ಹಾಸನದಲ್ಲಿ ಭೀಕರ ಅಪಘಾತ : 3 ಸಾವು

   

Last Updated : Dec 5, 2017, 02:37 PM IST
ಹಾಸನದಲ್ಲಿ ಭೀಕರ ಅಪಘಾತ : 3 ಸಾವು title=

ಹಾಸನ: ಜಿಲ್ಲೆಯ ಆಲೂರು ತಾಲೂಕಿನ ರಾಷ್ಚ್ರೀಯ ಹೆದ್ದಾರಿ 75ರಲ್ಲಿ ಎರಡು ಬಸ್ಗಳ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಮೂವರು ಮೃತಪಟ್ಟಿದ್ದು, 25 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 

ಬೆಳಗಿನ ಜಾವ 2.30ರ ಸುಮಾರಿಗೆ ಕೆಎಸ್‌ಆರ್‌ಟಿಸಿ ವೋಲ್ವೊ ಬಸ್ ಹಾಗೂ ಸ್ಲೀಪರ್ ಕೋಚ್ ದುರ್ಗಾಂಬಾ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಗಾಯಾಳುಗಳನ್ನು ಹತ್ತಿರದ ಮಂಗಳ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. 

ಈ ಕುರಿತು ಆಲೂರು ತಾಲೂಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Trending News