Old Mysore : ಹಳೆ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ಬಿಜೆಪಿ ಬಿಗ್ ಪ್ಲಾನ್!

ಹಳೆ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ಬಿಜೆಪಿ ನಾಯಕರು ಪಣ ತೊಟ್ಟಿದ್ದಾರೆ. ಇತ್ತೀಚಿಗೆ ಮಂಡ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ನೀಡಿದ ಬೆನ್ನಲಿ ಬಿಜೆಪಿಯಲ್ಲಿ ಭಾರಿ  ಬದಲಾವಣೆಯಾಗಿದೆ. ಹೇಗೆಂದರೆ, ಹೈ ಕಮಾಂಡ್ ಸೂಚನೆ ಪ್ರಕಾರ ಬಿಜೆಪಿ ಕಾರ್ಯಕರ್ತರ ಅಲರ್ಟ್ ಆಗಿದ್ದಾರೆ.

Written by - Channabasava A Kashinakunti | Last Updated : Jan 3, 2023, 11:40 AM IST
  • ಹಳೆ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ಬಿಜೆಪಿ ನಾಯಕರ ಪಣ
  • ಇತ್ತೀಚಿಗೆ ಮಂಡ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ
  • ಹೈ ಕಮಾಂಡ್ ಸೂಚನೆ ಪ್ರಕಾರ ಬಿಜೆಪಿ ಕಾರ್ಯಕರ್ತರ ಅಲರ್ಟ್
Old Mysore : ಹಳೆ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ಬಿಜೆಪಿ ಬಿಗ್ ಪ್ಲಾನ್! title=

ಮೈಸೂರು : ಹಳೆ ಮೈಸೂರು ಭಾಗದಲ್ಲಿ ಕಮಲ ಅರಳಿಸಲು ಬಿಜೆಪಿ ನಾಯಕರು ಪಣ ತೊಟ್ಟಿದ್ದಾರೆ. ಇತ್ತೀಚಿಗೆ ಮಂಡ್ಯಕ್ಕೆ ಕೇಂದ್ರ ಸಚಿವ ಅಮಿತ್ ಶಾ ಭೇಟಿ ನೀಡಿದ ಬೆನ್ನಲಿ ಬಿಜೆಪಿಯಲ್ಲಿ ಭಾರಿ  ಬದಲಾವಣೆಯಾಗಿದೆ. ಹೇಗೆಂದರೆ, ಹೈ ಕಮಾಂಡ್ ಸೂಚನೆ ಪ್ರಕಾರ ಬಿಜೆಪಿ ಕಾರ್ಯಕರ್ತರ ಅಲರ್ಟ್ ಆಗಿದ್ದಾರೆ.

ಮಂಡ್ಯ ಜಿಲ್ಲೆಯ ಏಳು ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲಲು ರಣತಂತ್ರ ರೂಪಿಸಿದ್ದಾರೆ. ಅದಕ್ಕಾಗಿ, ಬಿಜೆಪಿ ಕಾರ್ಯಕರ್ತರ ಬಲ ವರ್ದನೆಗೆ ಮುಂದಾಗಿದ್ದಾರೆ. ಚುನಾವಣಾ ಚಾಣಕ್ಯನ ಅಣತೆಯಂತೆ ಕಾರ್ಯಕ್ರಮಗಳನ್ನ ಸಿದ್ದಗೊಳಿಸಿದ್ದಾರೆ. ಮೊದಲ ಹಂತದಲ್ಲಿ ಬಿಜೆಪಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದರಿಂದ ಶ್ರೀರಂಗಪಟ್ಟಣ ವಿಧಾನ ಸಭಾ ಕ್ಷೇತ್ರದಲ್ಲಿ ಜೆಡಿಎಸ್-ಕಾಂಗ್ರೆಸ್ ಪಕ್ಷದಿಂದ ಬಿಜೆಪಿಗೆ ಹಲವರು ಸೇರ್ಪಡೆಯಾಗಿದ್ದಾರೆ.  ಬಿಜೆಪಿ ಮುಖಂಡ ಇಂಡವಾಳು ಸಚ್ಚಿದಾನಂದ ನೇತೃತ್ವದಲ್ಲಿ ಸೇರ್ಪಡೆಯಾಗಿದ್ದಾರೆ. ಈ ಕಾರ್ಯಕ್ರಮವನ್ನು ಶ್ರೀರಂಗಪಟ್ಟಣ ವಿಧಾನ ಸಭಾ ಕ್ಷೇತ್ರದ ಬೇವಿನಹಳ್ಳಿಯಲ್ಲಿ ಹಮ್ಮಿಕೊಳ್ಳಲಾಗಿತ್ತು. 

ಇದನ್ನೂ ಓದಿ : Siddheshwar swamiji Death : ಸಿದ್ದೇಶ್ವರ ಶ್ರೀಗಳ ನಿಧನಕ್ಕೆ ಕಲಾವಿದನಿಂದ ವಿಶೇಷ ಗೌರವ ಶ್ರದ್ಧಾಂಜಲಿ!

ಇಂಡವಾಳು ಗ್ರಾಮ ಪಂಚಾಯತ ಮುನಿಸ್ವಾಮಿ, ಮಾಜಿ ಅಧ್ಯಕ್ಷ ಸ್ವಾಮಿ, ಗ್ರಾ.ಪಂ ಸದಸ್ಯ ತೇಜಸ್ ತ್ರಿಲೋಕ್‌ ಅಭಿರಘು, ಸತ್ಯ, ಶೈಲಜಾ ವಿಷಕಂಠ, ಯೋಗೇಶ್, ನವೀನ್ ಕೃಷ್ಣ, ಕೃಷ್ಣಚಾರ್ ಜ್ಯೋತಿ, ನಂಜೇಗೌಡ್ರು. ಚೇತನ್, ತಮ್ಮೇಗೌಡ್ರು ಸೇರಿ ಹಲವರು ಸೇರ್ಪಡೆ. ಕೊತ್ತತ್ತಿ ಹೋಬಳಿಯ ಸುಮಾರು 450  ಜನರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. 

ಈ ಕಾರ್ಯಕ್ರಮವನ್ನು ಸಚಿವ ಕೆ.ಸಿ.ನಾರಾಯಣ್ ಗೌಡ ಉದ್ಘಾಟಿಸಿದರು. ಅಲ್ಲದೆ, ಕಾರ್ಯಕ್ರಮದಲ್ಲಿ ಸಚಿವ ಕೆ.ಗೋಪಾಲಯ್ಯ,ವಿಧಾನಪರಿಷತ್ ಸದಸ್ಯ ಸಿಪಿ ಯೋಗೀಶ್ವರ್ ಸೇರಿ ಹಲವರು ಭಾಗಿಯಾಗಿದ್ದರು.

ಇದನ್ನೂ ಓದಿ : ಶಾಂತಿ ಸುವ್ಯವಸ್ಥೆಯಿಂದ ಸಿದ್ದೇಶ್ವರ ಸ್ವಾಮೀಜಿಗಳ ಅಂತಿಮ ಯಾತ್ರೆ ಮಾಡೋಣ : ಸಿಎಂ ಬೊಮ್ಮಾಯಿ

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News