ಬೆಂಗಳೂರು : ರಾಜ್ಯದಲ್ಲಿ ಕೆಲವು ದಿನಗಳಿಂದ ಅಬ್ಬರಿಸುತ್ತಿರುವ ಮಳೆ ಮುಂದಿನ 5 ದಿನ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


COMMERCIAL BREAK
SCROLL TO CONTINUE READING

ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುತ್ತಿದ್ದು, ಮುಂದಿನ 48 ಗಂಟೆ ಆರೆಂಜ್ ಅಲರ್ಟ್(Orange Alert) ಘೋಷಿಸಲಾಗಿದೆ. ಜೂನ್ 20 ರಿಂದ ಮುಂದಿನ 2 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.


ಇದನ್ನೂ ಓದಿ : ಕನ್ನಡ ಭಾಷೆಯನ್ನು ಕಡೆಗಣಿಸಿದ ಲೋಕಸಭಾ ಸಚಿವಾಲಯ...!


ಮಲೆನಾಡು ಜಿಲ್ಲೆಗಳಾದ ಶಿವಮೊಗ್ಗ, ಕೊಡಗು ಮತ್ತು ಹಾಸನದಲ್ಲಿ ಜೂನ್ 18 ರಂದು ಆರೆಂಜ್ ಮತ್ತು ಜೂನ್ 19 ರಂದು ಯೆಲ್ಲೋ ಅಲರ್ಟ್ ಇದ್ದರೆ, ಬೆಳಗಾವಿ, ಬೀದರ್ ಕಲಬುರಗಿಯಲ್ಲೂ ಭಾರೀ ಮಳೆ(Heavy Rain)ಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.


ಇದನ್ನೂ ಓದಿ : Karnataka Unlock 2.O : ರಾಜ್ಯದಲ್ಲಿ ಮಾಲ್, ರೆಸ್ಟೋರೆಂಟ್, ಮದುವೆ ಮಂಟಪ ತೆರೆಯಲು ಗ್ರೀನ್ ಸಿಗ್ನಲ್!


ಕರ್ನಾಟಕ(Karnataka)ದಲ್ಲಿ ಉತ್ತಮ ಮಳೆಯಾಗುತ್ತಿರುವುದರಿಂದ ಈಗಾಗಲೇ ಜಲಾಶಯಗಳಿಗೆ ಭಾರೀ ನೀರು ಹರಿದುಬರುತ್ತಿದ್ದು, ನದಿಗಳು ತುಂಬಿಹರಿಯುತ್ತಿವೆ. ಕರಾವಳಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್​ ಘೋಷಣೆ ಆಗಿರುವುದರಿಂದ ನಾಲ್ಕೈದು ದಿನ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಮುನ್ನೆಚ್ಚರಿಕೆ ನೀಡಲಾಗಿದೆ. ಜೂನ್​ನಿಂದ ಸೆಪ್ಟೆಂಬರ್​ವರೆಗೆ ಮಳೆಯ ಆರ್ಭಟವಿರಲಿದೆ ಎಂದು ತಜ್ಞರು ತಿಳಿಸಿದ್ದಾರೆ. ಮಳೆಯ ಆರ್ಭಟದಿಂದ ಜಲಪಾತಗಳಿಗೆ ಮರುಜೀವ ಬಂದಿದೆ.


ಇದನ್ನೂ ಓದಿ : BMTC Bus Service : ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ : ಜೂ.​ 21ರಿಂದ ರಸ್ತೆಗಿಳಿಯಲಿವೆ BMTC ಬಸ್!​


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.