ಯಡಿಯೂರಪ್ಪ ಪುತ್ರ ಬಿ.ವೈ.ರಾಘವೇಂದ್ರ ರಿಂದ 24 ವರ್ಷದ ವ್ಯಕ್ತಿಯ ಮರಣ
ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ರಾಘವೇಂದ್ರ ಅವರ ಕಾರಿಗೆ ಸಿಲುಕಿ 24 ವರ್ಷದ ವ್ಯಕ್ತಿ ಮೃತ ಪಟ್ಟಿದ್ದಾನೆ.
ಬೆಂಗಳೂರು : ಬಿ.ಎಸ್.ಯಡಿಯೂರಪ್ಪ ಅವರ ಪುತ್ರ ಬಿ.ವೈ.ರಾಘವೇಂದ್ರ ಅವರ ಕಾರಿಗೆ ಸಿಲುಕಿ 24 ವರ್ಷದ ವ್ಯಕ್ತಿ ಮೃತ ಪಟ್ಟಿದ್ದಾನೆ.
ಬಿ.ವೈ.ರಾಘವೇಂದ್ರ ತೆರಳುತ್ತಿದ್ದ ಎಸ್ಯುವಿ ಕಾರಿಗೆ ಢಿಕ್ಕಿ ಹೊಡೆದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಾವಣಗೆರೆ ಜಿಲ್ಲೆಯ ಮಾಧಾಪುರ ಎಂಬ ಸ್ಥಳದಲ್ಲಿ ನಡೆದಿದೆ.
ಶಿಕಾರಿಪುರ ಕ್ಷೇತ್ರದ ಶಾಸಕರಾಗಿರುವ ಬಿ.ವೈ.ರಾಘವೇಂದ್ರ ಅವರ ವಿರುದ್ಧ ಸ್ಥಳೀಯ ಪೊಲೀಸರು ದೂರು ದಾಖಲಿಸಿ ಕೊಂಡಿದ್ದು ವಿಚಾರಣೆ ನಡೆಸುತ್ತಿದ್ದಾರೆ.