ಬಳ್ಳಾರಿ: ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ ಪ್ರಸ್ತಕ ಸಾಲಿಗೆ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ತಿಳಿಸಿದ್ದಾರೆ.ಅರ್ಜಿ ಸಲ್ಲಿಸಲು ಸೆ.21 ಕೊನೆಯ ದಿನವಾಗಿದೆ.


COMMERCIAL BREAK
SCROLL TO CONTINUE READING

ಯೋಜನೆಗಳು:


ಉದ್ಯೋಗಿನಿ ಯೋಜನೆ:


ಇದನ್ನೂ ಓದಿ: ಮೂಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ, ಮತ್ತವರ ಕುಟುಂಬದ ಪಾತ್ರವಿದೆ; ದಾಖಲೆ ಇಟ್ಟ ಹೆಚ್.ಡಿ.ಕುಮಾರಸ್ವಾಮಿ


ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕ್‌ಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ನೀಡಲಾತ್ತದೆ. ವಯೋಮಿತಿ 18 ರಿಂದ 55 ವರ್ಷ ಒಳಗಿರಬೇಕು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಘಟಕ ವೆಚ್ಚವು ಕನಿಷ್ಟ ರೂ.1 ಲಕ್ಷದಿಂದ ಗರಿಷ್ಟ ರೂ.3 ಲಕ್ಷ (ಸಹಾಯಧನ ಶೇ.50) ಮತ್ತು ಸಾಮಾನ್ಯ ವರ್ಗದವರಿಗೆ ಘಟಕ ವೆಚ್ಚ ಗರಿಷ್ಟ ರೂ.3 ಲಕ್ಷ (ಸಹಾಯಧನ ಶೇ.30 ರಷ್ಟು) ನೀಡಲಾಗುವುದು.


ಚೇತನ ಯೋಜನೆ:


ದಮನಿತ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ.30 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತದೆ.


ಧನಶ್ರೀ ಯೋಜನೆ:


ಹೆಚ್‌ಐವಿ ಸೋಂಕಿತ ಮಹಿಳೆಯರಿಗೆ ಸ್ವಯಂ ಉದ್ಯೋಗ ಕೈಗೊಳ್ಳಲು ರೂ.30 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತದೆ.


ಇದನ್ನೂ ಓದಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ: ವಿವಿಧ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ


ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ:


ಲಿಂಗತ್ವ ಅಲ್ಪಸಂಖ್ಯಾತ ಫಲಾನುಭವಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ.30 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತದೆ.


ಮಾಜಿ ದೇವದಾಸಿ ಮಹಿಳೆಯರ ಪುನರ್ವಸತಿ ಯೋಜನೆ:


1993-94 ಮತ್ತು 2007-08 ರ ಸಮೀಕ್ಷೆಯಲ್ಲಿ ಗುರುತಿಸಿರುವ ಮಾಜಿ ದೇವದಾಸಿ ಮಹಿಳೆಯರಿಗೆ ಆದಾಯೋತ್ಪನ್ನ ಚಟುವಟಿಕೆ ಕೈಗೊಳ್ಳಲು ರೂ.30 ಸಾವಿರ ಪ್ರೋತ್ಸಾಹಧನ ನೀಡಲಾಗುತ್ತದೆ.


ಸೂಚನೆ:


ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸೀಡಿಂಗ್ ಮಾಡಿಸಿರಬೇಕು. ಉದ್ಯೋಗಿನಿ ಯೋಜನೆಯ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಬಳಕೆಯಾಗದ ಅನುದಾನದಡಿ ಸೌಲಭ್ಯ ಪಡೆಯಲು ಇಚ್ಚಿಸುವ ಫಲಾಪೇಕ್ಷಿಗಳು, ಅರ್ಜಿದಾರರು ಸೇವಾಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು.
ಅರ್ಜಿ ಸಲ್ಲಿಸಲು ಆನ್‌ಲೈನ್ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಗೆ ಭೇಟಿ ನೀಡಬಹುದು. ಬಾಪೂಜಿ ಸೇವಾ ಕೇಂದ್ರ, ಗ್ರಾಮ ಒನ್, ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.
ಸರ್ಕಾರದ ವಿವೇಚನಾ ಕೋಟಾ ಮತ್ತು ನಿಗಮದ ವಿವೇಚನಾ ಕೋಟಾದಡಿ ಸೌಲಭ್ಯ ಪಡೆಯಲು ಇಚ್ಚಿಸುವ ಫಲಾಪೇಕ್ಷಿಗಳು ಸಚಿವರು, ಶಾಸಕರು, ನಿಗಮದ ಅಧ್ಯಕ್ಷರ ಶಿಫಾರಸ್ಸು ಪತ್ರ ಪಡೆದು ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಬೇಕು.
ಈ ಹಿಂದೆ ಮೇಲ್ಕಂಡ ಯೋಜನೆಗಳಡಿ ಸೌಲಭ್ಯ ಪಡೆದ ಫಲಾನುಭವಿಗಳು ಸಲ್ಲಿಸಿದ ಅರ್ಜಿಗಳನ್ನು  ತಿರಸ್ಕರಿಸಲಾಗುವುದು. 2023-24ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿ ಸೌಲಭ್ಯ ಪಡೆಯದೇ ಇರುವವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅಗತ್ಯವಿರುವುದಿಲ್ಲ.


ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕರ ಕಚೇರಿ ಹಾಗೂ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ಅಭಿವೃದ್ಧಿ ನಿರೀಕ್ಷಕರ ಕಚೇರಿಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ