BJP: ಇಂದು ಸಂಜೆಯೇ ನೂತನ 7 ಸಚಿವರಿಗೆ ಖಾತೆ ಹಂಚಿಕೆ..!?

ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗೆ ಚರ್ಚೆ ನಡೆಸಿ ನೂತನ ಸಚಿವರಿಗೆ ಇಂದು ಸಂಜೆಯೇ ಖಾತೆ ಹಂಚಿಕೆ ಮಾಡಲು ಸಿಎಂ ಬಿ.ಎಸ್. ಯಡಿಯೂರಪ್ಪ ತೀರ್ಮಾನ

Last Updated : Jan 17, 2021, 02:48 PM IST
  • ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗೆ ಚರ್ಚೆ ನಡೆಸಿ ನೂತನ ಸಚಿವರಿಗೆ ಇಂದು ಸಂಜೆಯೇ ಖಾತೆ ಹಂಚಿಕೆ ಮಾಡಲು ಸಿಎಂ ಬಿ.ಎಸ್. ಯಡಿಯೂರಪ್ಪ ತೀರ್ಮಾನ
  • ಇಂದು ಸಂಜೆ ಅಮಿತ್ ಶಾ ಅವರು ದೆಹಲಿಗೆ ವಾಪಸ್ಸಾಗಲಿದ್ದು, ನಂತರ ಯಾವ ಸಚಿವರಿಗೆ ಯಾವ ಖಾತೆ ನೀಡಬೇಕು ಎಂಬುದು ತೀರ್ಮಾನವಾಗಲಿದೆ ಎನ್ನಲಾಗಿದೆ.
  • ಮೂಲಗಳ ಪ್ರಕಾರ ಯಡಿಯೂರಪ್ಪ ಕೆಲವು ಸಚಿವರ ಖಾತೆಗಳನ್ನು ಅದಲು-ಬದಲು ಮಾಡುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ.
BJP: ಇಂದು ಸಂಜೆಯೇ ನೂತನ 7 ಸಚಿವರಿಗೆ ಖಾತೆ ಹಂಚಿಕೆ..!? title=

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆಗೆ ಚರ್ಚೆ ನಡೆಸಿ ನೂತನ ಸಚಿವರಿಗೆ ಇಂದು ಸಂಜೆಯೇ ಖಾತೆ ಹಂಚಿಕೆ ಮಾಡಲು ಸಿಎಂ ಬಿ.ಎಸ್. ಯಡಿಯೂರಪ್ಪ ತೀರ್ಮಾನಿಸಿದ್ದಾರೆ ಎನ್ನಲಾಗಿದೆ.

ಇಂದು ಸಂಜೆ ಅಮಿತ್ ಶಾ(Amit Shah) ಅವರು ದೆಹಲಿಗೆ ವಾಪಸ್ಸಾಗಲಿದ್ದು, ನಂತರ ಯಾವ ಸಚಿವರಿಗೆ ಯಾವ ಖಾತೆ ನೀಡಬೇಕು ಎಂಬುದು ತೀರ್ಮಾನವಾಗಲಿದೆ ಎನ್ನಲಾಗಿದೆ. ಮೂಲಗಳ ಪ್ರಕಾರ ಯಡಿಯೂರಪ್ಪ ಕೆಲವು ಸಚಿವರ ಖಾತೆಗಳನ್ನು ಅದಲು-ಬದಲು ಮಾಡುವ ನಿರೀಕ್ಷೆ ಇದೆ ಎಂದು ಹೇಳಲಾಗುತ್ತಿದೆ.

State Government: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೊಂದು 'ಶುಭ ಸುದ್ದಿ'..!

ಇನ್ನು ನೂತನ ಸಚಿವರಿಗೆ ಯಾವ ಖಾತೆ? ಇಲ್ಲಿದೆ ನೋಡಿ ಸಂಭವನೀಯ ಪಟ್ಟಿ: 

ಎಂಟಿಬಿ ನಾಗರಾಜ್ -ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ

ಎಸ್ ಅಂಗಾರ-ಕನ್ನಡ ಮತ್ತು ಸಂಸ್ಕೃತಿ

Amit Shah: ಸಿಎಂ ಯಡಿಯೂರಪ್ಪಗೆ 'ಗುಡ್ ನ್ಯೂಸ್' ನೀಡಿದ ಅಮಿತ್ ಶಾ!

ಉಮೇಶ್ ಕತ್ತಿ -ಪ್ರವಾಸೋದ್ಯಮ

ಅರವಿಂದ್ ಲಿಂಬಾವಳಿ- ಬೆಂಗಳೂರು ಅಭಿವೃದ್ಧಿ

ಆರ್. ಶಂಕರ್-ಅಬಕಾರಿ

ಸಿ.ಪಿ. ಯೋಗೇಶ್ವರ್ -ಯುವಜನ ಮತ್ತು ಕ್ರೀಡೆ

ರಾಜ್ಯದಲ್ಲಿರುವ ಕೇಂದ್ರ ಸರ್ಕಾರದ ಕಚೇರಿಗಳಲ್ಲಿ ಕಾಣದ ಕನ್ನಡ : HD Kumarswamy ಕಿಡಿ

ಮುರುಗೇಶ್ ನಿರಾಣಿ- ಇಂಧನ ಖಾತೆ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಯಡಿಯೂರಪ್ಪ ಇನ್ನೊಂದು ಬಾರಿ ಅಮಿತ್ ಷಾ, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಸೇರಿದಂತೆ ಮತ್ತಿತರ ಜೊತೆ ಚರ್ಚಿಸಿ ಸಂಜೆ ಬಳಿಕ ಯಾವುದೇ ಕ್ಷಣದಲ್ಲಿ ಖಾತೆಗಳನ್ನು ನೂತನ ಸಚಿವರಿಗೆ ಹಂಚಿಕೆ ಮಾಡಬಹುದು ಎನ್ನಲಾಗಿದೆ.

ಮಹಿಳಾ ಅಭ್ಯರ್ಥಿಗಳಿಗೆ ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News