ಬೆಂಗಳೂರು: ಜುಲೈ 1ರಿಂದ ಜುಲೈ 19ರವರೆಗೆ ರಾಜ್ಯಾದ್ಯಂತ ಧಾರಾಕಾರ ಮಳೆಯಾಗಿದ್ದು ಜನ ಜೀವನ ಅಸ್ತವ್ಯಸ್ತವಾಗಿದೆ. ಹವಾಮಾನ ಇಲಾಖೆ ಮಾಹಿತಿ ಪ್ರಕಾರ 365 ಮಿಮೀ ಮಳೆಯಾಗಬೇಕಿತ್ತು. ಆದರೆ, 462 ಮಿಮೀ ಮಳೆಯಾಗುವ ಮೂಲಕ ಕರಾವಳಿ ಭಾಗ, ಉತ್ತರ ಕರ್ನಾಟಕ ಭಾಗ ಸೇರಿದಂತೆ ಇನ್ನು ಹಲವೆಡೆ ಆಗಿರುವ ಅವಾಂತರಕ್ಕೆ ಇದೇ ಕಾರಣ ಎಂದು ಹೇಳಲಾಗಿದೆ.
ಅಂದ್ರೆ ವಾಡಿಕೆಗಿಂತ ಶೇ.27 ರಷ್ಟು ಹೆಚ್ಚು ಮಳೆ ಬಿದ್ದಿದೆ ಇದಕ್ಕೆ ಪ್ರಮುಖ ಕಾರಣ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನಲ್ಲಿ ಶೇ.76, ಉತ್ತರ ಒಳನಾಡಿನಲ್ಲಿ ಶೇ.21, ಮಲೆನಾಡಿನಲ್ಲಿ ಶೇ. 25 ಹಾಗೂ ಕರಾವಳಿಯಲ್ಲಿ ಶೇ.21 ವಾಡಿಕೆಗಿಂತ ಹೆಚ್ಚು ಮಳೆ ಸುರಿದಿದೆ ಎಂದು ತಿಳಿಸಿದೆ.
ಮಂಗಳವಾರ ಹಲವೆಡೆ ಚದುರಿದಂತೆ ಸಾಧಾರಣ ಮಳೆಯಾಗಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ರಾಜ್ಯದ ಬಹುತೇಕ ಜಲಾಶಗಳು ಭರ್ತಿ;
ಕರ್ನಾಟಕದಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ರಾಜ್ಯದ ಬಹುತೇಕ ಜಲಾಶಯಗಳಲ್ಲಿ ನೀರಿನ ಪ್ರಮಾಣ ಏರಿಕೆಯಾಗಿದೆ. ಸಧ್ಯ ಮಳೆ ಕಡಿಮೆಯಾದ್ರೂ ಗಾಳಿಯ ವೇಗ ಕಡಿಮೆ ಆಗದ ಕಾರಣ ಕರಾವಳಿ ಭಾಗದ ಮೀನುಗಾರರಿಗೆ ಸಮುದ್ರಕ್ಕೆ ತೆರೆಳದಂತೆ ಎಚ್ಚರಿಕೆ ನೀಡಲಾಗಿದೆ.
ಜುಲೈ ತಿಂಗಳ ಮೊದಲ ವಾರದಿಂದ ರಾಜ್ಯದಲ್ಲಿ ಸುರಿಯುತ್ತಿದ್ದ ಮುಂಗಾರು ಮಳೆ ಕೊನೆಗೂ ಬಿಡುವು ಕೊಟ್ಟಿದೆ. ಮುಂದಿನ 4 ದಿನ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದ್ದು, ಅದಾದ ಬಳಿಕ ಮಳೆಯ ತೀವ್ರತೆ ಹೇಗಿರಲಿದೆ ಎಂಬುದರ ಬಗ್ಗೆ ಮಾಹಿತಿ ನೀಡಲಾಗುತ್ತೆ ಎಂದು ಹವಾಮಾನ ಇಲಾಖೆ ಹೇಳಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.