ಧಾರವಾಡ: ಹುಬ್ಬಳ್ಳಿಯಲ್ಲಿ ನಡೆದ ಇನ್ವೆಸ್ಟ್ ಕರ್ನಾಟಕ ಸಮ್ಮೇಳನದಲ್ಲಿ ಆದ ಒಡಂಬಡಿಕೆಯಂತೆ ಪ್ರತಿಷ್ಠಿತ ಕಂಪನಿಗಳು ಹುಬ್ಬಳ್ಳಿ ನಗರ ಸೇರಿದಂತೆ ಧಾರವಾಡ ಜಿಲ್ಲೆಯ ಹಲವು ಭಾಗದಲ್ಲಿ 6 ಸಾವಿರ ಕೋಟಿ ಬಂಡವಾಳ ಹೂಡಿಕೆ ಮಾಡಲಿವೆ ಎಂದು ಬೃಹತ್ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ್ ಶೆಟ್ಟರ್ ಹೇಳಿದರು.


COMMERCIAL BREAK
SCROLL TO CONTINUE READING

ಮಹಾನಗರ ಪಾಲಿಕೆ ಅನುದಾನದಲ್ಲಿ ಉದಯನಗರದ ಶಿವ ಗಣೇಶ ದೇವಸ್ಥಾನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸಭಾ ಭವನ ಉದ್ಘಾಟಿಸಿ ಅವರು ಮಾತನಾಡಿದರು.ಬಂಡವಾಳ ಹೂಡಿಕೆಯಿಂದ ಐ.ಟಿ. ಮೆಕಾನಿಕಲ್ ಇಂಜಿನಿಯರಿಂಗ್, ಎಫ್.ಎಂ.ಜಿ.ಸಿ ಸೇರಿಯ ಹಲವು ವಿಭಾಗಗಳಲ್ಲಿ ಉದ್ಯೋಗ ಅವಕಾಶಗಳು ಸೃಷ್ಠಿಯಾಗಲಿವೆ. ಜಿಲ್ಲೆಯ 20 ರಿಂದ 30 ಸಾವಿರ ಯುವಕರಿಗೆ ಸ್ಥಳೀಯವಾಗಿ ಉದ್ಯೋಗ ದೊರಕಲಿದೆ. ಯುವಜನತೆ ಉದ್ಯೋಗ ಅರಿಸಿ ಬೆಂಗಳೂರು ಸೇರಿದಂತೆ ವಿವಿಧ ನಗರಗಳಿಗೆ ವಲಸೆ ಹೋಗುವುದು ತಪ್ಪಲಿದೆ ಎಂದರು.


ಇದನ್ನು ಓದಿ: ಉತ್ತರ ಕರ್ನಾಟಕದ ಪ್ರಥಮ ಸಂಚಾರಿ ಪ್ರಾಣಿ ಚಿಕಿತ್ಸಾಲಯ ಲೋಕಾರ್ಪಣೆ 


ಅವಳಿ ನಗರದಲ್ಲಿ ನಗರ ವಿಕಾಸ, ಸ್ಮಾರ್ಟ್ ಸಿಟಿ. ಲೋಕೋಪಯೋಗಿ ಸೇರಿದಂತೆ ಸಾವಿರಾರು ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗಳು ಪ್ರಗತಿಯಲ್ಲಿವೆ. ಅವಳಿ ನಗರವನ್ನು ಸುಂದರ ಹಾಗೂ ಸುಸ್ಥಿರ ನಗರವನ್ನಾಗಿ ಮಾರ್ಪಡಿಸಲಾಗುವುದು. ನಗರದ ಪ್ರತಿಯೊಂದು ಬಡಾವಣೆಯ ರಸ್ತೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತದೆ. ಸ್ಮಾರ್ಟ್ ಸಿಟಿ ಯೋಜನೆ ಅನುಷ್ಠಾನದಲ್ಲಿ ಹುಬ್ಬಳ್ಳಿ ಧಾರವಾಡ ರಾಜ್ಯಕ್ಕೆ ಪ್ರಥಮ ಸ್ಥಾನದಲ್ಲಿದೆ ಎಂದು ಹೇಳಿದರು. 


ಇದನ್ನು ಓದಿ: ಎಸ್‍ಎಸ್‍ಎಲ್‍ಸಿ ಪರೀಕ್ಷೆ : ಮಾನವೀಯತೆ ಮೆರೆದ ಆರೋಗ್ಯ ಮತ್ತು ಆರಕ್ಷಕ ಸಿಬ್ಬಂದಿ


3 ಕೋಟಿ ರೂಪಾಯಿ ವೆಚ್ಚದ ರಸ್ತೆ ಕಾಮಗಾರಿಗೆ ಚಾಲನೆ: 


ವಾರ್ಡ್ ನಂ 33 ರ ಮಯೂರಿ ಎಸ್ಟೇಟ್ ನಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ 3 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ರಸ್ತೆ ಕಾಮಗಾರಿಗೆ ಸಚಿವ ಜಗದೀಶ್ ಶೆಟ್ಟರ್ ಭೂಮಿ ಪೂಜೆ ನೆರವೇರಿಸಿದರು. ನಂತರ ಇಂದಿರಾ ನಗರ ರಸ್ತೆ ಕಾಮಗಾರಿಯನ್ನು ವೀಕ್ಷಿಸಿದರು.ಒಟ್ಟು 3 ಕಿ.ಮೀ. ಉದ್ದದ ರಸ್ತೆ ಅಭಿವೃದ್ಧಿ ಕಾರ್ಯವನ್ನು ಕೈಗೊಳ್ಳಲಾಗುತ್ತಿದೆ.ಈ ಸಂದರ್ಭದಲ್ಲಿ ಮಾಜಿ ಮಹಾಪೌರ ವೀರಣ್ಣ ಸವಡಿ, ಮುಖಂಡರುಗಳಾದ ಮಲ್ಲಿಕಾರ್ಜುನ ಸವಕಾರ, ಸಂತೋಷ್ ಚವ್ಹಾಣ್ , ಲೋಕೋಪಯೋಗಿ ಇಲಾಖೆ ಹಿರಿಯ ಅಧಿಕಾರಿಗಳು, ಸಾರ್ವಜನಿಕರು ಉಪಸ್ಥಿತರಿದ್ದರು.