ಕಲಬುರಗಿ: ರಾಜ್ಯ ಸರ್ಕಾರ ಕೆ.ಕೆ.ಆರ್.ಡಿ.ಬಿ. ಮಂಡಳಿಗೆ ಪ್ರಸಕತ್ 2023-24ನೇ ಆಯವ್ಯಯದಲ್ಲಿ ಘೋಷಿಸಿರುವ 5,000 ಕೋಟಿ ರೂ. ಅನುದಾನ ಸಂಪೂರ್ಣವಾಗಿ ಇದೇ ವರ್ಷದಲ್ಲಿ ಖರ್ಚು ಮಾಡಬೇಕು. ಈ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು, ಸಂಬಂಧಿಸಿದ ಸಚಿವರು ನಿರಂತರ ಈ ಬಗ್ಗೆ ಪ್ರಗತಿ ಪರಿಶೀಲನೆ ಮಾಡಬೇಕು ಎಂದು ರಾಜ್ಯಸಭೆ ವಿಪಕ್ಷ ನಾಯಕ ಡಾ.ಮಲ್ಲಿಕಾರ್ಜುನ ಖರ್ಗೆ ಹೇಳಿದರು.
ಶನಿವಾರ ಕಲಬುರಗಿ ನಗರದ ಎನ್.ವಿ.ಮೈದಾನದಲ್ಲಿ ಇಂಧನ ಇಲಾಖೆ ಆಯೋಜಿಸಿದ ಐತಿಹಾಸಿಕ "ಗೃಹ ಜ್ಯೋತಿ" ಚಾಲನೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಭಾಗವಹಿಸಿ ಮಾತನಾಡಿದ ಅವರು, ಆಯವ್ಯಯದಲ್ಲಿ ಘೋಷಣೆಗೆ ಸೀಮಿತವಾಗದೇ ಪ್ರದೇಶದ ಅಭಿವೃದ್ಧಿಗೆ ಹಣ ಬಳಕೆಯಾಗಬೇಕು. ಈ ನಿಟ್ಟಿನಲ್ಲಿ ಪ್ರದೇಶದ ಸಚಿವರು ಹೆಚ್ಚು ಮುತುವರ್ಜಿ ವಹಿಸಬೇಕು ಎಂದರು.
ತಾವು ಈ ಹಿಂದೆ 9 ತಿಂಗಳು ಅಲ್ಪ ಕಾಲ ಕೇಂದ್ರ ರೈಲ್ವೆ ಸಚಿವರಾಗಿದ್ದಾಗ ರಾಜ್ಯದಲ್ಲಿ 37 ಹೊಸ ರೈಲು ಓಡಿಸಿದ್ದೆ. ಸಾವಿರಾರು ಕೋಟಿ ರೂ. ಅನುದಾನ ರಾಜ್ಯಕ್ಕೆ ತಂದು ರೈಲ್ವೆ ಮೂಲಸೌಕರ್ಯ ಬಲಪಡಿಸಿದ್ದೇನೆ. ಯಾವುದೇ ಕೆಲಸ ಆಗಬೇಕಾದರೆ ಇಚ್ಛಾಶಕ್ತಿ ತುಂಬಾ ಮುಖ್ಯ ಎಂದರು.
ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ ಶಿಕ್ಷಣದ ವ್ಯವಸ್ಥೆ ತುಂಬಾ ಕೆಳಮಟ್ಟದಲ್ಲಿದೆ. ಪ್ರತಿ ವರ್ಷ ಎಸ್.ಎಸ್.ಎಲ್.ಸಿ., ಪಿ.ಯು.ಸಿ. ಫಲಿತಾಂಶ ಬಂದಾಗ ರ್ಯಾಂಕಿಂಗ್ ಪಟ್ಟಿ ನೋಡುವಾಗ ನಾವು ಕೆಳಗಿನಿಂದ ನೋಡಬೇಕಾದ ಪರಿಸ್ಥಿತಿ ಇದೆ. ಇದು ಬದಲಾಗಬೇಕಿದೆ. ಇದಕ್ಕೆ ಮೂಲ ಕಾರಣ ಇಲ್ಲಿ ಗಣಿತ, ಇಂಗ್ಲೀμï, ವಿಜ್ಞಾನ ಶಿಕ್ಷಕರು ಇಲ್ಲದಿರುವುದು. ಶಿಕ್ಷಕರ ಸಮಸ್ಯೆ ನೀಗಿಸಿದಲ್ಲಿ ನಮ್ಮ ಮಕ್ಕಳು ಇತರರಂತೆ ವಿದ್ಯಾವಂತರಾಗಲಿದ್ದಾರೆ. ಪ್ರದೇಶದಲ್ಲಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಕ್ಕೆ ಸರ್ಕಾರದ ಹೆಚ್ಚಿನ ಆದ್ಯತೆ ನೀಡಬೇಕು, ಮೂಲಸೌಕರ್ಯ ಹೆಚ್ಚಿಸಬೇಕು ಎಂದರು.
ಇದನ್ನೂ ಓದಿ-ಓಂ ಸಿನಿಮಾ ತರ ರೌಡಿಸಂ ಬಿಡಿಸಿ ಒಳ್ಳೆ ಜೀವನ ನಡೆಸಲು ಮುಂದಾಗಿದ್ದ ಸಿದ್ದಾಪುರ ಮಹೇಶನ ಹೆಂಡತಿ..!
ರಾಜ್ಯದಲ್ಲಿ ನಮ್ಮ ಪಕ್ಷದ ಸರ್ಕಾರ ಅಸ್ತಿತ್ವಕ್ಕೆ ಬಂದು 2 ತಿಂಗಳಾಗಿವೆ. ಈಗಲೇ 5 ವರ್ಷಗಳ ಯೋಜನೆಗಳು ಜಾರಿಗೆ ವಿರೋಧ ಪಕ್ಷಗಳು ಒತ್ತಾಯ ಮಾಡಡುತ್ತಿರುವುದು ಹಾಸ್ಯಸ್ಪದವಾಗಿದೆ. 5 ವರ್ಷದ ಕೆಲಸಗಳನ್ನು2 ತಿಂಗಳಲ್ಲಿ ಮಾಡಲು ಇದು ಜಾದೂ ಅಲ್ಲ ಎಂದ ಅವರು, ಹಂತ-ಹಂತವಾಗಿ ಚುನಾವಣಾ ಪೂರ್ವ ನೀಡಿದ ಎಲ್ಲಾ ಭರವಸೆಗಳನ್ನು ಈಡೇರಿಸಲಾಗುತ್ತದೆ ಎಂದ ಅವರು 3 ದಶಕದಿಂದ ಆಗದ 371ಜೆ ತಿದ್ದುಪಡಿ ಕೆಲಸವನ್ನು ಹಿಂದಿನ ನಮ್ಮ ಸರ್ಕಾರದ ಅವಧಿಯಲ್ಲಿಯೇ ನಿಮ್ಮೆಲ್ಲರ ಆಶೀರ್ವಾದದಿಂದ ನಾನು ಮಾಡಿರುವೆ ಎಂದು ಡಾ.ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು.
ರಾಷ್ಟ್ರೀಯ ಹೆದ್ದಾರಿಗಳು ಮೇಲ್ದರ್ಜೇಗೇರಿಸಿ: ಪ್ರದೇಶದ ಸರ್ವಾಂಗೀಣ ಅಭಿವೃದ್ಧಿಗೆ ಇಲ್ಲಿನ ರಾಷ್ಟ್ರೀಯ ಹೆದ್ದಾರಿಗಳನ್ನು ದ್ವಿಪಥದಿಂದ ಆರು ಪಥಕ್ಕೆ ಮೇಲ್ದರ್ಜೇಗೇರಿಸಬೇಕು. ಬೆಂಗಳೂರು-ಮೈಸೂರು 10 ಪಥ ಇವೆ. ಇಲ್ಲಿ ದ್ವಿಪಥ ರಸ್ತೆಗಳೇ ಸರಿಯಾಗಿಲ್ಲ. ರಸ್ತೆ ಅಭಿವೃದ್ಧಿಯ ಪ್ರತೀಕವಾಗಿವೆ. ಈ ನಿಟ್ಟಿನಲ್ಲಿ ಸರ್ಕಾರದಿಂದಾಗಲಿ, ಜಂಟಿ ಸಹಭಾಗಿತ್ವ, ಪಿ.ಪಿ.ಪಿ. ಮಾಡೆಲ್ ಯಾವುದೇ ವಿಧದಲ್ಲಿ ರಸ್ತೆ ನಿರ್ಮಾಣಕ್ಕೆ ಮುಖ್ಯಮಂತ್ರಿಗಳು ಗಮನ ಹರಿಸಬೇಕು ಎಂದರು.
ನುಡಿದಂತೆ ನಡೆಯುವ ಸಂಪ್ರದಾಯ ಮುಂದುರೆಸಿದ್ದೇವೆ: ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ. ಶರಣಪ್ರಕಾಶ ಪಾಟೀಲ ಅವರು ಪ್ರಸ್ತಾವಿಕವಾಗಿ ಮಾತನಾಡಿ, ಚುನಾವಣಾ ಪೂರ್ವ ನೀಡಿದ ವಾಗ್ಧಾನದಂತೆ 3 ತಿಂಗಳಿನಲ್ಲಿ ಶಕ್ತಿ ಯೋಜನೆ, ಅನ್ನಭಾಗ್ಯ, ಗೃಹ ಜ್ಯೋತಿ ಪ್ರಮುಖ ಮೂರು ಗ್ಯಾರಂಟಿ ಜಾರಿಗೆ ತಂದಿದ್ದೇವೆ. 2013-18 ಅವಧಿಯಲ್ಲಿ ನಮ್ಮ ಸರ್ಕಾರ ಇದ್ದಾಗಲು ಸಹ ನಾವು ಜನರಿಗೆ ನೀಡಿದ ಭರವಸೆಯನ್ನು ಈಡೇರಿಸಿದ್ದೇವೆ. ಅದೇ ಭರವಸೇ ಮೇರೆ ಜನರು ನಮಗೆ ಆಶೀರ್ವಾದ ನೀಡಿದ್ದು, ನುಡಿದಂತೆ ನಡೆಯುವ ಸಂಪ್ರದಾಯ ಈಗಲೂ ಮುಂದುವರೆಸಿದ್ದೇವೆ. ಚುನಾವಣಾ ಪೂರ್ವ ಇದೇ ಮೈದಾನದಲ್ಲಿ ಡಾ.ಮಲ್ಲಿಕಾರ್ಜುನ ಖರ್ಗೆ ಅವರು ಕೆ.ಕೆ.ಆರ್.ಡಿ.ಬಿ. ಮಂಡಳಿಗೆ 5 ಸಾವಿರ ಕೋಟಿ ರೂ. ನೀಡಲಾಗುವುದು ಎಂದು ಘೋಷಿಸಿದರು. ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಆಯವ್ಯಯದಲ್ಲಿ ಪ್ರದೇಶದ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ. ಅನುದಾನ ಮೀಸಲಿರಿಸಿದ್ದಾರೆ. 371ಜೆ ಅನ್ವಯ ಸ್ಥಳೀಯರಿಗೆ ಉದ್ಯೋಗ ದೊರಕಿಸುವ ನಿಟ್ಟಿನಲ್ಲಿ 371ಜೆ ಅನುμÁ್ಟನ ಸಚಿವ ಸಂಪುಟ ಉಪ ಸಂಪುಟ ಸಮಿತಿ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಈಗಾಗಲೆ ಇಲಾಖಾವಾರು ಸಭೆ ನಡೆಸಿ ಅಗತ್ಯ ಮಾಹಿತಿ ಕಲೆ ಹಾಕುತ್ತಿದ್ದಾರೆ. ಮುಂದಿನ ದಿನದಲ್ಲಿ ಸ್ಥಳೀಯರಿಗೆ "ಉದ್ಯೋಗ ಭಾಗ್ಯ" ಸಿಗಲಿದೆ ಎಂದರು.
ಇದು ಉಚಿತವಲ್ಲ, ಖಚಿತ ಯೋಜನೆಗಳು: ರಾಜ್ಯದ ಇಂಧನ ಸಚಿವ ಕೆ.ಜೆ. ಜಾರ್ಜ್ ಅವರು ಯೋಜನೆಯ ದಿಕ್ಸೂಚಿ ಭಾಷಣ ಮಾಡಿ, ರಾಜ್ಯದಲ್ಲಿ ಜುಲೈ 25 ರೊಳಗೆ 1.42 ಕೋಟಿ ಜನ ನೋಂದಣಿ ಮಾಡಿಕೊಂಡಿದ್ದು, ಅವರೆಲ್ಲರಿಗೂ ಆಗಸ್ಟ್ ಮಾಹೆಯ ಬಿಲ್ಲಿನಲ್ಲಿ ಈ ಸೌಲಭ್ಯ ಸಿಗಲಿದೆ. ನೋಂದಣಿ ಪ್ರಕ್ರಿಯೆ ನಿರಂತರವಾಗಿರಲಿದೆ. ಪಂಚ ಗ್ಯಾರಂಟಿಗಳನ್ನು ಕೆಲವರು ಉಚಿತ ಅಂತಾರೆ, ಆದರೆ ಇದು ಉಚಿತ ಅಲ್ಲ ಜನರಲ್ಲಿ ಅರ್ಥಿಕ ಸುಸ್ಥಿರ ತರುವ ಖಚಿತ ಯೋಜನೆಗಳಾಗಿವೆ. ಅವೈಜ್ಞಾನಿಕ ಜಿ.ಎಸ್.ಟಿ ಜಾರಿ, ರೂಪಾಯಿ ಅಮಾನ್ಯೀಕರಣ, ಗ್ಯಾಸ್, ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳದಿಂದ ಜನ ತತ್ತರಿಸಿದ್ದಾರೆ. ಹೀಗಾಗಿ ಬಡ ಮತ್ತು ಮಧ್ಯಮ ವರ್ಗದ ಜನರ ಹಿತ ಕಾಪಾಡಲು ಮತ್ತು ಅವರ ಅರ್ಥಿಕ ಪರಿಸ್ಥಿತಿ ಸುಧಾರಿಸಲು ಈ ಯೋಜನೆಗಳು ಜಾರಿಗೆ ತಂದಿದ್ದೇವೆ ಎಂದರು.
ಇದನ್ನೂ ಓದಿ-"ಸರಕಾರದ ದುಡ್ಡು ಸಾರ್ವಜನಿಕರ ದುಡ್ಡೇ ಆಗಿರುವುದರಿಂದ ಅದನ್ನು ಇತಿಮಿತಿಯಲ್ಲಿ ಬಳಸಬೇಕು"
ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ, ಅವರು ಮಾತನಾಡಿದರು. ಕಲಬುರಗಿ ದಕ್ಷಿಣ ಶಾಸಕ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್, ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ, ಪೌರಾಡಳಿತ ಸಚಿವ ರಹೀಂ ಖಾನ್, ಅರಣ್ಯ, ಪರಿಸರ ಹಾಗೂ ಜೀವಶಾಸ್ತ್ರ ಸಚಿವ ಈಶ್ವರ ಖಂಡ್ರೆ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಶರಣಬಸಪ್ಪ ದರ್ಶನಾಪೂರ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕರುಗಳಾದ ಎಂ.ವೈ.ಪಾಟೀಲ, ಬಿ.ಆರ್.ಪಾಟೀಲ, ಕನೀಜ್ ಫಾತಿಮಾ, ಚೆನ್ನಾರೆಡ್ಡಿ ಕುನ್ನೂರ, ರಾಜಾ ವೆಂಕಟಪ್ಪ ನಾಯಕ್, ವಿಧಾನ ಪರಿಷತ್ ಶಾಸಕರುಗಳಾದ ಡಾ. ಚಂದ್ರಶೇಖರ ಪಾಟೀಲ ಹುಮನಾಬಾದ, ಅರವಿಂದ ಅರಳಿ, ತಿಪ್ಪಣ್ಣಪ್ಪ ಕಮಕನೂರ ಇದ್ದರು.
ಅಲ್ಲದೆ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಪಂಕಜ್ ಕುಮಾರ ಪಾಂಡೆ, ಈಶಾನ್ಯ ವಲಯದ ಪೆÇಲೀಸ್ ಮಹಾನಿರೀಕ್ಷಕ ಅನುಪಮ್ ಅಗ್ರವಾಲ್, ಕಲಬುರಗಿ ವಿಭಾಗದ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಜಿಲ್ಲಾಧಿಕಾರಿ ಬಿ. ಫೌಜಿಯಾ ತರನ್ನುಮ್, ಕಲಬುರಗಿ ನಗರ ಪೆÇಲೀಸ್ ಆಯುಕ್ತ ಚೇತನ್ ಆರ್., ಜೆಸ್ಕಾಂ ಎಂ.ಡಿ. ರಾಹುಲ ಪಾಂಡ್ವೆ, ಡಿ.ಸಿ.ಪಿ. ಅಡ್ಡೂರು ಶ್ರೀನಿವಾಸಲು ಸೇರಿದಂತೆ ಅನೇಕ ಗಣ್ಯರು, ಚುನಾಯಿತ ಪ್ರತಿನಿಧಿಗಳು, ಹಿರಿಯ ಅಧಿಕಾರಿಗಳು, ಸಾವಿರಾರು ಸಂಖ್ಯೆಯಲ್ಲಿ ಫಲಾನುಭವಿಗಳು ಐತಿಹಾಸಿಕ ಗಳಿಗೆಗೆ ಸಾಕ್ಷಿಯಾದರು. ಇಂಧನ ಇಲಾಖೆಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತ ವಂದಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.