲರ್ಟ್ ಘೋಷಿಸಲಾಗಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.