ಗದಗದಲ್ಲಿ ಭೀಕರ ರಸ್ತೆ ಅಪಘಾತ; 6 ಮಂದಿ ಸಾವು

ಎರಡು ಕಾರುಗಳ ಮಧ್ಯೆ ಮುಖಾಮುಖೀ ಢಿಕ್ಕಿ ಸಂಭವಿಸಿದ್ದು, ಸ್ಥಳದಲ್ಲೇ ಆರು ಮಂದಿ ಸಾವನ್ನಪ್ಪಿದ್ದಾರೆ. ಉಳಿದಂತೆ ನಾಲ್ಹು ಮಂದಿ ತೀವ್ರ ಗಾಯಗೊಂಡಿದ್ದಾರೆ. 

Last Updated : Dec 30, 2018, 01:24 PM IST
ಗದಗದಲ್ಲಿ ಭೀಕರ ರಸ್ತೆ ಅಪಘಾತ; 6 ಮಂದಿ ಸಾವು title=
ಸಾಂದರ್ಭಿಕ ಚಿತ್ರ

ಗದಗ: ಇಲ್ಲಿನ ಗದಗ: ಕೊಪ್ಪಳ ರಸ್ತೆಯ ಅಡವಿಸೋಮಾಪುರ ಬಳಿ ಭಾನುವಾರ ಬೆಳಿಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮದುವೆಗೆ ತೆರಳುತ್ತಿದ್ದ ಆರು ಮಂದಿ ದಾರುಣವಾಗಿ ಸಾವನ್ನಪ್ಪಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಎರಡು ಕಾರುಗಳ ಮಧ್ಯೆ ಮುಖಾಮುಖೀ ಢಿಕ್ಕಿ ಸಂಭವಿಸಿದ್ದು, ಸ್ಥಳದಲ್ಲೇ ಆರು ಮಂದಿ ಸಾವನ್ನಪ್ಪಿದ್ದಾರೆ. ಉಳಿದಂತೆ ನಾಲ್ಹು ಮಂದಿ ತೀವ್ರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್‌ ಆಸ್ಪತ್ರೆಗೆ ದಾಖಲಿಸಲಾಗಿದೆ.

ಐ-10 ಕಾರಿನಲ್ಲಿದ್ದವರನ್ನು ಆನಂದ ಬೆಟಗೇರಿ, ಸಿದ್ದು ಕೋರಿಶೆಟ್ಟಿ, ಮನೋಜಕುಮಾರ ಕರಡಿಗುಡ್ಡ, ಅಮೃತ, ಚನ್ನು ವಾಡದ್, ಅರುಣ್ ಬೆಟಗೇರಿ ಎಂದು ಗುರುತಿಸಲಾಗಿದೆ, ಎಲ್ಲರೂ ಧಾರವಾಡದ ಹೆಬ್ಬಳ್ಳಿ ಅಗಸಿ ಗ್ರಾಮದ ನಿವಾಸಿಗಳಾಗಿದ್ದಾರೆ ಎಂದು ತಿಳಿದುಬಂದಿದೆ. ಗದಗ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

Trending News