7th Pay Commission: ಸರ್ಕಾರಿ ನೌಕರರಿಗೆ ಬಂಪರ್, 7ನೇ ವೇತನ ಆಯೋಗದ ಶಿಫಾರಸಿಗೆ ಅನುಮೋದನೆ
7th Pay Commission: ಕರ್ನಾಟಕದಲ್ಲಿ 7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆಯು ಒಪ್ಪಿಗೆ ಸೂಚಿಸಿದೆ. ಇದರಿಂದ ರಾಜ್ಯದ ಲಕ್ಷಾಂತರ ನೌಕರರ ವೇತನ ಜಾಸ್ತಿಯಾಗಲಿದೆ. ಆಗಸ್ಟ್ 1ರಿಂದಲೇ 7ನೇ ವೇತನ ಆಯೋಗದ ಜಾರಿಗೆ ರಾಜ್ಯ ಸರ್ಕಾರವು ತೀರ್ಮಾನ ಮಾಡಿದೆ.
7th Pay Commission: ರಾಜ್ಯದ ಸರ್ಕಾರಿ ನೌಕರರಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಭರ್ಜರಿ ಸಿಹಿ ಸುದ್ದಿ ನೀಡಿದೆ. ಕರ್ನಾಟಕದಲ್ಲಿ 7ನೇ ವೇತನ ಆಯೋಗದ ಶಿಫಾರಸುಗಳ ಜಾರಿಗೆ ರಾಜ್ಯ ಸಚಿವ ಸಂಪುಟ ಸಭೆಯು ಒಪ್ಪಿಗೆ ಸೂಚಿಸಿದೆ. ಇದರಿಂದ ರಾಜ್ಯದ ಲಕ್ಷಾಂತರ ನೌಕರರ ವೇತನ ಜಾಸ್ತಿಯಾಗಲಿದೆ. ಆಗಸ್ಟ್ 1ರಿಂದಲೇ 7ನೇ ವೇತನ ಆಯೋಗದ ಜಾರಿಗೆ ರಾಜ್ಯ ಸರ್ಕಾರವು ತೀರ್ಮಾನ ಮಾಡಿದೆ.
ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದ ವಿರುದ್ಧ ಸಿಟಿ ರವಿ ಆಕ್ರೋಶ!
ಸರ್ಕಾರಿ ನೌಕರರ ಬೇಡಿಕೆ ಈಡೇರಿಸದಿದ್ದರೆ ಜುಲೈ 29ರಿಂದ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಲಾಗುವುದು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಅವರು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದರು. ಇದಲ್ಲದೆ ಕೆಲ ವರ್ಷಗಳಿಂದ 7ನೇ ವೇತನ ಆಯೋಗ ಜಾರಿಗೊಳಿಸಬೇಕೆಂದು ರಾಜ್ಯ ಸರ್ಕಾರಿ ನೌಕರರ ಸಂಘವು ಒತ್ತಾಯಿಸಿತ್ತು.
ಇದನ್ನೂ ಓದಿ: ಬಿಜೆಪಿ ನಾಯಕರ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ!
ರಾಜ್ಯ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯನ್ನು ರಾಜ್ಯ ಸರ್ಕಾರ ಈಡೇರಿಸಿದೆ. ಸೋಮವಾರ(ಜುಲೈ 15) ನಡೆದ ಸಚಿವ ಸಂಪುಟ ಸಭೆಯಲ್ಲಿ 7ನೇ ವೇತನ ಆಯೋಗದ ಶಿಫಾರಸಿಗೆ ಅನುಮೋದನೆ ನೀಡಲಾಗಿದ್ದು, ಆಗಸ್ಟ್ 1ರಿಂದ ಅನ್ವಯವಾಗುವಂತೆ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.