ಚಾಮರಾಜನಗರ: ಸಿಹಿ ಎಂದು ಭಾವಿಸಿ ಇರುವೆಗೆ ಸಿಂಪಡಿಸುವ ಪೌಡರ್ ಸೇವಿಸಿ ಐದು ವರ್ಷದ ಬಾಲಕ ಅಸುನೀಗಿರುವ ಹೃದಯ ವಿದ್ರಾವಕ ಘಟನೆ ಚಾಮರಾಜನಗರದ ಕೊಳ್ಳೆಗಾಲ ತಾಲೂಕಿನ ಪುಟ್ಟಿರಮ್ಮನದೊಡ್ಡಿ ಎಂಬ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಕ್ಯಾತೆ ಗೌಡ ಎಂಬುವರ 5 ವರ್ಷದ ಮಗ ಶಿವು ಎಂಬ ಬಾಲಕನೇ ಮೃತ ದುರ್ದೈವಿ ಆಗಿದ್ದು, ಮನೆಯಲ್ಲಿ ಇರುವೆಗಳನ್ನು ನಾಶ ಪಡಿಸಲು ತಂದಿಟ್ಟಿದ್ದ ಇರುವೆ ನಾಶಕವನ್ನು ಸಿಹಿ ತಿಂಡಿ ಎಂದು ತಿಂದಿದ್ದರಿಂದ ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ.
ಇದನ್ನೂ ಓದಿ- ಕಾಂಗ್ರೆಸ್ ಮೊದಲಿನಿಂದಲೂ 500 ರೂ. ಕೊಟ್ಟು ಜನರನ್ನು ಸೇರಿಸುತ್ತಿದೆ..!
ಕ್ಯಾತೆಗೌಡ ತಮ್ಮ ಮನೆಯ ಹಿತ್ತಲಿನ ಕಿಟಕಿಯಲ್ಲಿ ಇರುವೆಗೆ ಸಿಂಪಡಿಸುವ ಔಷಧಿಯನ್ನು ತಂದಿಟ್ಟಿದ್ದರು. ಮಗು ಆಟವಾಡುವ ಸಮಯದಲ್ಲಿ ಸಿಹಿ ತಿಂಡಿ ಇರಬೇಕೆಂದು ತಿಳಿದು ಇರುವೆ ಪುಡಿಯನ್ನು ತಿಂದು ನರಳಾಡುತ್ತಿತ್ತು, ಇದನ್ನು ಗಮನಿಸಿದ ಪೋಷಕರು ತಕ್ಷಣ ಹತ್ತಿರದ ಆಸ್ಪತ್ರೆಗೆ ಕರೆತಂದು ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಕೆಆರ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಗು ಗುರುವಾರ ರಾತ್ರಿ ಸಾವನ್ನಪ್ಪಿದೆ. ಈ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಾಗಿದೆ.
ಇದನ್ನೂ ಓದಿ- ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುಂದುವರೆಸುವುದು ಭಾಜಪ ಸರ್ಕಾರದ ಗುರಿ: ಸಿಎಂ ಬೊಮ್ಮಾಯಿ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.