ಬೆಂಗಳೂರು: ಶನಿವಾರದಂದು ಕರ್ನಾಟಕದ ಕೋಲಾರ ಜಿಲ್ಲೆಯ ವೈದ್ಯಕೀಯ ಕಾಲೇಜಿನ 33 ವಿದ್ಯಾರ್ಥಿಗಳಿಗೆ ಕೋವಿಡ್ -19 ಧೃಡಪಟ್ಟಿದೆ.


COMMERCIAL BREAK
SCROLL TO CONTINUE READING

ಎಲ್ಲಾ ವಿದ್ಯಾರ್ಥಿಗಳನ್ನು ಆಸ್ಪತ್ರೆಯಲ್ಲಿ ಪ್ರತ್ಯೇಕಿಸಲಾಗಿದೆ ಎಂದು ಡಾ.ಚರಣಿ ತಿಳಿಸಿದ್ದಾರೆ.ಏತನ್ಮಧ್ಯೆ, ದೇಶದಲ್ಲಿ ಹೆಚ್ಚುತ್ತಿರುವ ಓಮಿಕ್ರಾನ್ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು ಬೆಂಗಳೂರಿನಲ್ಲಿ ಭಾನುವಾರ ತಜ್ಞರೊಂದಿಗೆ ಸಭೆ ನಡೆಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


ಇದನ್ನೂ ಓದಿ: ಈ ಕಾರಣಗಳಿಗಾಗಿ ವಿರಾಟ್ ಕೊಹ್ಲಿಯನ್ನು ಹೊಗಳಿದ ಟೀಮ್ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್


"ದೇಶದಲ್ಲಿ ಓಮಿಕ್ರಾನ್ ಹೆಚ್ಚುತ್ತಿದೆ. ಮಹಾರಾಷ್ಟ್ರ,ಕೇರಳ ಮತ್ತು ತಮಿಳುನಾಡಿನಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿವೆ ಎಂಬುದು ನನ್ನ ಭಯ. ಇದು ನಮಗೆ ಭೀತಿಯನ್ನು ಹೆಚ್ಚಿಸಿದೆ.ಬೆಂಗಳೂರು ತಲುಪಿದ ನಂತರ, ನಾನು ಎಲ್ಲಾ ಪ್ರಮುಖರೊಂದಿಗೆ ಚರ್ಚಿಸಿ ನಿರ್ಧರಿಸುತ್ತೇನೆ.ಸದ್ಯದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.


ಬೂಸ್ಟರ್ ಡೋಸ್ ನೀಡುವ ಸಾಧ್ಯತೆಯ ಕುರಿತು ಕೇಳಿದ ಪ್ರಶ್ನೆಗೆ, ಕೇಂದ್ರವು ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತದೆ ಎಂದು ಬೊಮ್ಮಾಯಿ ಹೇಳಿದರು. 


ಇದನ್ನೂ ಓದಿ: Harbhajan Singh: ಕ್ರಿಕೆಟ್‌ನಿಂದ ನಿವೃತ್ತಿಯ ಬಳಿಕ ಹರ್ಭಜನ್ ಸಿಂಗ್ ರಾಜಕೀಯಕ್ಕೆ ಬರುತ್ತಾರಾ?


ರಾಜ್ಯದಲ್ಲಿ ಈ ಹಿಂದೆ ನೀಡಿದ್ದ ಮಾರ್ಗಸೂಚಿಗಳನ್ನೇ ಈಗಲೂ ಮುಂದುವರಿಸಲಾಗಿದೆ.ಆದಾಗ್ಯೂ, ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ, ಹೆಚ್ಚು ಕಠಿಣ ಕ್ರಮಗಳಿಗೆ ಮುಂದಾಗಬಹುದು ಎನ್ನಲಾಗಿದೆ.ಕರ್ನಾಟಕವು 31 ಓಮಿಕ್ರಾನ್ ಪ್ರಕರಣಗಳನ್ನು ಕಂಡಿದೆ ಮತ್ತು ಹೆಚ್ಚಿನ ಸೋಂಕಿತ ವ್ಯಕ್ತಿಗಳು ಲಕ್ಷಣರಹಿತರಾಗಿದ್ದಾರೆ. ಅಪ್ರಾಪ್ತರನ್ನು ಹೊರತುಪಡಿಸಿ ಎಲ್ಲರಿಗೂ ಲಸಿಕೆ ಹಾಕಲಾಗಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.