7th Pay Commission: ದಿನ ಒಂದು ಗಂಟೆ ಹೆಚ್ಚು ಕೆಲಸ ಮಾಡುವಂತೆ ಸರ್ಕಾರಿ ನೌಕರರಿಗೆ ಸಿಎಂ ಬೊಮ್ಮಾಯಿ ಕರೆ
ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಮಾಡಿ ಏಳನೇ ವೇತನ ಆಯೋಗ ರಚನೆ ಮಾಡಿರುವುದಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರ ನೇತೃತ್ವದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಅಧ್ಯಕ್ಷರುಗಳ ನಿಯೋಗವು ಇಂದು ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ, ಸಿಎಂ ಬೊಮ್ಮಾಯಿ, ಎಲ್ಲರೂ ಒಂದಾಗಿ ಸುಭಿಕ್ಷ ನಾಡನ್ನು ಕಟ್ಟೋಣ. ಪ್ರಾಮಾಣಿಕತೆ, ನಿಷ್ಠೆ ಹಾಗು ಕರ್ತವ್ಯ ಪ್ರಜ್ಞೆಯಿಂದ ಕೆಲಸ ಮಾಡಿ. ಬಡವರಿಗೆ, ಜನಪರವಾದ ಕೆಲಸ ಮಾಡಿದರೆ ಕರ್ನಾಟಕ ಅಭಿವೃದ್ಧಿಯಾಗುತ್ತದೆ. ನವ ಕರ್ನಾಟಕದಿಂದ ನವ ಭಾರತ ನಿರ್ಮಿಸೋಣ. ದೇಶದ 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಕನಸಿಗೆ ಕರ್ನಾಟಕ ಒಂದು ಟ್ರಿಲಿಯನ್ ಡಾಲರ್ ಕೊಡುಗೆ ನೀಡಬೇಕು ಎಂದರು.
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಏಳನೇ ವೇತನ ಆಯೋಗ ರಚನೆ ಮಾಡಿ ಭರ್ಜರಿ ಗುಡ್ ನ್ಯೂಸ್ ನೀಡಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಇದೀಗ ಪ್ರತಿದಿನ ಒಂದು ಗಂಟೆ ಹೆಚ್ಚು ಕೆಲಸ ಮಾಡುವಂತೆ ಸರ್ಕಾರಿ ನೌಕರರಿಗೆ ಕರೆ ನೀಡಿದ್ದಾರೆ.
ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಮಾಡಿ ಏಳನೇ ವೇತನ ಆಯೋಗ ರಚನೆ ಮಾಡಿರುವುದಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರ ನೇತೃತ್ವದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಅಧ್ಯಕ್ಷರುಗಳ ನಿಯೋಗವು ಇಂದು ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ, ಸಿಎಂ ಬೊಮ್ಮಾಯಿ, ಎಲ್ಲರೂ ಒಂದಾಗಿ ಸುಭಿಕ್ಷ ನಾಡನ್ನು ಕಟ್ಟೋಣ. ಪ್ರಾಮಾಣಿಕತೆ, ನಿಷ್ಠೆ ಹಾಗು ಕರ್ತವ್ಯ ಪ್ರಜ್ಞೆಯಿಂದ ಕೆಲಸ ಮಾಡಿ. ಬಡವರಿಗೆ, ಜನಪರವಾದ ಕೆಲಸ ಮಾಡಿದರೆ ಕರ್ನಾಟಕ ಅಭಿವೃದ್ಧಿಯಾಗುತ್ತದೆ. ನವ ಕರ್ನಾಟಕದಿಂದ ನವ ಭಾರತ ನಿರ್ಮಿಸೋಣ. ದೇಶದ 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಕನಸಿಗೆ ಕರ್ನಾಟಕ ಒಂದು ಟ್ರಿಲಿಯನ್ ಡಾಲರ್ ಕೊಡುಗೆ ನೀಡಬೇಕು ಎಂದರು.
ಕರ್ನಾಟಕದಲ್ಲಿ ವೇತನ ಆಯೋಗವನ್ನು ಐದು ವರ್ಷವಾದ ಕೂಡಲೇ ಘೋಷಣೆಯಾಗಿರುವುದು ನಮ್ಮ ಸರ್ಕಾರದ ಅವಧಿಯಲ್ಲಿ ಎಂದು ತಿಳಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ವರ್ಷದಿಂದ ವರ್ಷಕ್ಕೆ ಹಣದುಬ್ಬರ ಹೆಚ್ಚಾಗುತ್ತದೆ. ಸರ್ಕಾರಿ ನೌಕರರಾಗಿ ಸೇವೆಗೆ ಸೇರಿದ ಸಂದರ್ಭಕ್ಕೂ ಈಗಿನ ಸಂದರ್ಭಕ್ಕೂ ವ್ಯತ್ಯಾಸವಿರುತ್ತದೆ. ಸಮಯ ಮತ್ತು ಹಣ ಎರಡೂ ಬಹಳ ಮುಖ್ಯ. ಸರಿಯಾದ ಸಮಯದಲ್ಲಿ ಸರಿಯಾದ ಸಂಪಾದನೆಯಾದರೆ ಬದುಕಿಗೆ ಪ್ರೇರಣೆ. ಅದಕ್ಕಾಗಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಬಿ.ಎಸ್.ಯಡಿಯೂರಪ್ಪ ಅವರು ಕೂಡ ಇದಕ್ಕೆ ಒತ್ತಾಸೆಯಾಗಿದ್ದರು. ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ಅವರೂ ಒತ್ತಾಯ ಮಾಡಿದ್ದರು ಎಂದು ತಿಳಿಸಿದರು.
ಇದನ್ನೂ ಓದಿ- ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಫೋಟೋ ಇರುವ ನೋಟು ಬಿಡುಗಡೆ ಮಾಡಿದ ಕಾಂಗ್ರೆಸ್!
ಅತ್ಯಂತ ಪ್ರಾಮಾಣಿಕ, ನಿಷ್ಠಾವಂತ ಅಧಿಕಾಯಾಗಿದ್ದ ಡಾ: ಸುಧಾಕರ್ ರಾವ್ ದಕ್ಷತೆಯಿಂದ ಕೆಲಸ ಮಾಡಿದವರು. ಪ್ರಭಾವಕ್ಕೆ ಮಣಿಯದವರು. ನ್ಯಾಯಸಮ್ಮತವಾದ 7 ನೇ ವೇತನ ಆಯೋಗದ ವರದಿ ಬರಲಿ ಎಂದು ಶುದ್ಧಹಸ್ತ, ಶುದ್ಧ ಅಂತ:ಕರಣವುಳ್ಳ ಸುಧಾಕರ್ ರಾವ್ ಅವರ ಆಯ್ಕೆ ಆಗಿದೆ. ಇದಕ್ಕೆ ನೌಕರರ ಸಹಕಾರ ಕೂಡ ಅಗತ್ಯ. ಇದನ್ನು ಸಕಾರಗೊಳಿಸಿ ಎಲ್ಲರಿಗೂ ಒಳ್ಳೆಯದು ಆಗಬೇಕು. ಚಿಂತೆ ಮಾಡಬೇಡಿ. ಮುಂದಿನ ಸರ್ಕಾರ ನಮ್ಮದೇ ಬರಲಿದ್ದು, ಇದರ ಅನುಷ್ಠಾನ ನಾವೇ ಮಾಡುತ್ತೇವೆ ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.
ಸರಕಾರಿ ನೌಕರರ ಸೇವೆಗೆ ಅಭಿನಂದನೆ:
ವಿಶೇಷವಾಗಿ ಕೋವಿಡ್ ಸಂದರ್ಭದಲ್ಲಿ ಆರೋಗ್ಯ, ಪೊಲೀಸ್, ಗ್ರಾಮೀಣಾಭಿವೃದ್ಧಿ, ಕಂದಾಯ ಇಲಾಖೆಗಳು ಉತ್ತಮವಾಗಿ ಕಾರ್ಯನಿರ್ವಹಿಸಿವೆ. ಕಂದಾಯ, ಲೋಕೋಪಯೋಗಿ, ಅಗ್ನಿಶಾಮಕ ಇಲಾಖೆ ಸೇರಿದಂತೆ ಬಹುತೇಕ ಎಲ್ಲಾ ಇಲಾಖೆಗಳು ಉತ್ತಮವಾಗಿ ಕಾರ್ಯನಿರ್ವಹಿಸಿವೆ. ನಾನು ಮುಖ್ಯಮಂತ್ರಿಯಾದ ಸಂದರ್ಭದಲ್ಲಿ ಐದು ಸಾವಿರ ಕೋಟಿ ಆದಾಯ ಸಂಗ್ರಹ ಕೊರತೆ ಇತ್ತು. ಇದನ್ನು ಭರ್ತಿ ಮಾಡುವಂತೆ ಸೂಚಿಸಿದಾಗ ತೆರಿಗೆ ಇಲಾಖೆ ಅಧಿಕಾರಿಗಳು ಇದಕ್ಕೆ ಸ್ಪಂದಿಸಿ ಆ ಮೊತ್ತವನ್ನು ತುಂಬಿದ್ದಷ್ಟೇ ಅಲ್ಲದೆ, ಆ ವರ್ಷದ ಗುರಿಗಿಂತಲೂ 13 ಸಾವಿರ ಕೋಟಿ ರೂ.ಗಳ ಹೆಚ್ಚಿನ ಆದಾಯ ಸಂಗ್ರಹ ಮಾಡಿದರು ಎಂದು ಸರ್ಕಾರಿ ನೌಕರರ ಸೇವೆಗೆ ಸಿಎಂ ಬೊಮ್ಮಾಯಿ ಅಭಿನಂದನೆ ಸಲ್ಲಿಸಿದರು.
ಸರ್ಕಾರದ ಮುಖ್ಯಸ್ಥನಾಗಿ ಸರಕಾರಿ ನೌಕರರ ಸೇವೆಯನ್ನು ಗುರುತಿಸುವುದಾಗಿ ತಿಳಿಸಿ ಅಭಿನಂದಿಸಿದ ಮುಖ್ಯಮಂತ್ರಿಗಳು ಅದೇ ಸಂದರ್ಭದಲ್ಲಿ ನ್ಯಾಯಸಮ್ಮತ ಬೇಡಿಕೆಗಳಿಗೆ ಸರ್ಕಾರ ಸ್ಪಂದಿಸಬೇಕೆಂಬ ತೀರ್ಮಾನ ಮಾಡಿದೆ. ಕೇಂದ್ರ ಸರ್ಕಾರ ಡಿಎ ಘೋಷಿಸಿದ 24 ಗಂಟೆಯೊಳಗೆ ರಾಜ್ಯ ಸರ್ಕಾರ ಆದೇಶ ಹೊರಡಿಸಿತು. ಮತ್ತೊಂದು ಡಿಎ ಕೇಂದ್ರ ಸರ್ಕಾರಕ್ಕೆ ಬೆಳಿಗ್ಗೆ ಘೋಷಣೆ ಮಾಡಿದರೆ ಸಂಜೆ ರಾಜ್ಯದಲ್ಲಿ ಆದೇಶ ಹೊರಡಿಸಲಾಯಿತು ಎಂದರು.
ಇದನ್ನೂ ಓದಿ- “ಆಸ್ಪತ್ರೆಗಳಲ್ಲಿ ವೈದ್ಯಾಧಿಕಾರಿಗಳು ಅಮಾನವೀಯವಾಗಿ ನಡೆದುಕೊಂಡರೆ ಕೆಲಸದಿಂದಲೇ ವಜಾ”
ಜನಸ್ಪಂದನೆಯ ಕೆಲಸವಾಗಬೇಕು:
ಕಾರ್ಯಾಂಗ ಜನಸ್ಪಂದನೆಯ ಕೆಲಸ ಮಾಡಿದಾಗ ಸರ್ಕಾರಕ್ಕೆ, ವ್ಯವಸ್ಥೆಗೆ ಒಳ್ಳೆಯ ಹೆಸರು ಬರುತ್ತದೆ. ಜನಸಂಖ್ಯೆ ಹೆಚ್ಚಿದ್ದು, ಎಲ್ಲರ ಅಶೋತ್ತರಗಳೂ ಹೆಚ್ಚಾಗಿವೆ. ಯುವಕರು, ವಿದ್ಯಾವಂತರ ನೌಕರರ ಜೀವನದ ಗುಣಮಟ್ಟವೂ ಉತ್ತಮಗೊಳ್ಳಬೇಕು. ಅವರು ಚೆನ್ನಾಗಿದ್ದರೆ ಸಂತೋಷದಿಂದಿದ್ದರೆ ಸರ್ಕಾರದ ಕೆಲಸಗಳು ಉತ್ತಮವಾಗಿ ಆಗುತ್ತದೆ. ವ್ಯವಸ್ಥೆಯಲ್ಲಿ ವೇತನ, ಸೌಲತ್ತು, ಪಿಂಚಣಿಯನ್ನು ಕಾಲಕಾಲಕ್ಕೆ ಪರಿಷ್ಕರಣೆ ಮಾಡಬೇಕು. ಇದು ಮೊದಲಿನಿಂದಲೂ ಬಂದಿದೆ. ಒಂದು ವೇತನ ಆಯೋಗಕ್ಕೂ ಮತ್ತೊಂದು ವೇತನ ಆಯೋಗದ ನಡುವೆ 5 ವರ್ಷಗಳ ಅಂತರವಿರಬೇಕು. ಆದರೆ ಬಹಳ ಸಾರಿ ಹಾಗಾಗುವುದಿಲ್ಲ. 6-7 ವರ್ಷ ತೆಗೆದುಕೊಂಡಿರುವ ಉದಾಹರಣೆ ಇದೆ. ನಮ್ಮ ಸರ್ಕಾರ ಕೋವಿಡ್ ಹಾಗೂ ಪ್ರವಾಹದ ಹಿನ್ನೆಲೆಯಲ್ಲಿ, ತಮ್ಮ ಜೀವದ ಹಂಗನ್ನು ತೊರೆದು ಸರ್ಕಾರಕ್ಕೆ ಸಹಾಯಕವಾಗಿ ನಿಂತು ಜನರ ಸೇವೆಯನ್ನು ಅತ್ಯುತ್ತಮವಾಗಿ ಮಾಡಿದೆ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.