ಬೆಂಗಳೂರು: ಜನವರಿ ತಿಂಗಳಿನಲ್ಲಿ 6,085 ಕೋಟಿ ರೂ. ಜಿಎಸ್‍ಟಿ ಸಂಗ್ರಹ ಮಾಡಿ ರಾಜ್ಯ ದಾಖಲೆ ಬರೆದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇದನ್ನೂ ಓದಿ: ಭಾರತವನ್ನು ಸರ್ವಶ್ರೇಷ್ಠವಾಗಿಸುವ ಧ್ಯೇಯದೊಂದಿಗೆ ಆಡಳಿತ – ಸಿಎಂ ಬೊಮ್ಮಾಯಿ
ಈ ಬಗ್ಗೆ ಶನಿವಾರ ಟ್ವೀಟ್ ಮಾಡಿರುವ ಅವರು, ಜಿಎಸ್‍ಟಿ ತೆರಿಗೆ ಸಂಗ್ರಹಣೆಯಲ್ಲಿ ಕರ್ನಾಟಕ ಶೇ.30ರಷ್ಟು ಅತ್ಯಧಿಕ ಬೆಳವಣಿಗೆ ಪ್ರಮಾಣವನ್ನು ಹೊಂದಿರುವ ರಾಜ್ಯವಾಗಿ ಮುಂದುವರೆದಿದೆ’ ಎಂದು ಹೇಳಿದ್ದಾರೆ.
ಇದನ್ನೂ ಓದಿ: “ಸುಳ್ಳಿನ ಕಾರ್ಖಾನೆಯ ಮತ್ತೊಂದು ಹೆಸರು ಬಿಜೆಪಿ”-ಡಿಕೆಶಿ ವಾಗ್ದಾಳಿ
This year’s remarkable mop up is due to measures undertaken for reforms, focused vigilance, recovery in economy and better compliance by tax payers. This augmentation to revenue will allow the government to present a better budget this year.
2/2— Basavaraj S Bommai (@BSBommai) February 11, 2023
‘ತೆರಿಗೆ ಸಂಗ್ರಹಣೆಯಲ್ಲಿ ಸುಧಾರಣೆ, ಹೆಚ್ಚಿನ ಕಣ್ಗಾವಲು, ಆರ್ಥಿಕತೆಯಲ್ಲಿ ಚೇತರಿಕೆ ಹಾಗೂ ತೆರೆಗೆದಾರರಲ್ಲಿ ಹೆಚ್ಚಿರುವ ಅನುಸರಣೆಯಿಂದ ಈ ಗಮನಾರ್ಹ ಸಾಧನೆ ಮಾಡಲು ಸಾಧ್ಯವಾಗಿದೆ. ಈ ಆದಾಯದ ಬೆಳವಣಿಗೆಯಿಂದ ರಾಜ್ಯ ಸರ್ಕಾರವು ಈ ವರ್ಷ ಉತ್ತಮ ಬಜೆಟ್ ಮಂಡಿಸಲು ಅನುವು ಮಾಡಿಕೊಡಲಿದೆ’ ಎಂದು ಸಿಎಂ ಬೊಮ್ಮಾಯಿ ಟ್ವೀಟ್‍ನಲ್ಲಿ ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.