ಬೆಂಗಳೂರು : ಮಾನ್ಯ ಸಾರಿಗೆ ಹಾಗೂ ಮುಜರಾಯಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ತಿನಲ್ಲಿ ವೈಷ್ಟೋದೇವಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಸಹಾಯ ಧನ ಘೋಷಣೆ ಮಾಡಲಾಯಿತು. ದಿನಾಂಕ 13-11-2024 ರಂದು ಮಾನ್ಯ ಮುಜರಾಯಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಕರ್ನಾಟಕ ರಾಜ್ಯ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ಈ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.
ವೈಷ್ಟೋದೇವಿಗೆ ಭೇಟಿ ನೀಡುವ ಕರ್ನಾಟಕ ರಾಜ್ಯದ ಯಾತ್ರಾರ್ಥಿಗಳಿಗೆ ತಲಾ ರೂ. 5000/-ಗಳ ಸಹಾಯ ಧನ ನೀಡಲು ತೀರ್ಮಾನಿಸಲಾಯಿತು. ಅಲ್ಲದೆ, ಸರ್ಕಾರದ ಬಹುಮಹಡಿಗಳ ಕಟ್ಟಡದ ಎದುರು ಇರುವ ಮುಜರಾಯಿ ಇಲಾಖೆಗೆ ಸೇರಿದ 3/4 ಎಕರೆ ಜಾಗದಲ್ಲಿ ರೂ. 10 ಕೋಟಿ ವೆಚ್ಚದಲ್ಲಿ ಧಾರ್ಮಿಕ ಸೌಧ ನಿರ್ಮಿಸಲು ತೀರ್ಮಾನಿಸಲಾಯಿತು.
120 ವರುಷಗಳ ಹಳೆಯದಾದ ಮೈಸೂರಿನ ಸಂಸ್ಕೃತ ಮಹಾರಾಜ ಕಾಲೇಜಿನ ಸಂಸ್ಥೆಯ ಸಂಪೂರ್ಣ ಜೀರ್ಣೋದ್ಧಾರ ಮಾಡಲು ಅಗತ್ಯವಿರುವ ಅನುದಾನ ಬಿಡುಗಡೆ ಮಾಡಲು ತೀರ್ಮಾನಿಸಲಾಯಿತು. ಹಾಗೂ ಮಕ್ಕಳಿಗೆ ನೀಡುತ್ತಿರುವ ವಿದ್ಯಾ ಸಹಾಯ ಧನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಈಗಾಗಲೇ ಮುಕ್ತಾಯವಾಗಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳಿಗೆ ಅನುಕೂಲವಾಗುವಂತೆ ಡಿಸೆಂಬರ್ 31 ರವರೆಗೂ ಕಾಲಾವಕಾಶ ನೀಡಿ, ಇದರ ಸದುಪಯೋಗ ಪಡೆದುಕೊಳ್ಳಲು ಪ್ರಚಾರ ನೀಡುವಂತೆ ತೀರ್ಮಾನಿಸಲಾಯಿತು.
ಇದನ್ನೂ ಓದಿ : ಜಾರ್ಖಂಡ್ ನಲ್ಲಿ ಮತದಾನ - ಎಲ್ಲರೂ ಮತದಾನದಲ್ಲಿ ಭಾಗಿಯಾಗುವಂತೆ ಪ್ರಧಾನಿ ಕರೆ
ಮುಜರಾಯಿ ಇಲಾಖೆಗೆ ಸೇರಿದ ದೇವಾಲಯದ ಆಸ್ತಿಯನ್ನು ಸರ್ವೆ ಮಾಡಿ, ಒತ್ತುವರಿ ತೆರವು ಮಾಡಿ ದಾಖಲೆ ಮಾಡಲು ಹಾಗೂ ಆಸ್ತಿಗಳನ್ನು ರಕ್ಷಿಸಲು ತೀರ್ಮಾನಿಸಲಾಯಿತು. ಅಲ್ಲದೆ, ಅವಧಿ ಮುಗಿಯುವ 14 ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚಿಸಲು, ಅವಧಿ ಮುಗಿದ ನಂತರ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲು, ಅರ್ಜಿ ಸ್ವೀಕಾರವಾಗಿರುವ 28 ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚಿಸಲು, ಅರ್ಜಿ ಸ್ವೀಕಾರವಾಗದೇ ಇರುವ 13 ದೇವಾಲಯಗಳಿಗೆ ಪುನಃ ಅರ್ಜಿ ಕರೆಯಲು ಹಾಗೂ ಬೇಲೂರು ಶ್ರೀ ಚನ್ನಕೇಶವ ದೇವಾಲಯದ ಖಾಲಿ ಇರುವ ವ್ಯವಸ್ಥಾಪನಾ ಸಮಿತಿಗೆ ಸದಸ್ಯರನ್ನು ನೇಮಕ ಮಾಡಲು ತೀರ್ಮಾನಿಸಲಾಯಿತು.
ಸದರಿ ಸಭೆಯಲ್ಲಿ ಸದಸ್ಯರುಗಳಾದ ಶ್ರೀ ಕೆ. ಎಮ್. ನಾಗರಾಜ್, ಶ್ರೀ ದ್ವಾರಕಾನಾಥ್, ಶ್ರೀ ಕೆ. ಚಂದ್ರಶೇಖರ್, ಶ್ರೀ ಮಹಾಂತೇಶ ಪ್ರಭು ಶಾಸ್ತ್ರಿ, ಶ್ರೀಮತಿ ಮಲ್ಲಿಕಾ ಪಕ್ಕಲ್, ಶ್ರೀ ಮಠಸಿದ್ಧ ಪಂಡಿತಾರಾಧ್ಯ, ಶ್ರೀ ರಾಧಾಕೃಷ್ಣ, ಶ್ರೀ ಶ್ರೀವತ್ಸ ಕೇದಿಂಥ್ಯಾಲಯ, ಡಾ. ಎಂ. ವಿ. ವೆಂಕಟೇಶ್ ಆಯುಕ್ತರು ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ