ಬೀದರ್‌: ಮನೆಯ ಮೇಲ್ಛಾವಣಿ ಕುಸಿದು ಒಂದೇ ಕುಟುಂಬದ 6 ಮಂದಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಬೀದರ್ ಜಿಲ್ಲೆಯ ಬಸವಕಲ್ಯಾಣದ ಚಿಲ್ಲಾಗಲ್ಲಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.


COMMERCIAL BREAK
SCROLL TO CONTINUE READING

ನದೀಮ್‌ ಶೇಖ್‌ (45 ) ಫ‌ರಿದಾ ಬೇಗಂ(34) , ಆಯಿಷಾ ಬಾನು (15), ಮೆಹತಾಬಿ ನದೀಮ್ ಶೇಖ್ (14), ಫೈಜಾನ್‌ ಅಲಿ ನದೀಮ್ ಶೇಖ್(6), ಫ‌ರಾನ್‌ ಅಲಿ (4) ಎಂಬುವರೇ ಮೃತ ದುರ್ದೈವಿಗಳಾಗಿದ್ದಾರೆ.


ಸುಮಾರು ನೂರು ವರ್ಷಕ್ಕೂ ಹಳೆಯದಾದ ಮಣ್ಣಿನ ಮನೆಯಲ್ಲಿ ವಾಸವಿದ್ದ ಹಣ್ಣು-ತರಕಾತಿ ಮಾರಿ ಜೀವನ ಸಾಗಿಸುತ್ತಿದ್ದ ನದೀಮ್ ಶೇಖ್ ಕುಟುಂಬ, ಮಳೆಯಿಂದಾಗಿ ನೆನೆದು ಗೋಡೆ ಮತ್ತು ಮೇಲ್ಛಾವಣಿ ಕುಸಿದ ಪರಿಣಾಮ ಎಲ್ಲರೂ ಸಾವನ್ನಪ್ಪಿದ್ದಾರೆ. 


ರಾತ್ರಿ ಎಲ್ಲರೂ ಮಲಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದ್ದು, ಪೊಲೀಸರು ಶವಗಳನ್ನು ಹೊರತೆಗೆದಿದ್ದಾರೆ. ಈ ಸಂಬಂಧ ಬಸವಕಲ್ಯಾಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.