ರಾಜ್ಯದಲ್ಲಿ ಮೊದಲ ಹಂತದಲ್ಲಿ 6.3 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ

ಕೋವಿಡ್ -19 ಲಸಿಕೆ ವಿತರಣೆಯ ಮೊದಲ ಹಂತದಲ್ಲಿ ಕರ್ನಾಟಕ ಸರ್ಕಾರ 6,30,524 ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಿದೆ. ಇದರಲ್ಲಿ 2,73,211 ಸರ್ಕಾರಿ ವಲಯದ ಆರೋಗ್ಯ ಕಾರ್ಯಕರ್ತರು ಮತ್ತು 3,57,313 ಖಾಸಗಿ ವಲಯದ ನೌಕರರು ಸೇರಿದ್ದಾರೆ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸರಣಿ ಟ್ವೀಟ್‌ಗಳಲ್ಲಿ ತಿಳಿಸಿದ್ದಾರೆ.

Written by - Zee Kannada News Desk | Last Updated : Jan 5, 2021, 11:52 PM IST
  • ಮೊದಲನೇ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಿದ್ದು, 2,73,211 ಸರ್ಕಾರಿ ಹಾಗೂ 3,57,313 ಖಾಸಗಿ ಸೇರಿ ಒಟ್ಟು 6,30,524 ಅರೋಗ್ಯ ಕಾರ್ಯಕರ್ತರನ್ನು ಗುರುತಿಸಲಾಗಿದೆ.
  • ರಾಜ್ಯಕ್ಕೆ ಅವಶ್ಯಕತೆ ಇರುವ ಹೆಚ್ಚಿನ ಮೂಲಭೂತ ಸೌಕರ್ಯವನ್ನು ಕೇಂದ್ರ ಸರ್ಕಾರ ಪೂರೈಸುತ್ತಿದ್ದು, ಈವರೆಗೂ 64 ಬೃಹತ್ ಐಸ್ ಲೈನ್ಡ್ ರೆಫ್ರಿಜರೇಟರ್ (ILR), 24 ಲಕ್ಷ ಸಿರಿಂಜುಗಳು ರಾಜ್ಯಕ್ಕೆ ಬಂದಿದ್ದು ಜಿಲ್ಲೆಗಳಿಗೆ ರವಾನಿಸಲಾಗಿದೆ.
ರಾಜ್ಯದಲ್ಲಿ ಮೊದಲ ಹಂತದಲ್ಲಿ 6.3 ಲಕ್ಷ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ  title=
ಸಾಂದರ್ಭಿಕ ಚಿತ್ರ

ಬೆಂಗಳೂರು: ಕೋವಿಡ್ -19 ಲಸಿಕೆ ವಿತರಣೆಯ ಮೊದಲ ಹಂತದಲ್ಲಿ ಕರ್ನಾಟಕ ಸರ್ಕಾರ 6,30,524 ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಿದೆ. ಇದರಲ್ಲಿ 2,73,211 ಸರ್ಕಾರಿ ವಲಯದ ಆರೋಗ್ಯ ಕಾರ್ಯಕರ್ತರು ಮತ್ತು 3,57,313 ಖಾಸಗಿ ವಲಯದ ನೌಕರರು ಸೇರಿದ್ದಾರೆ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಸರಣಿ ಟ್ವೀಟ್‌ಗಳಲ್ಲಿ ತಿಳಿಸಿದ್ದಾರೆ.

 ಇದನ್ನೂ ಓದಿ: Covid-19 Vaccination Program: ಲಸಿಕಾಕರಣ ಕಾರ್ಯಕ್ರಮ ಸ್ವಯಂಪ್ರೆರಿತ ಎಂದ ಕೇಂದ್ರ ಆರೋಗ್ಯ ಸಚಿವಾಲಯ

9807 ಅನುಭವಿ ವ್ಯಾಕ್ಸಿನೇಟರ್‌ಗಳು ಇದ್ದು, ರಾಜ್ಯದಾದ್ಯಂತ ವ್ಯಾಕ್ಸಿನೇಷನ್ ನೀಡಲು 28,427 ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಸಚಿವರು ಹೇಳಿದರು. ಅಗತ್ಯವಿದ್ದರೆ ರಾಜ್ಯವು ಹೆಚ್ಚಿನ ಕೇಂದ್ರಗಳನ್ನು ಗುರುತಿಸುತ್ತದೆ ಎಂದು ತಿಳಿಸಿದ್ದಾರೆ. ಲಸಿಕೆಗಳನ್ನು ಸಂಗ್ರಹಿಸಲು 64 ಬೃಹತ್ ರೆಫ್ರಿಜರೇಟರ್‌ಗಳನ್ನು ರಾಜ್ಯಕ್ಕೆ ಅಗತ್ಯವಿರುವ ಎಲ್ಲಾ ಸೌಲಭ್ಯಗಳನ್ನು ಕೇಂದ್ರ ಒದಗಿಸಲಿದೆ ಎಂದು ಹೇಳಿದ್ದಾರೆ.

ಭಾರತದಲ್ಲಿ ಕೊರೊನಾ ಲಸಿಕೆ (CORONAVIRUS VACCINE) ವಿತರಣೆ ಪ್ರಕ್ರಿಯೆ ಶೀಘ್ರವೇ ಆರಂಭವಾಗಲಿದ್ದು, ರಾಜ್ಯ ಸರ್ಕಾರ ಸುವ್ಯವಸ್ಥಿತ ಲಸಿಕೆ ವಿತರಣೆಗೆ ಸಕಲ ಸಿದ್ಧತೆ ನಡೆಸಿದೆ.ಮೊದಲನೇ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಿದ್ದು, 2,73,211 ಸರ್ಕಾರಿ ಹಾಗೂ 3,57,313 ಖಾಸಗಿ ಸೇರಿ ಒಟ್ಟು 6,30,524 ಅರೋಗ್ಯ ಕಾರ್ಯಕರ್ತರನ್ನು ಗುರುತಿಸಲಾಗಿದೆ.

ಇದನ್ನೂ ಓದಿ: 'ಕೊರೊನಾ ಲಸಿಕೆ ಸೇವಿಸಿದಲ್ಲಿ ಜನರು ಮೊಸಳೆ ಇಲ್ಲವೇ ಗಡ್ಡದ ಹೆಂಗಸರಾಗುತ್ತಾರೆ' 

ಲಸಿಕೆ ನೀಡಲು ತರಬೇತಿ ಪಡೆದ 9,807 ಅನುಭವಿ ವ್ಯಾಕ್ಸಿನೇಟರ್ ಸಿಬ್ಬಂದಿಗಳನ್ನು ಮತ್ತು ರಾಜ್ಯಾದ್ಯಂತ 28,427 ಲಸಿಕಾ ಕೇಂದ್ರಗಳನ್ನು ಗುರುತಿಸಲಾಗಿದ್ದು, ಇನ್ನೂ ಹೆಚ್ಚಿನ ಕೇಂದ್ರಗಳನ್ನು ಗುರುತಿಸಲಾಗುವುದು. ಈ ಎಲ್ಲಾ ದತ್ತಾಂಶವನ್ನು ಕೇಂದ್ರ ಸರ್ಕಾರ ಸಿದ್ಧಪಡಿಸಿರುವ CoWIN ತಂತ್ರಾಂಶದಲ್ಲಿ ನಮೂದಿಸಲಾಗಿದೆ. 

ಇದನ್ನೂ ಓದಿ: Corona vaccine ಬಗ್ಗೆ ಶುಭ ಸುದ್ದಿ ನೀಡಿದ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್

ರಾಜ್ಯಕ್ಕೆ ಅವಶ್ಯಕತೆ ಇರುವ ಹೆಚ್ಚಿನ ಮೂಲಭೂತ ಸೌಕರ್ಯವನ್ನು ಕೇಂದ್ರ ಸರ್ಕಾರ ಪೂರೈಸುತ್ತಿದ್ದು, ಈವರೆಗೂ 64 ಬೃಹತ್ ಐಸ್ ಲೈನ್ಡ್ ರೆಫ್ರಿಜರೇಟರ್ (ILR), 24 ಲಕ್ಷ ಸಿರಿಂಜುಗಳು ರಾಜ್ಯಕ್ಕೆ ಬಂದಿದ್ದು ಜಿಲ್ಲೆಗಳಿಗೆ ರವಾನಿಸಲಾಗಿದೆ. ಇನ್ನುಳಿದ 31 ಲಕ್ಷ ಸಿರಿಂಜುಗಳು ಸೇರಿದಂತೆ ಹೆಚ್ಚುವರಿ ಉಪಕರಣಗಳು ಶೀಘ್ರದಲ್ಲೇ ತಲುಪಿಲಿವೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ
Android Link - https://bit.ly/3hDyh4G
iOS Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News