ಚಾಮರಾಜನಗರ: ನಕಲಿ ಅಂಕಪಟ್ಟಿಗಳನ್ನು ಸಲ್ಲಿಸಿ ಗ್ರಾಮ ಲೆಕ್ಕಿಗರ ಉದ್ಯೋಗ ಗಿಟ್ಟಿಸಿದ 8 ಮಂದಿ ಆರೋಪ ಸಾಬೀತಾಗಿದ್ದು ಚಾಮರಾಜನಗರ ನ್ಯಾಯಾಲಯ 2 ವರ್ಷ ಶಿಕ್ಷೆ ವಿಧಿಸಿದೆ.


COMMERCIAL BREAK
SCROLL TO CONTINUE READING

ಕೋಲಾರ ತಾಲೂಕಿನ ಸುನೀಲ್ ಕುಮಾರ್(25) , ಅರಸಿಕೆರೆ ತಾಲೂಕಿನ ಸಂತೋಷ್ ಕುಮಾರ್(29, ಹಾಸನ ತಾಲೂಕಿನ ಎ.ಬಿ.ಶಂಕರ್(39), ಮುಳಬಾಗಿಲು ತಾಲೂಕಿನ ಎಂ. ಷಣ್ಮುಗ (25) , ನಾರಾಯಣಸ್ವಾಮಿ(25), ದೇವನಹಳ್ಳಿ ತಾಲೂಕಿನ ಶ್ರೀರಾಂ(27) ದೊಡ್ಡಬಳ್ಳಾಪುರ ತಾಲೂಕಿನ ಮುನಿರಾಜು(25) ,ಹೊಸಕೋಟೆ ತಾಲೂಕಿನ ಎಸ್.ಬಿ‌‌.ಸಿದ್ದಲಿಂಗಯ್ಯ(24) ಶಿಕ್ಷೆಗೊಳಗಾದ ಅಪರಾಧಿಗಳು.


ನಕಲಿ ಅಂಕಪಟ್ಟಿ ಮೂಲಕ ಗ್ರಾಮ ಲೆಕ್ಕಿಗ ಹುದ್ದೆ: 


2012 ರಲ್ಲಿ ಚಾಮರಾಜನಗರ ಜಿಲ್ಲೆಯಲ್ಲಿ ಖಾಲಿ ಇದ್ದ  46 ಗ್ರಾಮ ಲೆಕ್ಕಿಗ ಹುದ್ದೆಯನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿತ್ತು.  ಆ ವೇಳೆ, 8 ಮಂದಿ ಅಪರಾಧಿಗಳು ದೆಹಲಿ ಪಿಯು ಬೋರ್ಡ್ ಹಾಗೂ ಕರ್ನಾಟಕ ಶಿಕ್ಷಣ ಇಲಾಖೆಯ ನಕಲಿ ಅಂಕಪಟ್ಟಿಗಳನ್ನು ಸಲ್ಲಿಸಿ ಉದ್ಯೋಗ ಪಡೆದಿದ್ದರು.


2013 ರಲ್ಲಿ ಅಂಕಪಟ್ಟಿಗಳ ನೈಜತೆ ಪರಿಶೀಲಿಸಿದ ವೇಳೆ ನಕಲಿ ಎಂದು ತಿಳಿದುಬಂದು ಚಾಮರಾಜನಗರ ಪಟ್ಟಣ ಠಾಣೆಯಲ್ಲಿ ಪ್ರಕರಣ ದಾಖಲಾಗಿ ಚಾಮರಾಜನಗರ ಸಿಜೆಎಂ ನ್ಯಾಯಾಲಯದ ವಿಚಾರಣೆ ನಡೆಯುತ್ತಿತ್ತು. ಪ್ರಕರಣ ದಾಖಲಾದ ಹೊತ್ತಲ್ಲೇ 8 ಮಂದಿಯನ್ನು ಸೇವೆಯಿಂದ ತೆಗೆದು ಹಾಕಲಾಗಿತ್ತು. ವಿಚಾರಣೆ ಪೂರ್ಣಗೊಂಡು ನಕಲಿ ಅಂಕಪಟ್ಟಿ ಕೊಟ್ಟು ವಂಚಿಸಿದ್ದು ಸಾಬೀತಾದ ಹಿನ್ನೆಲೆಯಲ್ಲಿ  ಹಿರಿಯ ಸಿವಿಲ್ ನ್ಯಾ.ಹೊನ್ನುಸ್ವಾಮಿ  8 ಮಂದಿಗೆ ಶಿಕ್ಷೆ ವಿಧಿಸಿ ಆದೇಶ ನೀಡಿದ್ದಾರೆ.


ಸರ್ಕಾರದ ಪರವಾಗಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕ ಎ.ಸಿ‌.ಮಹೇಶ್ ವಾದ ಮಂಡಿಸಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.