Heavy Rainfall : ಮುಂಗಾರು ಮಳೆ ಚುರುಕು ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ!

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ.

Last Updated : Jun 15, 2021, 10:18 AM IST
  • ಮುಂಗಾರು ಮಳೆ ಚುರುಕುಗೊಂಡಿರುವ ಪರಿಣಾಮ
  • ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರೀ ಮಳೆ
  • ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ
Heavy Rainfall : ಮುಂಗಾರು ಮಳೆ ಚುರುಕು ರಾಜ್ಯದಲ್ಲಿ ಇನ್ನೂ 3 ದಿನ ಭಾರೀ ಮಳೆ! title=

ಬೆಂಗಳೂರು : ಮುಂಗಾರು ಮಳೆ ಚುರುಕುಗೊಂಡಿರುವ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 3 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿ ಜಿಲ್ಲೆಗಳಾದ ಉಡುಪಿ , ದಕ್ಷಿಣ , ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು , ಆರೆಂಜ್ ಅಲರ್ಟ್(Orange Alert) ಘೋಷಿಸಲಾಗಿದೆ . ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು , ಶಿವಮೊಗ್ಗ , ಕೊಡಗು ಮತ್ತು ಹಾಸನದಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಎರಡು ದಿನ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಇದನ್ನೂ ಓದಿ : SSLC Exam Postponed : ಜೂನ್‌ 21ರಿಂದ ನಡೆಯಬೇಕಿದ್ದ 'SSLC ಪರೀಕ್ಷೆ' ಮತ್ತೆ ಮುಂದೂಡಿಕೆ!

ಇನ್ನು ಬೆಳಗಾವಿ , ಧಾರವಾಡ , ಗದಗ, ಕೊಪ್ಪಳ , ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ನಾಳೆಯಿಂದ ಮಳೆ(Rainfall)ಯಾಗುವ ಸಾಧ್ಯತೆ ಇದ್ದು , ಯೆಲ್ಲೋ ಅಲರ್ಟ್ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇದನ್ನೂ ಓದಿ : BJP Core Committee Meeting : ರಾಜ್ಯ 'ಬಿಜೆಪಿ ಕೋರ್ ಕಮಿಟಿ' ಸಭೆಗೆ ದಿನಾಂಕ ಫಿಕ್ಸ್!

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕ(Karnataka)ದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಕರ್ನಾಟಕದ ಉಡುಪಿ, ಒಡಿಶಾ, ಕೇರಳದ ಕೊಳಿಕೋಡ್, ವಯನಾಡಿನಲ್ಲಿ ಇಂದು ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಕರಾವಳಿ ರಾಜ್ಯಗಳಾದ ಮಹಾರಾಷ್ಟ್ರ, ಗೋವಾ, ಕರ್ನಾಟಕ ಮತ್ತು ಕೇರಳದಲ್ಲಿ ಇಂದು ಅಧಿಕ ಮಳೆಯಾಗಲಿದೆ.

ಇದನ್ನೂ ಓದಿ : BS Yediyurappa : ಕೊರೋನಾದಿಂದ ಸಾವನ್ನಪ್ಪಿದವರ ಕುಟುಂಬಕ್ಕೆ ₹ 1 ಲಕ್ಷ ಪರಿಹಾರ!

ಕರ್ನಾಟಕದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಈಗಾಗಲೇ ಜಲಾಶಯಗಳಿಗೆ ಭಾರೀ ನೀರು(Water) ಹರಿದುಬರುತ್ತಿದ್ದು, ನದಿಗಳು ತುಂಬಿಹರಿಯುತ್ತಿವೆ. ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​ ಘೋಷಣೆ ಆಗಿರುವುದರಿಂದ ನಾಲ್ಕೈದು ದಿನ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಜೂನ್​ನಿಂದ ಸೆಪ್ಟೆಂಬರ್​ವರೆಗೆ ಮಳೆಯ ಆರ್ಭಟವಿರಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಈ ವರ್ಷ ಸಾಧಾರಣದಿಂದ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ.

ಇದನ್ನೂ ಓದಿ : BS Yediyurappa : 'ಹೊರಗಿನಿಂದ ಬೆಂಗಳೂರಿಗೆ ಬರುವವರಿಗೆ ಕೊರೋನಾ ಟೆಸ್ಟ್ ಕಡ್ಡಾಯ'

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News