7th Pay Commission: ಸರ್ಕಾರಿ ನೌಕರರಿಗೆ ಬಂಪರ್, 7ನೇ ವೇತನ ಆಯೋಗದ ಶಿಫಾರಸಿಗೆ ಅನುಮೋದನೆ

7th Pay Commission: ಕರ್ನಾಟಕದಲ್ಲಿ 7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆಯು ಒಪ್ಪಿಗೆ ಸೂಚಿಸಿದೆ. ಇದರಿಂದ ರಾಜ್ಯದ ಲಕ್ಷಾಂತರ ನೌಕರರ ವೇತನ ಜಾಸ್ತಿಯಾಗಲಿದೆ. ಆಗಸ್ಟ್‌ 1ರಿಂದಲೇ 7ನೇ ವೇತನ ಆಯೋಗದ ಜಾರಿಗೆ ರಾಜ್ಯ ಸರ್ಕಾರವು ತೀರ್ಮಾನ ಮಾಡಿದೆ.

Written by - Puttaraj K Alur | Last Updated : Jul 15, 2024, 10:50 PM IST
  • ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದಿಂದ ಭರ್ಜರಿ ಸಿಹಿಸುದ್ದಿ
  • ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ ರಾಜ್ಯ ಸರ್ಕಾರ
  • ಆಗಸ್ಟ್ 1ರಿಂದ ಅನ್ವಯವಾಗುವಂತೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ
7th Pay Commission: ಸರ್ಕಾರಿ ನೌಕರರಿಗೆ ಬಂಪರ್, 7ನೇ ವೇತನ ಆಯೋಗದ ಶಿಫಾರಸಿಗೆ ಅನುಮೋದನೆ title=
ಸರ್ಕಾರಿ ನೌಕರರಿಗೆ ಸಿಹಿಸುದ್ದಿ

7th Pay Commission: ರಾಜ್ಯದ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. ಕರ್ನಾಟಕದಲ್ಲಿ 7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆಯು ಒಪ್ಪಿಗೆ ಸೂಚಿಸಿದೆ. ಇದರಿಂದ ರಾಜ್ಯದ ಲಕ್ಷಾಂತರ ನೌಕರರ ವೇತನ ಜಾಸ್ತಿಯಾಗಲಿದೆ. ಆಗಸ್ಟ್‌ 1ರಿಂದಲೇ 7ನೇ ವೇತನ ಆಯೋಗದ ಜಾರಿಗೆ ರಾಜ್ಯ ಸರ್ಕಾರವು ತೀರ್ಮಾನ ಮಾಡಿದೆ.

ಇದನ್ನೂ ಓದಿ: ಕಾಂಗ್ರೆಸ್‌ ಸರ್ಕಾರದ ವಿರುದ್ಧ ಸಿಟಿ ರವಿ ಆಕ್ರೋಶ!

ಸರ್ಕಾರಿ ನೌಕರರ ಬೇಡಿಕೆ ಈಡೇರಿಸದಿದ್ದರೆ ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್‌.ಷಡಾಕ್ಷರಿ ಅವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು. ಇದಲ್ಲದೆ ಕೆಲ ವರ್ಷಗಳಿಂದ 7ನೇ ವೇತನ ಆಯೋಗ ಜಾರಿಗೊಳಿಸಬೇಕೆಂದು ರಾಜ್ಯ ಸರ್ಕಾರಿ ನೌಕರರ ಸಂಘವು ಒತ್ತಾಯಿಸಿತ್ತು. 

ಇದನ್ನೂ ಓದಿ: ಬಿಜೆಪಿ ನಾಯಕರ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ!

ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯನ್ನು ರಾಜ್ಯ ಸರ್ಕಾರ ಈಡೇರಿಸಿದೆ. ಸೋಮವಾರ(ಜುಲೈ 15) ನಡೆದ ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗದ ಶಿಫಾರಸಿಗೆ ಅನುಮೋದನೆ ನೀಡಲಾಗಿದ್ದು, ಆಗಸ್ಟ್ 1ರಿಂದ ಅನ್ವಯವಾಗುವಂತೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News