ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಗುಂಡಿ ಮುಚ್ಚಲು 7 ಸಾವಿರ ಕೋಟಿ ವೆಚ್ಚ ಮಾಡಿರುವ ವರದಿಗಳು ಸತ್ಯಕ್ಕೆ ದೂರವಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ನಗರದಲ್ಲಿಂದು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಗುಂಡಿ ಮುಚ್ಚಲು 7,121 ಕೋಟಿ ರೂಪಾಯಿ ವೆಚ್ಚ ಮಾಡಲಾಗಿದೆ ಎಂದು ಕೆಲ ಮಾಧ್ಯಮಗಳಲ್ಲಿ  ಉಲ್ಲೇಖಿಸಲಾಗಿದೆ. ಈ ಮೊತ್ತ ಸತ್ಯಕ್ಕೆ ದೂರವಾಗಿವೆ. ಬಿಬಿಎಂಪಿ ಇಷ್ಟೊಂದು ಮೊತ್ತ ಬರೀ ರಸ್ತೆ ಗುಂಡಿಗೆ ವೆಚ್ಚ ಮಾಡಲು ಸಾಧ್ಯವೇ ಇಲ್ಲ ಎಂದು ಹೇಳಿದರು.


ಇದನ್ನೂ ಓದಿ: Isha Foundation : ಕರ್ನಾಟಕ ಸರ್ಕಾರದಿಂದ ನಾವು ಯಾವುದೇ ಹಣ ಪಡೆದಿಲ್ಲ : ಈಶ ಫೌಂಡೇಶನ್


ಈ ವರ್ಷ ಹೊರತುಪಡಿಸಿ, ಕಳೆದ ಮೂರು ವರ್ಷಗಳಲ್ಲಿ 119.23 ಕೋಟಿ ರೂಪಾಯಿ ಮಾತ್ರ ಖರ್ಚಾಗಿದೆ. ಈವರೆಗೆ 35 ಸಾವಿರಕ್ಕೂ ಅಧಿಕ ರಸ್ತೆ ಗುಂಡಿಗಳನ್ನು ಮುಚ್ಚಿದ್ದೇವೆ. ಈ ವರ್ಷದೊಳಗೆ 36 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಗುಂಡಿ ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದರು.


ಎಐಎಸಿಯಿಂದ ಮಾಹಿತಿ ಪಡೆಯಬೇಕು:


ಬಿಬಿಎಂಪಿ ಕಚೇರಿಯಿಂದಲೇ ತಪ್ಪು ಮಾಹಿತಿ  ನೀಡಿದ್ದಾರೆ ಎನ್ನುವ ದೂರುಗಳು ಕೇಳಿಬಂದಿವೆ. ಈ ಸಂಬಂಧ ಪರಿಶೀಲನೆ ನಡೆಸಲಾಗುವುದು. ಆದರೆ, ಯಾವುದೇ ರೀತಿಯ ಖರ್ಚು, ವೆಚ್ಚಗಳ ಮಾಹಿತಿ ಪಡೆಯಲು ಎಐಎಸಿಯಿಂದ ಮಾಹಿತಿ ಪಡೆಯಿರಿ ಎಂದು ಅಧಿಕಾರಿ, ಸಿಬ್ಬಂದಿಗಳಿಗೆ ಸಲಹೆ ನೀಡುತ್ತೇನೆ ಎಂದು ಆಯುಕ್ತರು ತಿಳಿಸಿದರು.


ಇದನ್ನೂ ಓದಿ: CNG vehicles : ಸಾರಿಗೆ ಇಲಾಖೆಯಿಂದ ರಾಜ್ಯದ CNG ವಾಹನಗಳಿಗೆ ಬಿಗ್ ಶಾಕ್!


ಸುಳ್ಳು ಸುದ್ದಿ ಹಬ್ಬಿಸಿರುವವರ ವಿರುದ್ಧ ಕಾನೂನು ಕ್ರಮ:


ಕೆಲವೊಂದು ತಪ್ಪು ಮಾಹಿತಿ, ಸುಳ್ಳು ಸುದ್ದಿಗಳಿಂದ ನಾಗರಿಕರಿಗೆ ತಪ್ಪು ಮಾಹಿತಿ ರವಾನೆ ಆಗುತ್ತದೆ.ಇಂತಹ ಮಾಹಿತಿ ಹಂಚಿಕೊಳ್ಳುವ ಮೊದಲು ಪರಿಶೀಲನೆ ನಡೆಸಬೇಕು. ಸುಳ್ಳು ಸುದ್ದಿ ಹಬ್ಬಿಸಿರುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುತ್ತದೆ ಎಂದು ಮನವಿ ಮಾಡಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.