ವಿಶ್ವದ 2% ಉನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಬೆಂಗಳೂರು ವಿವಿ 8 ಪ್ರಾಧ್ಯಾಪಕರಿಗೆ ಸ್ಥಾನ: ವಿಶ್ವಮಟ್ಟದಲ್ಲಿ ಮತ್ತೊಂದು ಗರಿಮೆ

 ರಾಜ್ಯ ವಿಶ್ವವಿದ್ಯಾಲಯಗಳ ಸಾಲಿನಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಪ್ರಾಧ್ಯಾಪಕರು ಅತಿ ಹೆಚ್ಚು ಸ್ಥಾನ ಪಡೆದಿದ್ದು ಮತ್ತೊಮ್ಮೆ ವಿಶ್ವಮಟ್ಟದಲ್ಲಿ ಮನ್ನಣೆ ಗಳಿಸಿದೆ.  

Written by - Manjunath Hosahalli | Last Updated : Sep 19, 2024, 06:39 PM IST
    • 2024ನೇ ಸಾಲಿನ ವಿಶ್ವದ 2% ಉನ್ನತ ವಿಜ್ಞಾನಿಗಳ ಪಟ್ಟಿ
    • ಬೆಂಗಳೂರು ವಿಶ್ವವಿದ್ಯಾಲಯದ 8 ಪ್ರಾಧ್ಯಾಪಕರಿಗೆ ಸ್ಥಾನ
    • ಈ ಬಗ್ಗೆ ಪ್ರತಿಕ್ರಿಯಿಸಿದ ಕುಲಪತಿ ಡಾ.ಜಯಕರ ಎಸ್ ಎಂ
ವಿಶ್ವದ 2% ಉನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಬೆಂಗಳೂರು ವಿವಿ 8 ಪ್ರಾಧ್ಯಾಪಕರಿಗೆ ಸ್ಥಾನ: ವಿಶ್ವಮಟ್ಟದಲ್ಲಿ ಮತ್ತೊಂದು ಗರಿಮೆ title=
File Photo

ಬೆಂಗಳೂರು ವಿಶ್ವವಿದ್ಯಾಲಯ 8 ಪ್ರಾಧ್ಯಾಪಕರು 2024ನೇ ಸಾಲಿನ ವಿಶ್ವದ 2% ಉನ್ನತ ವಿಜ್ಞಾನಿಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಅಮೆರಿಕದ ಸ್ಟ್ಯಾನ್‌ಫೋರ್ಡ್‌ ವಿವಿ ಹಾಗೂ ನೆದರ್ಲೆಂಡ್‌ನ ಎಲ್ಸವಿಯರ್ ಪ್ರಕಾಶನ ಸಂಸ್ಥೆ ಪ್ರತಿ ವರ್ಷ ಸೈಟೇಷನ್ ಇಂಡೆಕ್ಸ್ ಆಧಾರದ ಮೇಲೆ ವಿಜ್ಞಾನಿಗಳನ್ನು ಗುರುತಿಸಿ ಸ್ಥಾನ ನೀಡುತ್ತದೆ.

ಇದನ್ನೂ ಓದಿ: ಪಥ್ಯ ಔಷಧಿ ಮರೆತು ಬಿಡಿ !ಊಟವಾದ ತಕ್ಷಣ ಈ ಕಾಳನ್ನು ಬಾಯಿಗೆ ಹಾಕಿಕೊಳ್ಳಿ !ಬ್ಲಡ್ ಶುಗರ್ ನಾರ್ಮಲ್ ಆಗುವುದು ಖಚಿತ 

ಬೆಂಗಳೂರು ವಿಶ್ವವಿದ್ಯಾಲಯದ ರಸಾಯನಶಾಸ್ತ್ರ, ಭೌತಶಾಸ್ತ್ರ, ಸೂಕ್ಷ್ಮ ಜೀವವಿಜ್ಞಾನ ಮತ್ತು ಗಣಿತ ವಿಭಾಗಕ್ಕೆ ಸೇರಿದ ಚಂದ್ರಶೇಖರಯ್ಯ ಡಿ.ಎಸ್, ದೇವಿ ಎಲ್ ಗೋಮತಿ, ರುದ್ರಯ್ಯ ಎನ್, ಶಿವಕುಮಾರ, ಸಿ ಶ್ರೀನಿವಾಸ್, ಕುಂಬಿನರಸಯ್ಯ ಎಸ್, ಈರಯ್ಯ ಬಿ, ವಿಷ್ಣು ಕಾಮತ್ ಸೇರಿದಂತೆ 8 ಪ್ರಾಧ್ಯಾಪಕರು ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ರಾಜ್ಯ ವಿಶ್ವವಿದ್ಯಾಲಯಗಳ ಸಾಲಿನಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಪ್ರಾಧ್ಯಾಪಕರು ಅತಿ ಹೆಚ್ಚು ಸ್ಥಾನ ಪಡೆದಿದ್ದು ಮತ್ತೊಮ್ಮೆ ವಿಶ್ವಮಟ್ಟದಲ್ಲಿ ಮನ್ನಣೆ ಗಳಿಸಿದೆ.

ಇದನ್ನೂ ಓದಿ:  ವರ್ಷದಲ್ಲಿ ಒಂದೇ ಬಾರಿ ಬೆಳೆಯುವ ಈ ಸೊಪ್ಪು ಸಿಕ್ಕರೆ ಬಿಡಲೇಬೇಡಿ... ಇದನ್ನು ಸೇವಿಸಿದರೆ ಕಣ್ಣು ಎಷ್ಟೇ ಮಂಜಾಗುತ್ತಿದ್ದರೂ ಶಾರ್ಪ್‌ ಆಗುತ್ತೆ! ಕನ್ನಡಕದ ಅವಶ್ಯಕತೆಯೇ ಇರಲ್ಲ

ಈ ಬಗ್ಗೆ ಕುಲಪತಿ ಡಾ.ಜಯಕರ ಎಸ್ ಎಂ ಪ್ರತಿಕ್ರಿಯಿಸಿದ್ದು "ಬೆಂಗಳೂರು ವಿಶ್ವವಿದ್ಯಾಲಯ ಸತತವಾಗಿ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಗಳಿಸುತ್ತಿದ್ದು ಆ ಸಾಲಿಗೆ ಮತ್ತೊಂದು ಹಿರಿಮೆ ಸೇರ್ಪಡೆಯಾಗಿದೆ. ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ವಿಜ್ಞಾನ, ಸಂಶೋಧನೆಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು,ಪ್ರತಿಫಲವಾಗಿ ಪಟ್ಟಿಯಲ್ಲಿ ಸ್ಥಾನ ದೊರೆತಿದೆ. ವಿಜ್ಞಾನ ಕ್ಷೇತ್ರದಲ್ಲಿನ ಅಧ್ಯಯನ ಮತ್ತು ಸಂಶೋಧನೆಗಳಿಂದ ವಿವಿ ಪ್ರಾಧ್ಯಾಪಕರು ಚಾಪು ಮೂಡಿಸಿದ್ದಾರೆ. ಈ ಮೂಲಕ ವಿದ್ಯಾರ್ಥಿಗಳ ಅಭಿವೃದ್ಧಿಗೂ ಸಾಕಷ್ಟು ಅನುಕೂಲವಾಗಲಿದೆ. ಭವಿಷ್ಯದಲ್ಲಿ ವಿಶ್ವವಿದ್ಯಾಲಯ ವಿಜ್ಞಾನ ಕ್ಷೇತ್ರದಲ್ಲಿ ಮತ್ತಷ್ಟು ಉತ್ತೇಜನ, ಪ್ರೋತ್ಸಾಹ ನೀಡಲಿದೆ" ಎಂದು ತಿಳಿಸಿದರು.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

 

Trending News