IAS Officer Transfer: 9 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ
IAS Officer Transfer: ಆಯುಷ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಮಂಜುನಾಥ್ ಜೆ ಅವರನ್ನು ಸರ್ವೆ ಸೆಟ್ಲ್‌ಮೆಂಟ್ ಮತ್ತು ಲ್ಯಾಂಡ್ ರೆಕಾರ್ಡ್ಸ್ ಆಯುಕ್ತರ ಹುದ್ದೆಗೆ ವರ್ಗಾಯಿಸಲಾಗಿದೆ.
ಬೆಂಗಳೂರು: 9 ಮಂದಿ ಐಎಎಸ್ ಅಧಿಕಾರಿಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ. ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಯಾರ್ಯಾರು ಎಲ್ಲಿಗೆ ವರ್ಗಾವಣೆ?
ಆಯುಷ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತ ಮಂಜುನಾಥ್ ಜೆ ಅವರನ್ನು ಸರ್ವೆ ಸೆಟ್ಲ್‌ಮೆಂಟ್ ಮತ್ತು ಲ್ಯಾಂಡ್ ರೆಕಾರ್ಡ್ಸ್ ಆಯುಕ್ತರ ಹುದ್ದೆಗೆ ವರ್ಗಾಯಿಸಲಾಗಿದೆ. ಸಣ್ಣ ಮತ್ತು ಮಧ್ಯಮ ಕೈಗಾರಿಕೆ ಇಲಾಖೆಯ ನಿರ್ದೇಶಕರಾಗಿದ್ದ ಸತ್ಯಭಾಮಾ ಸಿ ಅವರನ್ನು ಹಾಸನ ಜಿಲ್ಲೆಯ ಜಿಲ್ಲಾಧಿಕಾರಿಯಾಗಿ, ಗ್ರಾಮೀಣಾಭಿವೃದ್ಧಿ ಇಲಾಖೆಯ ಆಯುಕ್ತರಾಗಿದ್ದ ಶಿಲ್ಪಾ ನಾಗ್ ಅವರನ್ನು ಚಾಮರಾಜನಗರ ಜಿಲ್ಲಾಧಿಕಾರಿಯಾಗಿ ನೇಮಕ ಮಾಡಲಾಗಿದೆ.
ಇದನ್ನೂ ಓದಿ: ಆನ್ ಲೈನ್ ಗೇಮಿಂಗ್ ಕಡಿವಾಣಕ್ಕೆ ಕ್ರಮ: ಸಚಿವ ದಿನೇಶ್ ಗುಂಡೂರಾವ್
ಬಾಗಲಕೋಟೆ ಜಿಪಂ CEO ಭೂಬಾಲನ್ ಟಿ ಅವರನ್ನು ವಿಜಯಪುರ ಜಿಲ್ಲೆಯ ಉಪ ಆಯುಕ್ತರಾಗಿ ನಿಯೋಜಿಸಲಾಗಿದೆ. ಅಲ್ಲದೇ ಇದೇ ಜಿಪಂನ ವಿಜಯಮಹಾಂತೇಶ ಬಿ.ದಾನಮ್ಮನವರ್ ಅವರನ್ನು ಸಹ ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ. ತುಮಕೂರು ಮಹಾನಗರ ಪಾಲಿಕೆ ಆಯುಕ್ತರಾದ ದರ್ಶನ್ ಎಚ್.ವಿ.ಅವರನ್ನು ಐಟಿ ಮತ್ತು ಬಿಟಿ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ.
ಡಾ.ಅನುರಾಧಾ ಕೆ.ಎನ್. ಅವರನ್ನು ಬೆಂಗಳೂರು ಗ್ರಾಮಾಂತರ ಜಿಪಂ CEO ಆಗಿ ವರ್ಗಾವಣೆ ಮಾಡಲಾಗಿದೆ. ಇನ್ನೂ ಅಲ್ಲಿನ ಜಿಪಂ CEO ವರ್ನಿತ್ ನೇಗಿ ಅವರನ್ನು ಕೊಡಗು ಜಿಪಂ CEO ಆಗಿ ವರ್ಗಾವಣೆ ಮಾಡಲಾಗಿದೆ. ಕರ್ನಾಟಕ ನಗರ ಮೂಲಸೌಕರ್ಯ ಅಭಿವೃದ್ಧಿ ಮತ್ತು ಹಣಕಾಸು ನಿಗಮದ ಜಂಟಿ ವ್ಯವಸ್ಥಾಪಕ ನಿರ್ದೇಶಕಿ ಪದ್ಮಾ ಬಸವಂತಪ್ಪ ಅವರನ್ನು ಕೋಲಾರ ಜಿಪಂ CEO ಆಗಿ ವರ್ಗಾವಣೆಗೊಳಿಸಲಾಗಿದೆ.
ಇದನ್ನೂ ಓದಿ: ಹತ್ತು ವರ್ಷದ ಹಗರಣಗಳ ತನಿಖೆ ನಡೆಸಿ : ಬಸವರಾಜ ಬೊಮ್ಮಾಯಿ ಆಗ್ರಹ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.