K Sudhakar : 'ರಾಜ್ಯದಲ್ಲಿ 300ಕ್ಕೂ ಹೆಚ್ಚು ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆ'

ರಾಜ್ಯದಲ್ಲಿ ಇಲ್ಲಿಯವರೆಗೆ ಒಟ್ಟು 300ಕ್ಕೂ ಅಧಿಕ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

Last Updated : May 24, 2021, 05:51 PM IST
  • ರಾಜ್ಯದಲ್ಲಿ ಇಲ್ಲಿಯವರೆಗೆ ಒಟ್ಟು 300ಕ್ಕೂ ಅಧಿಕ ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆ
  • ಬ್ಲ್ಯಾಕ್ ಫಂಗಸ್ ಎಲ್ಲಿಂದ ಬರುತ್ತಿದೆ ಎಂದು ಕಂಡು ಹಿಡಿಯಲು ಸಮಿತಿ
  • ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಬ್ಲ್ಯಾಕ್ ಫಂಗಸ್ ಗೆ ಚಿಕಿತ್ಸೆ ನೀಡಲು ವ್ಯವಸ್ಥೆ
K Sudhakar : 'ರಾಜ್ಯದಲ್ಲಿ 300ಕ್ಕೂ ಹೆಚ್ಚು ಬ್ಲ್ಯಾಕ್ ಫಂಗಸ್ ಪ್ರಕರಣ ಪತ್ತೆ' title=

ಬೆಂಗಳೂರು : ರಾಜ್ಯದಲ್ಲಿ ಇಲ್ಲಿಯವರೆಗೆ ಒಟ್ಟು 300ಕ್ಕೂ ಅಧಿಕ ಬ್ಲ್ಯಾಕ್ ಫಂಗಸ್ ಪ್ರಕರಣಗಳು ಪತ್ತೆಯಾಗಿವೆ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಇಂದು ನಗರದಲ್ಲಿ ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಸುಧಾಕರ್(K Sudhakar), ಬ್ಲ್ಯಾಕ್ ಫಂಗಸ್ ಎಲ್ಲಿಂದ ಬರುತ್ತಿದೆ ಎಂದು ಕಂಡು ಹಿಡಿಯಲು ಸಮಿತಿ ತಯಾರಿಸಲಾಗಿದೆ, ಈ ಸಮಿತಿ ನೀಡಿದ ವರದಿಯಲ್ಲಿ 300ಕ್ಕೂ ಹೆಚ್ಚು ಬ್ಲ್ಯಾಕ್ ಫಂಗಸ್ ಸೋಂಕಿತರು ಇದ್ದಾರೆ ಎಂದು ಪ್ರಾಥಮಿಕ ವರದಿಯಲ್ಲಿ ತಿಳಿಸಿದ್ದಾರೆ. 

ಇದನ್ನೂ ಓದಿ : Tight Lockdown : ರಾಜ್ಯದಲ್ಲಿ ಇಂದಿನಿಂದ ಮತ್ತಷ್ಟು 'ಟೈಟ್ ಲಾಕ್ ಡೌನ್' ಜಾರಿ! 

ಸ್ಟೀರಾಯಿಡ್ ಜೊತೆಗೆ ಹ್ಯುಮಿಡಿಫೈರ್ ನಲ್ಲಿ ನೀರು ಬಳಕೆ, ಐಸಿಯು ವೆಂಟಿಲೇಟರ್ ಅನ್ನು ಇನ್ನೊಬ್ಬರಿಗೆ ಬಳಸುವಾಗ, ಒಂದೇ ಮಾಸ್ಕ್(Mask) ದೀರ್ಘಕಾಲ ಬಳಕೆ, ಟ್ಯೂಬ್, ಹಾಸಿಗೆ ಮೊದಲಾದ ಮೂಲಗಳಿಂದ ಸೋಂಕು ತಗಲುತ್ತದೆ ಎಂದು ವರದಿಯಲ್ಲಿ ಹೇಳಲಾಗಿದೆ. ಇದನ್ನು ತಡಗಟ್ಟುವ ಬಗೆಯನ್ನೂ ಇದರಲ್ಲಿ ತಿಳಿಸಲಾಗಿದೆ ಎಂದರು.

ಇದನ್ನೂ ಓದಿ : ಜುಲೈನಲ್ಲಿ PUC, ಆಗಸ್ಟ್ ನಲ್ಲಿ SSLC ಪರೀಕ್ಷೆ ನಡೆಸುವ ಸಾಧ್ಯತೆ!

ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಬ್ಲ್ಯಾಕ್ ಫಂಗಸ್(Black Fungus) ಗೆ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಲಾಗಿದೆ. 17 ಮೆಡಿಕಲ್ ಕಾಲೇಜುಗಳಲ್ಲಿ ಕೂಡ ವ್ಯವಸ್ಥೆ ಇದೆ. ಆದರೆ ಔಷಧಿ ಸ್ವಲ್ಪ ಕೊರತೆ ಇದೆ. ಈ ಬಗ್ಗೆ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರ ಜೊತೆ ಚರ್ಚಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : Southwest Monsoon : ರಾಜ್ಯಕ್ಕೆ ಜೂನ್ ಮೊದಲ ವಾರದಲ್ಲಿ ನೈಋತ್ಯ ಮುಂಗಾರು ಮಳೆ..!

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News