ಬೆಂಗಳೂರು:  ಶ್ರೀನಿವಾಸ ನಗರ, ಸಿದ್ದಾರೂಢ ಮಠದ ಹತ್ತಿರ ಹಳೆ ಹುಬ್ಬಳ್ಳಿಯ ಪ್ರಶಾಂತ ರಾಯಕರ್, ಪ್ರಭಾಕರ ರಾಯಕರ ಅನ್ನುವವರು ಶ್ರೀ ರೇಣುಕಾ ಲಕ್ಷ್ಮೀ ಅಸೋಸಿಯೇಟ್ಸ್‍ನ ಆನಂದ ಹಬೀಬ ಮತ್ತು ಇತರರು ಹುಬ್ಬಳ್ಳಿ ತಾಲೂಕಾ ನಾಗಶೆಟ್ಟಿ ಗ್ರಾಮದಲ್ಲಿ ಅಭಿವೃದ್ಧಿಪಡಿಸುತ್ತಿರುವ ಶ್ರೀ ಗಣೇಶ ಟೌನಶಿಪ್‍ನಲ್ಲಿ ನಿವೇಶನ ಖರೀದಿ 5 ಲಕ್ಷ ರೂಪಾಯಿ ಆನಂದ ಹಬೀಬ ರವರಿಗೆ ಮುಂಗಡ ಹಣ ಕೊಟ್ಟು ಒಪ್ಪಂದ ಮಾಡಿಕೊಂಡಿದ್ದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: "ಬೇರೆ ಪಕ್ಷಗಳು ಸೋಲುತ್ತವೆ ಎಂದು ಆ ಪಕ್ಷಗಳಲ್ಲಿ ಟಿಕೆಟ್ ಆಕಾಂಕ್ಷಿಗಳು ಕಡಿಮೆ ಇದ್ದಾರೆ"


ಆದರೂ ಬಿಲ್ಡರ್ ತನಗೆ ನಿವೇಶನ ಖರೀದಿ ಮಾಡಿಕೊಡದೇ ಸೇವಾ ನ್ಯೂನ್ಯತೆ ಎಸಗಿ ಮೋಸ ಮಾಡಿದ್ದಾರೆ ಅಂತಾ ಬಿಲ್ಡರ್‍ರವರ ಮೇಲೆ ಕ್ರಮ ಕೈಗೊಳ್ಳುವಂತೆ ಫಿರ್ಯಾದಿದಾರರು ಜಿಲ್ಲಾ ಗ್ರಾಹಕರ ಆಯೋಗಕ್ಕೆ ದೂರು ಸಲ್ಲಿಸಿದ್ದರು.


ಸದರಿ ದೂರಿನ ಬಗ್ಗೆ ಕೂಲಂಕುಷವಾಗಿ ವಿಚಾರಣೆ ನಡೆಸಿದ ಆಯೋಗದ ಅಧ್ಯಕ್ಷರಾದ ಈಶಪ್ಪ ಭೂತೆ, ವಿ.ಅ. ಬೋಳಶೆಟ್ಟಿ ಹಾಗೂ ಪಿ.ಸಿ ಹಿರೇಮಠ ಸದಸ್ಯರು ದೂರುದಾರರಿಂದ ಮುಂಗಡವಾಗಿ ಪಡೆದ ಹಣವನ್ನು ಡೆವಲಪರ್ ತಮ್ಮ ವೈಯಕ್ತಿಕ ಅಭಿವೃದ್ಧಿಗಾಗಿ ಉಪಯೋಗಿಸಿಕೊಂಡು ಅವರಿಗೆ ನಿವೇಶನ ಕೊಡದೇ ಗ್ರಾಹಕರ ರಕ್ಷಣಾ ಕಾಯಿದೆ ಅಡಿ ಸೇವಾ ನ್ಯೂನ್ಯತೆ ಎಸಗಿ ಮೋಸ ಮಾಡಿರುತ್ತಾರೆ ಅಂತಾ ಅಭಿಪ್ರಾಯಪಟ್ಟು ತೀರ್ಪು ನೀಡಿದೆ.


ಇದನ್ನೂ ಓದಿ: DBoss ಮೇಲೆ ಚಪ್ಪಲಿ ಎಸೆತ : ನುಗುತ್ತಲೇ ʼಪರವಾಗಿಲ್ಲ ಬಿಡು ಚಿನ್ನʼ ಎಂದ ಯಜಮಾನ..!


ಈ ಬಗ್ಗೆ ಶ್ರೀ ರೇಣುಕಾ ಲಕ್ಷ್ಮೀ ಅಸೋಸಿಯೇಟ್ ರವರು ದೂರುದಾರರಿಂದ ಪಡೆದ ರೂ.5,00,000/- ಗಳನ್ನು ದಿ:02/01/2014 ರಿಂದ ಶೇ9% ರಂತೆ ಬಡ್ಡಿ ಲೆಕ್ಕ ಹಾಕಿ ಕೊಡುವಂತೆ ಹಾಗೂ ಮಾನಸಿಕ ತೊಂದರೆಗೆ ರೂ.50,000/- ಪರಿಹಾರ ಮತ್ತು ಪ್ರಕರಣದ ಖರ್ಚು ವೆಚ್ಚ ರೂ.10,000/- ಒಂದು ತಿಂಗಳ ಒಳಗಾಗಿ ಕೊಡುವಂತೆ ಆಯೋಗ ಆದೇಶಿಸಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.