ತಡೆಗೋಡೆ ನಿರ್ಮಾಣದ ವೇಳೆ ಮಣ್ಣು ಕುಸಿದ ಪರಿಣಾಮ 3 ಕಾರ್ಮಿಕರು ಸಾವು

ತಡೆಗೋಡೆ ನಿರ್ಮಾಣದ ವೇಳೆ ಮಣ್ಣು ಕುಸಿದ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟ ಘಟನೆಯು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಗುರುಂಪು ಎಂಬಲ್ಲಿ ಸಂಭವಿಸಿದೆ.

Written by - Zee Kannada News Desk | Last Updated : Mar 25, 2023, 04:24 PM IST
  • ಮೃತಪಟ್ಟ ಮೂವರು ಗದಗ ಮೂಲದ ಕಾರ್ಮಿಕರು ಎಂದು ತಿಳಿದು ಬಂದಿದೆ
  • ಮನೆಯ ಹಿಂಬದಿಯಲ್ಲಿ ತಡೆಗೋಡೆ ನಿರ್ಮಾಣ ಕಾರ್ಯವನ್ನು ನಡೆಸಲಾಗಿತ್ತು
  • ಮಧ್ಯಾಹ್ನದ ವೇಳೆ ಇಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು
ತಡೆಗೋಡೆ ನಿರ್ಮಾಣದ ವೇಳೆ ಮಣ್ಣು ಕುಸಿದ ಪರಿಣಾಮ 3 ಕಾರ್ಮಿಕರು ಸಾವು title=

ಮಂಗಳೂರು: ತಡೆಗೋಡೆ ನಿರ್ಮಾಣದ ವೇಳೆ ಮಣ್ಣು ಕುಸಿದ ಪರಿಣಾಮ ಮೂವರು ಕಾರ್ಮಿಕರು ಮೃತಪಟ್ಟ ಘಟನೆಯು ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲೂಕಿನ ಗುರುಂಪು ಎಂಬಲ್ಲಿ ಸಂಭವಿಸಿದೆ.

ಇದನ್ನೂ ಓದಿ :"ಸಮುದಾಯಗಳ ನಡುವೆ ವೈಮನಸ್ಸು ಬೆಳೆಯುವಂತೆ ಮಾಡುವುದು ಬಿಜೆಪಿಯ ದುರುದ್ದೇಶ"

ಮೃತಪಟ್ಟ ಮೂವರು ಗದಗ ಮೂಲದ ಕಾರ್ಮಿಕರು ಎಂದು ತಿಳಿದು ಬಂದಿದೆ. ಮನೆಯ ಹಿಂಬದಿಯಲ್ಲಿ ತಡೆಗೋಡೆ ನಿರ್ಮಾಣ ಕಾರ್ಯವನ್ನು ನಡೆಸಲಾಗಿತ್ತು. ಮಧ್ಯಾಹ್ನದ ವೇಳೆ ಇಲ್ಲಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಆದರೆ ಇದ್ದಕ್ಕಿದ್ದಂತೆ ಮಣ್ಣು ಕುಸಿದಿದ್ದು ಇಬ್ಬರು ಪುರುಷರು ಹಾಗೂ ಓರ್ವ ಮಹಿಳಾ ಕಾರ್ಮಿಕರು ಮಣ್ಣಿನಡಿಗೆ ಸಿಲುಕಿದ್ದರು.

ಇದನ್ನೂ ಓದಿ : 72 ಲಕ್ಷ ರೂ ಕದ್ದ ಆರೋಪದ ಮೇಲೆ ಸೋನು ನಿಗಮ್ ತಂದೆಯ ಮಾಜಿ ಚಾಲಕನ ವಿರುದ್ಧ ಪ್ರಕರಣ

ಮಾಹಿತಿ ತಿಳಿಯುತ್ತಿದ್ದಂತೆಯೇ ಅಗ್ನಿಶಾಮಕದಳ ಹಾಗೂ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ಜೆಸಿಬಿ ಸಹಾಯದಿಂದ ಸುಮಾರು ಒಂದು ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿದ ಬಳಿಕ ಮೂವರು ಕಾರ್ಮಿಕರ ಮೃತದೇಹವನ್ನು ಹೊರತೆಗೆಯಲಾಗಿದೆ.

ಮೃತಪಟ್ಟವರ ಪೈಕಿ ಇಬ್ಬರ ಗುರುತು ಸಿಕ್ಕಿದ್ದು ಗದಗದ ಮುಂಡರಗಿ ಮೂಲದ ಶಾಂತಾ ಹಾಗೂ ಸೋಮಶೇಖರ್​ ದಂಪತಿ ಎಂದು ತಿಳಿದು ಬಂದಿದೆ. ಮೃತದೇಹಗಳನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

 

Trending News