ಬೆಂಬಲ ಬೆಲೆ ಯೋಜನೆಯಡಿ ರೂ.8682 ರಂತೆ ಹೆಸರು ಕಾಳು ಉತ್ಪನ್ನ ಖರೀದಿ

ಬೆಂಬಲ ಬೆಲೆ ಯೋಜನೆಯ ಬಗ್ಗೆ ರೈತರಿಗೆ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಹೆಸರುಕಾಳು ಉತ್ಪನ್ನದ ಖರೀದಿಯ ಕಾಲಾವಧಿ, ಖರೀದಿಯ ಪ್ರಮಾಣ, ನೀಡಲಾಗುವ ಕನಿಷ್ಟ ಬೆಂಬಲ ಬೆಲೆ, ಇತ್ಯಾದಿ ಕುರಿತು ಕರಪತ್ರ ಹಾಗೂ ಬ್ಯಾನರ್‌ಗಳ ಮೂಲಕ ಪ್ರಮುಖ ಸ್ಥಳಗಳಲ್ಲಿ ಪ್ರದರ್ಶಿಸಿ ಖರೀದಿಯ ಪ್ರಕ್ರಿಯೆಯನ್ನು ಹೆಚ್ಚು ಪ್ರಚುರಪಡಿಸುವಂತೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಕಾರ್ಯದರ್ಶಿಗಳಿಗೆ ಹಾಗೂ ಖರೀದಿ ಏಜೆನ್ಸಿಯ ಶಾಖಾ ವ್ಯವಸ್ಥಾಪಕರುಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು.

Written by - Manjunath N | Last Updated : Aug 27, 2024, 03:20 PM IST
  • ಆದೇಶ ಹೊರಡಿಸಿದ ದಿನಾಂಕದಿಂದ 45 ದಿನಗಳವರೆಗೆ ಹಾಗೂ ಹೆಸರುಕಾಳು ಉತ್ಪನ್ನ ಖರೀದಿ ಕಾಲಾವಧಿಯನ್ನು 90 ದಿನಗಳವರೆಗೆ ನಿಗದಿಪಡಿಸಲಾಗಿದೆ
  • ಆವರ್ತ ನಿಧಿ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ
ಬೆಂಬಲ ಬೆಲೆ ಯೋಜನೆಯಡಿ ರೂ.8682 ರಂತೆ ಹೆಸರು ಕಾಳು ಉತ್ಪನ್ನ ಖರೀದಿ title=

ಧಾರವಾಡ : ಕೇಂದ್ರ ಸರಕಾರದ ಬೆಂಬಲ ಬೆಲೆ ಯೋಜನೆಯಡಿ ರೈತರ ಮಾರಾಟಕ್ಕೆ ಅನುಕೂಲವಾಗುವಂತೆ ಜಿಲ್ಲೆಯ 20 ಸ್ಥಳಗಳಲ್ಲಿ  ಸರಕಾರದ ಆದೇಶ ದಿನಾಂಕದಿಂದ ರೈತರಿಂದ ಎಫ್.ಎ.ಕ್ಯೂ ಗುಣಮಟ್ಟದ ಹೆಸರು ಕಾಳು ಉತ್ಪನ್ನವನ್ನು ಪ್ರತಿ ಕ್ವಿಂಟಲ್‍ಗೆ ರೂ.8682 ರಂತೆ   ದರದಂತೆ ಪ್ರತಿ ರೈತನಿಂದ ಗರಿಷ್ಠ 10 ಕ್ವಿಂಟಾಲ್ ಹೆಸರು ಕಾಳು ಉತ್ಪನ್ನವನ್ನು ನೇರವಾಗಿ ಖರೀದಿ ಮಾಡಲಾಗುತ್ತದೆ ಎಂದು ಜಿಲ್ಲಾ ಟಾಸ್ಕ ಫೊರ್ಸ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು.

ಅವರು ಇಂದು ಬೆಳಿಗ್ಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಟಾಸ್ಕ ಫೊರ್ಸ ಸಮಿತಿ ಸಭೆ ಜರುಗಿಸಿ, ಹೆಸರು ಕಾಳು ಉತ್ಪನ್ನ ಖರೀದಿಗಳನ್ನು ಆರಂಭಿಸುವ ಕುರಿತು ಚರ್ಚಿಸಿ, ನಿರ್ದೇಶನ ನೀಡಿದರು.

ಪ್ರಸಕ್ತ ವರ್ಷ ಮುಂಗಾರಿನಲ್ಲಿ ಜಿಲ್ಲೆಯ ಸುಮಾರು 1ಲಕ್ಷ ಹೆಕ್ಟೆರ್ ಕೃಷಿ ಭೂಮಿಯಲ್ಲಿ ಹೆಸರು ಕಾಳು ಬಿತ್ತನೆ ಆಗಿದೆ. ನವಲಗುಂದ ತಾಲೂಕಿನಲ್ಲಿ 38 ಸಾವಿರ ಹೆಕ್ಟೆರ್, ಅಣ್ಣಿಗೇರಿ ತಾಲೂಕಿನಲ್ಲಿ ಸುಮಾರು 19 ಸಾವಿರ ಹೆಕ್ಟೆರ್, ಧಾರವಾಡ ತಾಲೂಕಿನಲ್ಲಿ 10 ಸಾವಿರ ಹೆಕ್ಟೆರ್, ಹುಬ್ಬಳ್ಳಿ ತಾಲೂಕಿನಲ್ಲಿ 12 ಸಾವಿರ ಹೆಕ್ಟೆರ್ ಮತ್ತು ಕುಂದಗೋಳ ತಾಲೂಕಿನಲ್ಲಿ 19 ಸಾವಿರ ಹೆಕ್ಟೆರ್ ಭೂ ಪ್ರದೇಶದಲ್ಲಿ ಹೆಸರು ಬಿತ್ತನೆ ಆಗಿದೆ. ಅಂದಾಜು 1 ಲಕ್ಷ ಕ್ವಿಂಟಲ್ ಹೆಸರು ರೈತರಿಗೆ ತೊಂದರೆ ಆಗದಂತೆ ನಿಯಮಾನುಸಾರ ರೈತರಿಂದ ನೇರವಾಗಿ ಉತ್ಪನ್ನ ಖರೀದಿಸಬೇಕು.ರೈತರಿಗೆ ತೊಂದರೆ ಆಗದಂತೆ ಅಗತ್ಯ ಪೂರ್ವಸಿದ್ಧತೆ ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಅಧಿಕಾರಿಗಳಿಗೆ ಸೂಚಿಸಿದರು. 

ಮಧ್ಯವರ್ತಿಗಳಿಗೆ ಅವಕಾಶವಿಲ್ಲ: ರೈತರಿಂದಲೇ ನೇರವಾಗಿ ಖರೀದಿ ಕೇಂದ್ರಗಳ ಮೂಲಕ ಹೆಸರು ಕಾಳು ಉತ್ಪನ್ನವನ್ನು ಖರೀದಿಸುವದರಿಂದ ಮಧ್ಯವರ್ತಿಗಳಿಗೆ ಅವಕಾಶವಿಲ್ಲ. 

2024-25 ನೇ ಸಾಲಿನ ಮುಂಗಾರು ಹಂಗಾಮಿನ ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಹೆಸರುಕಾಳು ಉತ್ಪನ್ನವನ್ನು ಖರೀದಿಸಲು ನಾಫೆಡ್ ಸಂಸ್ಥೆಯನ್ನು ಕೇಂದ್ರ ಸರಕಾರದ ಖರೀದಿ ಸಂಸ್ಥೆಯನ್ನಾಗಿ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಮತ್ತು ಕರ್ನಾಟಕ ರಾಜ್ಯ ದ್ವಿದಳ ಧಾನ್ಯ ಅಭಿವೃದ್ಧಿ ಮಂಡಳಿ ನಿಯಮಿತ, ಕಲಬುರಗಿ ಸಂಸ್ಥೆಗಳನ್ನು ರಾಜ್ಯದ ವತಿಯಿಂದ ಖರೀದಿ ಸಂಸ್ಥೆಗಳನ್ನಾಗಿ ಗುರುತಿಸಲಾಗಿದೆ ಎಂದು ಅವರು ಹೇಳಿದರು.

ರೈತರ ನೋಂದಣಿಗೆ ಕಾಲಾವಧಿಯನ್ನು ಸರ್ಕಾರದ ಆದೇಶ ಹೊರಡಿಸಿದ ದಿನಾಂಕದಿಂದ 45 ದಿನಗಳವರೆಗೆ ಹಾಗೂ ಹೆಸರುಕಾಳು ಉತ್ಪನ್ನ ಖರೀದಿ ಕಾಲಾವಧಿಯನ್ನು 90 ದಿನಗಳವರೆಗೆ ನಿಗದಿಪಡಿಸಲಾಗಿದೆ.

ಇದನ್ನೂ ಓದಿ- K-SET: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 28 ರವರೆಗೆ ಅವಕಾಶ..!

ಪ್ರತಿ ರೈತರಿಂದ ಹೆಸರುಕಾಳನ್ನು ಪ್ರತಿ ಎಕರೆಗೆ 02 ಕ್ವಿಂಟಾಲ್‌ನಂತೆ ಗರಿಷ್ಟ 10 ಕ್ವಿಂಟಾಲ್ ಖರೀದಿ ಪ್ರಮಾಣ ನಿಗದಿಪಡಿಸಲಾಗಿದೆ.ಖರೀದಿ ಕೇಂದ್ರಗಳಲ್ಲಿ ಹೆಸರುಕಾಳು ಖರೀದಿಸುವ ಪೂರ್ವದಲ್ಲಿ ರೈತರ ನೋಂದಣಿಯನ್ನು NIC ಸಂಸ್ಥೆಯು ಬೆಂಬಲ ಬೆಲೆ ಯೋಜನೆಯಡಿ ಭತ್ತ ಮತ್ತು ರಾಗಿ ಬೆಳೆಗಳ ಉತ್ಪನ್ನವುನ್ನು ಖರೀದಿಸಲು ಸಿದ್ಧಪಡಿಸಿರುವ ತಂತ್ರಾಂಶವನ್ನು ಸೂಕ್ತವಾಗಿ ಉನ್ನತ್ತಿಕರಿಸಿ, ಬಯೋಮೇಟ್ರಿಕ್ ಮೂಲಕ ಹೆಸರುಕಾಳನ್ನು ಬೆಂಬಲ ಬೆಲೆ ಯೋಜನೆಯಡಿ ನೊಂದಾಯಿಸಲು ಬಳಸಕ್ಕದ್ದು, ಹಾಗೂ NIC ಸಂಸ್ಥೆಯು ಅಭಿವೃದ್ಧಿಪಡಿಸಿರುವ ಸದರಿ ನೋಂದಣಿ ತಂತ್ರಾಂಶವು ಈಗಾಗಲೇ FRUITS ತಂತ್ರಾಂಶದೊಂದಿಗೆ ಸಂಯೋಜಿಸಲಾಗಿದೆ. FRUITS ದತ್ತಾಂಶದಲ್ಲಿ ರೈತರಿಗೆ ಸಂಬಂಧಿಸಿದ ವಿವರಗಳನ್ನು ಭೂಮಿ, UIDAI ಮತ್ತು ಬೆಳೆ ಸಮೀಕ್ಷೆ ದತ್ತಾಂಶದೊಂದಿಗೆ ತಾಳೆ ಮಾಡಿ ವಿವರಗಳನ್ನು ಇಂದೀಕರಿಸಲಾಗಿದೆ. ಸದರಿ ವಿವರಗಳನ್ನು ಬೆಂಬಲಬೆಲೆ ಯೋಜನೆಯಡಿ ನೊಂದಣಿ ಮಾಡಲು ಸಿದ್ಧಪಡಿಸಿದ ತಂತ್ರಾಂಶಕ್ಕೆ ವಿದ್ಯುನ್ಮಾನ ರೀತಿಯಲ್ಲಿ ಒದಗಿಸಲಾಗುತ್ತದೆ ಎಂದು ಅವರು ಹೇಳಿದರು.
 ಬೆಂಬಲಬೆಲೆ ಯೋಜನೆಯಡಿ ನೋಂದಣಿ ಮಾಡಿದ ನಂತರ NIC ತಂತ್ರಾಂಶ ದಿಂದ ನ್ಯಾಫೆಡ್ ಸಂಸ್ಥೆಯ ತಂತ್ರಾಂಶಕ್ಕೆ ರೈತರ ನೋಂದಣಿ ಮಾಹಿತಿಯನ್ನು ಒದಗಿಸಲಾಗುವದು. ನ್ಯಾಫೆಡ್ ಸಂಸ್ಥೆಯು ತಮ್ಮ ತಂತ್ರಾಂಶದಲ್ಲಿ ಈ ಮಾಹಿತಿಯನ್ನು ಬಳಸಿ ರೈತರಿಂದ ಹೆಸರುಕಾಳು ಖರೀದಿ ಕೇಂದ್ರಗಳಿಂದ ಖರೀದಿಸತಕ್ಕದ್ದು ಎಂದು ಸರಕಾರದ ಸುತ್ತೋಕೆಯಲ್ಲಿ ತಿಳಿಸಲಾಗಿದೆ ಎಂದು ತಿಳಿಸಿದರು.

ಖರೀದಿ ಸಂಸ್ಥೆಗಳು ಗ್ರಾಮೀಣ ಭಾಗದ ರೈತರಿಗೆ ಅನುಕೂಲವಾಗುವಂತೆ ನಾಫೆಡ್ ಮಾರ್ಗಸೂಚಿಯನ್ವಯ ಹಾಗೂ ತಾಂತ್ರಿಕ ಮತ್ತು ವೈಜ್ಞಾನಿಕ ಸೌಲಭ್ಯದಿಂದ ಕೂಡಿರುವ ಗೊದಾಮುಗಳನ್ನು ಹೊಂದಿರುವ ಸಧೃಡ PACS, VSSN, FPO ಹಾಗೂ TAPCMS ಸಂಸ್ಥೆಗಳ ಮುಖಾಂತರ ಹೊಂದಾಣಿಕೆ ಮಾಡಿಕೊಂಡು ಹೆಸರುಕಾಳು ಖರೀದಿಸಲು ಖರೀದಿ ಕೇಂದ್ರಗಳನ್ನು ತೆರೆಯಲು ಕ್ರಮವಹಿಸಬೇಕು.

ಬೆಂಬಲ ಬೆಲೆ ಯೋಜನೆಯ ಮಾರ್ಗಸೂಚಿಗಳಂತೆ ರೈತರಿಗೆ ನಿಗದಿತ ಅವಧಿಯೊಳಗೆ ಖರೀದಿ ಪ್ರಮಾಣದ ಮಾಲ್ಯವನ್ನು DBT ಮೂಲಕ ಜಮಾ ಆಗುವಂತೆ ಪಾವತಿ ಮಾಡತಕ್ಕದ್ದು. ಹಾಗೂ ಆವರ್ತ ನಿಧಿ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.ಹೆಸರುಕಾಳು ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ಹೆಸರುಕಾಳು ಖರೀದಿಸದಂತೆ ಹಾಗೂ ಖರೀದಿ ಸಂಸ್ಥೆಗಳ ಯಾವುದೇ ರೀತಿಯ ದುರುಪಯೋಗ ಆಗದಂತೆ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಬೇಕು.

ಬೆಂಬಲ ಬೆಲೆ ಯೋಜನೆ ಮಾರ್ಗಸೂಚಿ ಹಾಗೂ ಆವರ್ತನಿಧಿ ಮಾರ್ಗ ಸೂಚಿಗಳನ್ನು ಖರೀದಿದಾರರು ಮತ್ತು ಅಧಿಕಾರಿಗಳು ಕಡ್ಡಾಯವಾಗಿ ಪಾಲಿಸಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಖರೀದಿಸುವ ಪ್ರಗತಿ ವಿವರವನ್ನು ಪ್ರತಿದಿನ ಸರ್ಕಾರಕ್ಕೆ ಹಾಗೂ ಕರ್ನಾಟಕ ರಾಜ್ಯ ಕೃಷಿ ಮಾರಾಟ ಮಂಡಳಿಗೆ ಇ-ಮೇಲ್ ಮುಖಾಂತರ ಸಲ್ಲಿಸಬೇಕು. ಕೇಂದ್ರ ಸರ್ಕಾರವು ಘೋಷಿಸಿರುವ ಮುಂಗಾರು ಹಂಗಾಮಿನ ಎಫ್.ಎ.ಕ್ಯೂ.ಗುಣಮಟ್ಟದ ಹೆಸರುಕಾಳು ಉತ್ಪನ್ನಕ್ಕೆ ಪ್ರತಿ ಕ್ವಿಂಟಾಲ್‌ಗೆ ರೂ.8682 ರಂತೆ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಬೇಕೆಂದದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ- ಸಿಬಿಐ, ಲೋಕಾಯುಕ್ತದಿಂದ ಸ್ನೇಹಿತರು, ಕುಟುಂಬಸ್ಥರಿಗೆ ಕಿರುಕುಳ : ಡಿಸಿಎಂ ಡಿ.ಕೆ.ಶಿವಕುಮಾರ್

ಜಿಲ್ಲಾ ಟಾಸ್‌ಮೊರ್ಸ್‌ ಸಮಿತಿ ಸಭೆಯಲ್ಲಿ ಕೈಗೊಂಡ ತೀರ್ಮಾನದಂತೆ ಧಾರವಾಡ ಜಿಲ್ಲೆಯಲ್ಲಿನ ಧಾರವಾಡ, ಹುಬ್ಬಳ್ಳಿ, ಕುಂದಗೋಳ, ನವಲಗುಂದ & ಅಣ್ಣಿಗೇರಿ ತಾಲೂಕುಗಳ ವ್ಯಾಪ್ತಿಯಲ್ಲಿ ತೆರೆಯಲು ಉದ್ದೇಶಿಸಿರುವ ಹೆಸರುಕಾಳು ಉತ್ಪನ್ನದ ಖರೀದಿ ಕೇಂದ್ರಗಳು ಸೂವ್ಯವಸ್ಥಿತವಾಗಿದ್ದು, ಖರೀದಿ ಪ್ರಕ್ರಿಯೆ ಕೈಗೊಳ್ಳಲು ಸದೃಡ ಇರುವ ಬಗ್ಗೆ ಶಾಖಾ ವ್ಯವಸ್ಥಾಪಕರು ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳ ಹುಬ್ಬಳ್ಳಿ ಹಾಗೂ ಉಪನಿರ್ದೇಶಕರು ಕೃಷಿ ಮಾರಾಟ ಇಲಾಖೆ ಧಾರವಾಡ ಜಿಲ್ಲೆ ಧಾರವಾಡ ಇವರು ದೃಡೀಕರಿಸಿರುವ  ಅಂಶಗಳನ್ನು ಪರಿಶೀಲಿಸಲಾಗಿ, ಗುರುತಿಸಿದ ಸ್ಥಳಗಳಲ್ಲಿ ಎಫ್.ಎ.ಕ್ಯೂ. ಗುಣಮಟ್ಟದ ಹೆಸರುಕಾಳು ಉತ್ಪನ್ನದ ಖರೀದಿ ಕೇಂದ್ರ ತೆರೆದು ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಟಾಸ್ಕಫೋರ್ಸ ಸಮಿತಿಯು ಒಪ್ಪಿ ಸರ್ವಾನುಮತದಿಂದ ತಿರ್ಮಾನಿಸಲಾಯಿಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.

ಹೆಸರುಕಾಳು ಖರೀದಿ ಕೇಂದ್ರಗಳ ವಿವರಗಳು:

ಧಾರವಾಡ ತಾಲೂಕು: ಟಿ.ಎ.ಪಿ.ಸಿ.ಎಮ್.ಎಸ್ ಧಾರವಾಡ
ಪಿ.ಕೆ.ಪಿ.ಎಸ್ ಉಪ್ಪಿನಬೇಟಗೇರಿ ಮತ್ತು ಹೆಬ್ಬಳ್ಳಿಯಲ್ಲಿ
ಪಿ.ಕೆ.ಪಿ.ಎಸ್ ಹಳೆಹುಬ್ಬಳ್ಳಿ ಅವರಿಂದ
ಹುಬ್ಬಳ್ಳಿ ತಾಲೂಕು: ಟಿ.ಎ.ಪಿ.ಸಿ.ಎಮ್.ಎಸ್ ಹುಬ್ಬಳ್ಳಿ,
ಪಿ.ಕೆ.ಪಿ.ಎಸ್ ಬ್ಯಾಹಟ್ಟಿ,ಪಿ.ಕೆ.ಪಿ.ಎಸ್ ಹೆಬಸೂರ,
ಪಿ.ಕೆ.ಪಿ.ಎಸ್ ಕೋಳಿವಾಡ ನಂ-1,
ಪಿ.ಕೆ.ಪಿ.ಎಸ್ ನೂಲ್ವಿ
ನವಲಗುಂದ ತಾಲೂಕು:
ಪಿ.ಕೆ.ಪಿ.ಎಸ್ ಹೆಬ್ಬಾಳ, ಪಿ.ಕೆ.ಪಿ.ಎಸ್ ತಿರ್ಲಾಪೂರ,
ಪಿ.ಕೆ.ಪಿ.ಎಸ್ ಆರೇಕುರಹಟ್ಟಿ, ಶಿರೂರ ಗ್ರಾಮದಲ್ಲಿ
ಎಫ್.ಪಿ.ಓ ಮೊರಬ, ಮೊರಬ ಗ್ರಾಮದಲ್ಲಿ
ಪಿ.ಕೆ.ಪಿ.ಎಸ್ ಮೊರಬ,
ಪಿ.ಕೆ.ಪಿ.ಎಸ್ ಹಾಳಕುಸುಗಲ್ಲ,
ಪಿ.ಕೆ.ಪಿ.ಎಸ್. ನವಲಗುಂದ ಮತ್ತು
ಎ.ಪಿ.ಎಮ್.ಸಿ ನವಲಗುಂದದಲ್ಲಿ
ಟಿ.ಎ.ಪಿ.ಸಿ.ಎಮ್.ಎಸ್ ಅಣ್ಣಿಗೇರಿ ಅವರು ಖರೀದಿಸುತ್ತಾರೆ.
ಅಣ್ಣಿಗೇರಿ ತಾಲೂಕು: ಪಿ.ಕೆ.ಪಿ.ಎಸ್ ಅಣ್ಣಿಗೇರಿ
ಟಿ.ಎ.ಪಿ.ಸಿ.ಎಮ್.ಎಸ್ ಅಣ್ಣಿಗೇರಿ

ಕುಂದಗೋಳ ತಾಲೂಕು:

ಪಿ.ಕೆ.ಪಿ.ಎಸ್ ಯಲಿವಾಳ,ಪಿ.ಕೆ.ಪಿ.ಎಸ್ ಯರಗುಪ್ಪಿ

ಬೆಂಬಲ ಬೆಲೆ ಯೋಜನೆಯ ಬಗ್ಗೆ ರೈತರಿಗೆ ವ್ಯಾಪಕ ಪ್ರಚಾರ ಕೈಗೊಳ್ಳಬೇಕು. ಹೆಸರುಕಾಳು ಉತ್ಪನ್ನದ ಖರೀದಿಯ ಕಾಲಾವಧಿ, ಖರೀದಿಯ ಪ್ರಮಾಣ, ನೀಡಲಾಗುವ ಕನಿಷ್ಟ ಬೆಂಬಲ ಬೆಲೆ, ಇತ್ಯಾದಿ ಕುರಿತು ಕರಪತ್ರ ಹಾಗೂ ಬ್ಯಾನರ್‌ಗಳ ಮೂಲಕ ಪ್ರಮುಖ ಸ್ಥಳಗಳಲ್ಲಿ ಪ್ರದರ್ಶಿಸಿ ಖರೀದಿಯ ಪ್ರಕ್ರಿಯೆಯನ್ನು ಹೆಚ್ಚು ಪ್ರಚುರಪಡಿಸುವಂತೆ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ ಕಾರ್ಯದರ್ಶಿಗಳಿಗೆ ಹಾಗೂ ಖರೀದಿ ಏಜೆನ್ಸಿಯ ಶಾಖಾ ವ್ಯವಸ್ಥಾಪಕರುಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು

ಖರೀದಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆಯಿಂದ ಕಾರ್ಯನಿರ್ವಹಿಸಲು ಹಾಗೂ ಯಾವುದೇ ಅಹಿತಕರ ಘಟನೆಗಳಿಗೆ ಅಥವಾ ಅನಧೀಕೃತ ಚಟುವಟಿಕೆಗಳಿಗೆ ಆಸ್ಪದ ನೀಡದಂತೆ ಕ್ರಮಕೈಗೊಳ್ಳಲು ಖರೀದಿ ಏಜನ್ಸಿಯವರಿಗೆ ಕಟ್ಟುನಿಟ್ಟಿನ ಸೂಚನೆ ಹಾಗೂ ತಕ್ಷಣವೇ ಎನ್.ಐ.ಸಿ ತಂತ್ರಾಂಶದಲ್ಲಿ ಖರೀದಿ ಪ್ರಕ್ರಿಯೆಯ ಸರ್ಕಾರದ ಆದೇಶದಂತೆ ನೋಂದಣಿ ಕಾರ್ಯವನ್ನು ಪ್ರಾರಂಭಿಸಲು ತಿಳಿಸಲಾಗಿದೆ.

ಇದನ್ನೂ ಓದಿ- K-SET: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಆಗಸ್ಟ್ 28 ರವರೆಗೆ ಅವಕಾಶ..!

ಧಾರವಾಡ, ಹುಬ್ಬಳ್ಳಿ, ಅಣ್ಣಿಗೇರಿ, ಕುಂದಗೋಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಕಾರ್ಯದರ್ಶಿಗಳಿಗೆ ಸಮಿತಿಗಳ ವ್ಯಾಪ್ತಿಯಲ್ಲಿ ಬರುವ ಖರೀದಿ ಕೇಂದ್ರಗಳಿಗೆ ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದ್ದು ಖರೀದಿ ಕೇಂದ್ರಗಳಲ್ಲಿ ಮೇಲ್ವಿಚಾರಣೆ ಮತ್ತು ಸೂಕ್ತ ಪ್ರಚಾರ ಕೈಗೊಂಡು ಖರೀದಿ ಪ್ರಕ್ರಿಯೆಯು ಸುಗಮವಾಗಿ ನಡೆಯಲು ಅವಶ್ಯಕ ಕ್ರಮ ಕೈಗೊಳ್ಳಲು ಅವರಿಗೆ ಸೂಚಿಸಲಾಗಿದೆ.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಉಪನಿರ್ದೇಶಕ ವಿ.ಎಂ.ಲಮಾಣಿ ಅವರು ಸ್ವಾಗತಿಸಿ, ಪ್ರಸ್ತಾವನೆ ಸಲ್ಲಿಸಿ, ಸಭೆ ನಿರ್ವಹಿಸಿದರು.ಸಭೆಯಲ್ಲಿ ಜಿಲ್ಲಾ ಪೊಲೀಸ ವರಿಷ್ಠಾಧಿಕಾರಿ ಡಾ.ಗೋಪಾಲ ಬ್ಯಾಕೋಡ, ಆಹಾರ ಇಲಾಖೆ ಜಂಟಿ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ, ಕೃಷಿ ಇಲಾಖೆ ಜಂಟಿ ಮಿರ್ದೇಶಕ ಡಾ.ಕಿರಣಕುಮಾರ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಕೆ.ಸಿ.ಭದ್ರಣ್ಣವರ, ಧಾರವಾಡ, ನವಲಗುಙದ, ಅಣ್ಣಿಗೇರಿ, ಹುಬ್ಬಳ್ಳಿ, ಕುಂದಗೋಳ ತಹಶಿಲ್ದಾರರು, ಜಿಲ್ಲೆಯ ಎಲ್ಲ ಎಪಿಎಂಸಿ ಮಾರುಕಟ್ಟೆಗಳ ಕಾರ್ಯದರ್ಶಿಗಳು ಭಾಗವಹಿಸಿದ್ದರು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

Trending News