ಅತೃಪ್ತರಿಗೆ 5 ಸ್ಟಾರ್ ಹೋಟೆಲ್, ಸಂತ್ರಸ್ತರಿಗೆ ಗಂಜಿ ಕೇಂದ್ರವೂ ಇಲ್ಲ: ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ

ಅತೃಪ್ತ ಶಾಸಕರನ್ನು ಮುಂಬೈಗೆ ಕಳುಹಿಸಲು ವಿಶೇಷ ವಿಮಾನ ವ್ಯವಸ್ಥೆ ಕಲ್ಪಿಸಿದವರು ಇಂದು ಬಡ ಜನರು ಪ್ರವಾಹದಲ್ಲಿ ಸಾಯುತ್ತಿದ್ದರೂ ಒಂದು ಹೆಲಿಕಾಪ್ಟರ್ ವ್ಯವಸ್ಥೆ ಕೂಡ ಮಾಡಿಲ್ಲ- ಜೆಡಿಎಸ್

Last Updated : Aug 8, 2019, 11:40 AM IST
ಅತೃಪ್ತರಿಗೆ 5 ಸ್ಟಾರ್ ಹೋಟೆಲ್, ಸಂತ್ರಸ್ತರಿಗೆ ಗಂಜಿ ಕೇಂದ್ರವೂ ಇಲ್ಲ: ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿ title=
Representative image

ಬೆಂಗಳೂರು: ಮೈತ್ರಿ ಸರ್ಕಾರವನ್ನು ಪತನಗೊಳಿಸುವ ಸಲುವಾಗಿ ಬಂಡಾಯ ಶಾಸಕರಿಗೆ ವಿಶೇಷ ವಿಮಾನ, ಪಂಚತಾರಾ ಹೋಟೆಲ್ ನಂತಹ ಐಶಾರಮಿ ವ್ಯವಸ್ಥೆ ಮಾಡಲು ಮುಂದಿದ್ದ ಬಿಜೆಪಿ, ಉತ್ತರ ಕರ್ನಾಟಕ ಪ್ರವಾಹಕ್ಕೆ ಸಿಲುಕಿ ನಲುಗುತ್ತಿದ್ದರೂ ಪ್ರವಾಹ ಸಂತ್ರಸ್ತರಿಗಾಗಿ ಗಂಜಿ ಕೇಂದ್ರವನ್ನೂ ಸ್ಥಾಪಿಸಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಜೆಡಿಎಸ್ ಕಿಡಿಕಾರಿದೆ.

 ಉತ್ತರ ಕರ್ನಾಟಕದಲ್ಲಿ ಮಳೆಯ ಆರ್ಭಟಕ್ಕೆ ಪ್ರವಾಹ ಪರಿಸ್ಥಿತಿ ಉಂಟಾಗಿದ್ದು, ಜನರು ತತ್ತರಿಸಿ ಹೋಗುತ್ತಿದ್ದಾರೆ. ಆದರೆ ರಾಜ್ಯ ಸರ್ಕಾರ ಮಾತ್ರ ಅವರ ರಕ್ಷಣೆಗೆ ಬಾರದಿರುವುದು ದುರದೃಷ್ಟಕರ ಸಂಗತಿ ಎಂದು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿರುವ ಜೆಡಿಎಸ್, ಅತೃಪ್ತ ಶಾಸಕರನ್ನು ಮುಂಬೈಗೆ ಕಳುಹಿಸಲು ವಿಶೇಷ ವಿಮಾನ ವ್ಯವಸ್ಥೆ ಕಲ್ಪಿಸಿದವರು ಇಂದು ಬಡ ಜನರು ಪ್ರವಾಹದಲ್ಲಿ ಸಾಯುತ್ತಿದ್ದರೂ ಒಂದು ಹೆಲಿಕಾಪ್ಟರ್ ವ್ಯವಸ್ಥೆ ಕೂಡ ಮಾಡಿಲ್ಲ!

ಅತೃಪ್ತ ಶಾಸಕರಿಗೆ ಮುಂಬೈನಲ್ಲಿ ಉಳಿಯಲು 5 ಸ್ಟಾರ್ ಹೋಟೆಲ್ ವ್ಯವಸ್ಥೆ ಮಾಡಿದವರು ಇಂದು ಬಡ ಜನರಿಗೆ ಗಂಜಿ ಕೇಂದ್ರವನ್ನೂ ಸ್ಥಾಪಿಸಿಲ್ಲ ಎಂದು ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ವಾಗ್ಧಾಳಿ ನಡೆಸಿದೆ.

Trending News